32 C
Mumbai
March 7, 2026
Mumbai News Kannada
ಸುದ್ದಿ

ಮುಂಬೈ: ಮನೆಗೆ ಬೆಂಕಿ ತಗುಲಿ ಕುಟುಂಬದ ಐವರು ಸಾವು





ಮುಂಬೈನ ಚೆಂಬೂರಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಅಪಘಾತದಲ್ಲಿ 5 ಮಂದಿ ಸಜೀವ ದಹನವಾಗಿರುವ ಬಗ್ಗೆ ವರದಿಯಾಗಿದೆ. ಇಂದು ಮುಂಜಾನೆ ಚೆಂಬೂರ್ ಪೂರ್ವ ಸಿದ್ಧಾರ್ಥ್ ಕಾಲೋನಿಯಲ್ಲಿರುವ ಅಂಗಡಿಯೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಇಡೀ ಅಂಗಡಿಗೆ ಬೆಂಕಿ ಆವರಿಸಿದ್ದು, ಅದರ ಮೇಲಿನ ಮಹಡಿಯಲ್ಲಿ ವಾಸಿಸುತ್ತಿದ್ದ ಕುಟುಂಬದ ಐವರು ಸುಟ್ಟು ಕರಕಲಾಗಿದ್ದಾರೆ.

ಬೆಂಕಿ ಅವಘಡದ ಬಗ್ಗೆ ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಒಳಗೆ ಸಿಲುಕಿದ್ದವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಗ್ರೌಂಡ್ ಪ್ಲಸ್ ಒನ್ (ಜಿ+1) ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿಯ ಪ್ರಕಾರ, ಬೆಂಕಿ ಮೀಟರ್ ಬಾಕ್ಸ್‌ಗೆ ತಗುಲಿತು ಮತ್ತು ಶೀಘ್ರದಲ್ಲೇ ಕಟ್ಟಡದ ಇತರ ಭಾಗಗಳಿಗೆ ಹರಡಿತು. ನೆಲ ಮಹಡಿಯಲ್ಲಿ ಅಂಗಡಿಯಿದ್ದು, ಮೇಲಿನ ಮಹಡಿಯಲ್ಲಿ ಕುಟುಂಬ ವಾಸವಾಗಿತ್ತು.



Related posts

ಮೀರಾರೋಡ್ ಗೌರವ್ ಕರ್ಕೇರ ಸಿ.ಎ ಉತ್ತೀರ್ಣ.

Mumbai News Desk

77ನೇ ಗಣರಾಜ್ಯೋತ್ಸವದ ಸಂಭ್ರಮ: ಭಾರತದ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

Mumbai News Desk

ಅಮೂಲ್ಯ ಪತ್ರಿಕೆಯ 25ರ ಸಂಭ್ರಮಾಚರಣೆಯಲ್ಲಿ ಸಂಭ್ರಮಿಸಿದ ಕವಿ ಗೋಷ್ಠಿ.

Mumbai News Desk

ಸಂಘಟಕ, ಕಲಾ ಪೋಷಕ ರಾಜು ಮೆಂಡನ್ ವಂಡ್ಸೆ ಅವರಿಗೆ ಮಾತೃ ವಿಯೋಗ.

Mumbai News Desk

ಮುಂಬೈಯಲ್ಲಿ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಅವರ ಷಷ್ಠಬ್ದಿ ಮಹೋತ್ಸವದ ನಿಮ್ಮಿತ ಧಾರ್ಮಿಕ ಕಾರ್ಯಕ್ರಮಗಳು ಆರಂಭ.

Mumbai News Desk

ನಿಡ್ಲೆ ಗೋವಿಂದ ಭಟ್ ಮತ್ತು ಪುತ್ತಿಗೆ ಕುಮಾರ ಗೌಡ ರಿಗೆ ಕಾಂತಾವರ ಯಕ್ಷದೇಗುಲ ಪ್ರಶಸ್ತಿ

Mumbai News Desk