ಜನರಿಗೆ ಒದಗಿಸುವ ಸೇವೆಗಳನ್ನು ಸುಧಾರಿಸಲು ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಕೇಂದ್ರ ಚಿಂತನೆ ನಡೆಸಿದೆ ಎಂದು ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಸೋಮವಾರ ರಾತ್ರಿ ಪುಣೆ – ಹುಬ್ಬಳ್ಳಿ ನಡುವಿನ ಒಂದೇ ಭಾರತ್ ರೈಲನ್ನು ಸ್ವಾಗತಿಸಲು ಇಲ್ಲಿನ ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸೋಮಣ್ಣ ಕೊಂಕಣ ರೈಲ್ವೆ ಜಾಲವು ಕೇರಳದಿಂದ ಮಹಾರಾಷ್ಟ್ರತನಕವಿದ್ದು, ಕರ್ನಾಟಕ ರಾಜ್ಯ ಒಂದರಲ್ಲಿ ಒಟ್ಟು 742 ಕಿ. ಮೀ ಜಾಗ ಆವರಿಸಿದೆ. ಪ್ರಯಾಣಿಕರಿಗೆ ಹೆಚ್ಚು ಮತ್ತು ಉತ್ತಮ ಸೇವೆಗಳ ಅಗತ್ಯವಿದೆ ಹೀಗಾಗಿ ಭಾರತೀಯ ರೈಲ್ವೆಯೊಂದಿಗೆ ವಿಲೀನವನ್ನು ಪರಿಗಣಿಸಲಾಗುತ್ತಿದೆ ಎಂದು ಸೋಮಣ್ಣ ಒತ್ತಿ ಹೇಳಿದರು.ನಾವು ಕರ್ನಾಟಕ ಕೇರಳ ಮತ್ತು ಗೋವಾ ಸರ್ಕಾರಗಳೊಂದಿಗೆ ಮಾತುಕತೆ ನಡೆಸಿದ್ದೇವೆ, ಮಹಾರಾಷ್ಟ್ರಕ್ಕೆ ಮನವರಿಕೆ ಮಾಡಿದ ನಂತರ ವಿಲೀನ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದರು.
ಕೊಂಕಣ ರೈಲ್ವೆ 1993ರಲ್ಲಿ ಮುಂಬೈಯಿಂದ ಮಂಗಳೂರಿಗೆ ರೈಲ್ವೆ ಸೇವೆ ಆರಂಭಿಸಿದ್ದರೂ, ಇಷ್ಟರ ತನಕ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡಲು ವಿಫಲವಾಗಿದೆ.
ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಂಡರೆ ಉತ್ತಮ ಸೇವೆ, ಸೌಲಭ್ಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಸಿಗಬಹುದು.
.
.
.