April 2, 2025
ಸುದ್ದಿ

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬದ ಆಮಂತ್ರಣ ಪತ್ರಿಕೆ ಧರ್ಮಸ್ಥಳದಲ್ಲಿ ಬಿಡುಗಡೆ

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬವು (125ವರ್ಷ ) ನ. 17 ಮತ್ತು 18ರಂದು ವಕೀಲರ ಸಂಘದ ಆಯೋಜನೆಯಲ್ಲಿ ನಡೆಯಲಿದೆ. ಉಡುಪಿ ನ್ಯಾಯಾಲಯದ ಆವರಣದಲ್ಲಿ ನಡೆಯಲಿರುವ ಶತಮಾನೋತ್ತರ ಬೆಳ್ಳಿ ಹಬ್ಬ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಇಂದು (ಸೆ. 25) ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಶ್ರೀ ಡಾ. ವೀರೇಂದ್ರ ಹೆಗ್ಗಡೆಯವರು ಶ್ರೀ ಮಂಜುನಾಥೇಶ್ವರನ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಉಡುಪಿ ವಕೀಲರ ಸಂಘದ ಅಧ್ಯಕ್ಷ ರೇನೋಲ್ಡ್ ಪ್ರವೀಣ್ ಕುಮಾರ್, ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬ ಕಾರ್ಯಕ್ರಮ ಸಮಿತಿಯ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, , ವಕೀಲರ ಸಂಘದ ಉಪಾಧ್ಯಕ್ಷ ಮಿತ್ರ ಕುಮಾರ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಆರೂರು ಸುಕೇಶ್ ಶೆಟ್ಟಿ, ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ ನಾಗರಾಜ್, ಮತ್ತು ಹಿರಿಯ ನ್ಯಾಯವಾದಿ ಆನಂದ ಮಡಿವಾಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

.

Related posts

ಸಮಾಜ ಸೇವೆಯ ಕಾರ್ಯ ಸಾಧನೆಗೆ  ಸದಾನಂದ ಕಾರ್ಕಳ  ರವರಿಗೆ “ಕಾಯಕ ರತ್ನ ” ಪ್ರಶಸ್ತಿ.

Mumbai News Desk

ತೀಯಾ ಫ್ಯಾಮಿಲಿ ಯು.ಎ.ಇ.ಯ  ವತಿಯಿಂದ ಭಕ್ತಿ ಸಡಗರದ ದುರ್ಗಾ ಪೂಜೆ 

Mumbai News Desk

ದೇಶದ ಅಗ್ರಗಣ್ಯ ಕೈಗಾರಿಕೋದ್ಯಮಿ ರತನ್ ಟಾಟಾ ವಿಧಿವಶ

Mumbai News Desk

ಶ್ರೀ ಶಿವ ಪಂಚಾಕ್ಷರಿ ಭಜನಾ ಮಂದಿರ ಕೊಳ, ಮಲ್ಪೆ – ರಕ್ತದಾನ ಶಿಬಿರ

Mumbai News Desk

ಮೈಲ್ ಸ್ಟೋನ್ ಮಿಸೆಸ್ ಎಷ್ಯಾ ಇಂಟರ್ನೆಷನಲ್ ಪೆಜೇಂಟ್ 2024, ಪ್ರಭಾ ಎನ್ ಸುವರ್ಣ ಅವರಿಗೆ ದ್ವಿತೀಯ ಸ್ಥಾನ.

Mumbai News Desk

ಆರ್ಯಭಟ ಪುರಸ್ಕೃತ ಕೆ.ಕೆ. ಶೆಟ್ಟರಿಗೆ ಹುಟ್ಟೂರ ಅಭಿನಂದನೆ

Mumbai News Desk