ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ.
ಬಾಲಿವುಡ್ ನ ಸೂಪರ್ ಸ್ಟಾರ್ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಮಿಥುನ್ ಚಕ್ರವರ್ತಿ ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ವಿಶಿಷ್ಟ ಕೊಡುಗೆಗಾಗಿ ಮಿಥುನ್ ಚಕ್ರವರ್ತಿ ಅವರು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಈ ಬಗ್ಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.
ಬಾಲಿವುಡ್ ನ ಮೊದಲ ಡಿಸ್ಕೋ ಡ್ಯಾನ್ಸರ್ ಎಂದು ಕರೆಯಲ್ಪಡುವ ಮಿಥುನ್ ಚಕ್ರವರ್ತಿ ಹೀರೋಗಳ ಡ್ಯಾನ್ಸ್ ಸ್ಟೈಲ್ ಅನ್ನು ಸಿನಿಮಾಲೋಕಕ್ಕೆ ಹೊಸ ರೀತಿಯಲ್ಲಿ ಪರಿಚಯಿಸಿದವರು, ಜನರು ಇದನ್ನು ಬಹಳವಾಗಿ ಮೆಚ್ಚಿಕೊಂಡಿದ್ದರು. ಅಭಿಮಾನಿಗಳು ಪ್ರೀತಿಯಿಂದ ಜಿಮ್ಮಿ ಎಂದೆ ಕರೆಯಲ್ಪಡುವ ಮಿಥುನ್ ಅವರು ಭಾರತ ಮಾತ್ರವಲ್ಲದೆ ರಷ್ಯಾ, ಚೀನಾ, ಜಪಾನ್ ಮುಂತಾದ ಹಲವು ದೇಶಗಳಲ್ಲಿಯೂ ಅಭಿಮಾನಿಗಳನ್ನು ಹೊಂದಿದ್ದಾರೆ.
ಮಿಥುನ್ ದಾ ಅವರ ಗಮನಾರ್ಹ ಸಿನಿಮೀಯ ಪ್ರಯಾಣವು ಪೀಳಿಗೆಗೆ ಸ್ಪೂರ್ತಿ ನೀಡುತ್ತದೆ, ದಾದಾಸಾಹೇಬ್ ಫಾಲ್ಕೆ ಆಯ್ಕೆ ತೀರ್ಪುಗಾರರ ಸಮಿತಿಯು ಭಾರತೀಯ ಚಿತ್ರರಂಗಕ್ಕೆ ನೀಡಿದ ವಿಶಿಷ್ಟ ಕೊಡುಗೆಗಾಗಿ ಶ್ರೇಷ್ಠ ನಟ ಮಿಥುನ್ ಚಕ್ರವರ್ತಿ ಅವರಿಗೆ ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದೆ ಎಂದು ಘೋಷಿಸಲು ನಾನು ಹೆಮ್ಮೆಪಡುತ್ತೇನೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ .ಅಕ್ಟೋಬರ್ 8ರಂದು ರಂದು 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನಿಸಲಾಗುವುದು.
.
.
.