ಪಟ್ಲರು ಯಕ್ಷಗಾನವನ್ನು ಜಗತ್ತಿಗೆ ಪತರಿಸಿದ ಮಹಾನ್ ಸಾಧಕ: ಐಕಳ ಹರೀಶ್ ಶೆಟ್ಟಿ
ಮಂಗಳೂರು . ಯಕ್ಷದ್ರುವ ಪಟ್ಲ ಫೌಂಡೇಶನ್ ನ ಅಧ್ಯಕ್ಷರು, ಯಕ್ಷದ್ರುವ ಕೊ-ಆಪರೇಟಿವ್ ಸೊಸೈಟಿ ಅಧ್ಯಕ್ಷರು ಆಗಿರುವ ಪಟ್ಲ ಸತೀಶ್ ಶೆಟ್ಟಿಯವರು ಅಮೇರಿಕಾದ 22 ದೇಶಗಳಲ್ಲಿ ನಡೆಸಿದ ಯಕ್ಷ ಯಾನದ ಯಶಸ್ವಿಗಾಗಿ ನಡೆಸಿ ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಕಾವೂರು ಶ್ರೀ ಹಿಲ್ ಸೈಡ್ ಸಭಾಂಗಣದಲ್ಲಿ ನಡೆದ
ಯಕ್ಷದ್ರುವ ಕೊ-ಆಪರೇಟಿವ್ ಸೊಸೈಟಿ ಆಯೋಜಿಸಿದ ಕಾರ್ಯಕ್ರಮದಲ್ಲಿ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಪಟ್ಲ ಸತೀಶ್ ಶೆಟ್ಟಿ ದಂಪತಿಗಳನ್ನು ಸನ್ಮಾನಿಸಿ ಗೌರವಿಸಿದರು.*
ಬಳಿಕ ಮಾತನಾಡಿದ ಐಕಳ ಹರೀಶ್ ಶೆಟ್ಟಿ ಪಟ್ಲರ ಸಾಧನೆ ಜಗತ್ತು ಗುರುತಿಸಿದೆ ಯಕ್ಷಗಾನವನ್ನು ಜಗತ್ತಿಗೆ ಪಸರಿಸಿ ಇತಿಹಾಸ ನಿರ್ಮಿಸಿದ್ದಾರೆ. ಇದು ನಮ್ಮ ಊರಿಗೆ ಗೌರವವಾಗಿದೆ. ಎಂದು ನುಡಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಪೋಷಕರು ಹಾಗೂ ಪಟ್ಲ ಫೌಂಡೇಶನ್ ನ ಮಾರ್ಗದರ್ಶಕರಾದ ಸವಣೂರು ಸೀತಾರಾಮ್ ರೈ, ಸುಧಾಕರ್ ಪೂಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ರವಿರಾಜ್ ಶೆಟ್ಟಿ ನಿಟ್ಟೆಗುತ್ತು,ಸಂತೋಷ್ ಕುಮಾರ್ ಶೆಟ್ಟಿ, ಲೋಕೇಶ್ ಭರಣಿ, ಪುರುಷೋತ್ತಮ್ ಭಂಡಾರಿ, ರವಿಚಂದ್ರ ಶೆಟ್ಟಿ, ಕೊಲ್ಲಾಡಿ ಬಾಲಕೃಷ್ಣ ರೈ, ಆರತಿ ಆಳ್ವ, ತನುಜ ಕೆ.ಅಡ್ಯoತಾಯ ಮತ್ತು ಇನ್ನಿತರರು ಉಪಸ್ಥಿತರಿದ್ದರು.
ಈ ವೇಳೆ ತಮ್ಮ ಅಮೇರಿಕ ಪ್ರವಾಸದ ಕಥನವನ್ನು ಹಂಚಿಕೊಂಡ ಸತೀಶ್ ಶೆಟ್ಟಿ ಅವರು ವಿದೇಶಗಳಲ್ಲಿ ತುಳುನಾಡಿನ ಗಂಡುಮೆಟ್ಟಿನ ಕಲೆಯಾಗಿರುವ ಯಕ್ಷಗಾನ ಪ್ರದರ್ಶನ ಮತ್ತು ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು ಹೆಮ್ಮೆ ಅನಿಸುತ್ತಿದೆ. ಅಲ್ಲಿನ ಜನರು ಕೂಡ ಯಕ್ಷಗಾನ ನಾಟ್ಯ ಮತ್ತು ಭಾಗವತಿಕೆಗೆ ಮನಸೋತು ಕಲಿಯಲು ಆಸಕ್ತಿ ತೋರಿಸಿರುವುದು ಖುಷಿಯ ವಿಚಾರ”. ಇದು ಅವಿಸ್ಮರಣೀಯ ಅನುಭವ. ನಮ್ಮ ಕಲೆಗೆ ಇಂದು ವಿಶ್ವವ್ಯಾಪಿ ಮನ್ನಣೆ ಸಿಗುತ್ತಿದೆ. ಪಟ್ಲ ಫೌಂಡೇಷನ್ ಟ್ರಸ್ಟ್ ಅಮೇರಿಕಾ ಘಟಕದ ಅಧ್ಯಕ್ಷ ಡಾ.ಅರವಿಂದ ಉಪಾಧ್ಯಾಯ, ಡಾ. ಶ್ರೀಧರ ಆಳ್ವ, ಮಹಾಬಲ ಶೆಟ್ಟಿ, ಉಳಿ ಯೋಗೇಂದ್ರ ಭಟ್ ಮತ್ತಿತರ ಪ್ರಮುಖರು ಅಮೆರಿಕದ 20 ರಾಜ್ಯಗಳಲ್ಲಿ ಯಕ್ಷಗಾನ ಪ್ರದರ್ಶನ ಆಯೋಜಿಸಿದ್ದರು ಅವರಿಗೆ ಧನ್ಯವಾದಗಳು” ಎಂದರು.
ಅಮೇರಿಕ ಪ್ರವಾಸ ಕೈಗೊಂಡಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು ತಮ್ಮ ತಂಡದ ಜೊತೆ ಮಂಗಳವಾರ ತಾಯ್ನಾಡಿಗೆ ಮರಳಿದ್ದು .ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ 9 ಮಂದಿಯ ತಂಡ ಅಮೇರಿಕ ದೇಶದ ಬೇರೆ ಬೇರೆ ತಾಣಗಳಲ್ಲಿ ಯಕ್ಷಗಾನ ಪ್ರದರ್ಶಿಸಿ 75 ದಿನಗಳ ಬಳಿಕ ತಾಯ್ನಾಡಿಗೆ ಬಂದಿದ್ದಾರೆ.