32 C
Mumbai
March 7, 2026
Mumbai News Kannada
ಸುದ್ದಿ

ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ





ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ
ಶಬರಿಮಲೆ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಗೆ ಮುನ್ನ ಕೇರಳ ಸರ್ಕಾರವು ಈ ಬಾರಿ ಆನ್‌ಲೈನ್ ಬುಕಿಂಗ್ ಮೂಲಕ ಯಾತ್ರಾರ್ಥಿಗಳಿಗೆ ಅವಕಾಶ ನೀಡಲು ನಿರ್ಧರಿಸಿದೆ. ದಿನಕ್ಕೆ ಗರಿಷ್ಠ 80,000 ಭಕ್ತರಿಗೆ ಅವಕಾಶ ಕಲ್ಪಿಸುವ ಸೌಲಭ್ಯ ಕಲ್ಪಿಸಲಾಗುವುದು.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಾರಿ ಶಬರಿಮಲೆಯಲ್ಲಿ ಸ್ಪಾಟ್ ಬುಕ್ಕಿಂಗ್ ಇರುವುದಿಲ್ಲ. ಯಾತ್ರಿಗಳು ಬುಕ್ ಮಾಡದೆ ಬಂದರೆ ನಾವು ಪರಿಶೀಲಿಸುತ್ತೇವೆ.

ನಿಲಕ್ಕಲ್ ಮತ್ತು ಎರುಮೇಲಿಯಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ದೇವಸ್ವಂ ಸಚಿವ ವಿಎನ್ ವಾಸವನ್ ಹೇಳಿದ್ದಾರೆ. ಯಾತ್ರಿಕರಿಗೆ ಬುಕಿಂಗ್ ಸಮಯದಲ್ಲಿ ಪ್ರಯಾಣದ ಮಾರ್ಗವನ್ನು ಆಯ್ಕೆ ಮಾಡುವ ಅವಕಾಶವನ್ನು ಒದಗಿಸಲಾಗುತ್ತದೆ. ಹೀಗಾಗಿ, ಯಾತ್ರಿಕರು ಕಡಿಮೆ ದಟ್ಟಣೆ ಇರುವ ಮಾರ್ಗವನ್ನು ಆಯ್ಕೆ ಮಾಡಬಹುದು.

ಸಾಂಪ್ರದಾಯಿಕ ಅರಣ್ಯ ಮಾರ್ಗದಲ್ಲಿ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಜನದಟ್ಟಣೆ ಇರುವ ಸಮಯದಲ್ಲಿ ವಾಹನಗಳನ್ನು ನಿಯಂತ್ರಿಸಬೇಕಾದರೆ ಕೇಂದ್ರಗಳನ್ನು ಗುರುತಿಸಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುವುದು.

ಕಳೆದ ವರ್ಷ ಲಕ್ಷಾಂತರ ಭಕ್ತರು ದರ್ಶನಕ್ಕೆ ಆಗಮಿಸಿದ್ದರು. ಆದ್ದರಿಂದ ನಿರ್ವಹಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳದ ಕಾರಣ ಭಾರಿ ಅವ್ಯವಸ್ಥೆ ಉಂಟಾಗಿತ್ತು. ಭಕ್ತರು ದಿನಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿತ್ತು, ಸರ್ಕಾರದ ವಿರುದ್ಧ ಆಕ್ರೋಶಗಳು ಭುಗಿಲೆದ್ದಿದ್ದವು. ಈ ಹಿನ್ನೆಲೆ ಭಕ್ತರ ನಿರ್ವಹಣೆ ಸಮರ್ಪಕ ಆಗಿಸುವ ಹಿನ್ನೆಲೆ ಆನ್‌ಲೈನ್‌ನಲ್ಲಿ ಟಿಕೆಟ್‌ ಬುಕ್ ಮಾಡಿದವರಿಗೆ ಮಾತ್ರ ಅವಕಾಶ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ.

ಶಬರಿಮಲೆಗೆ ಹೋಗುವ ರಸ್ತೆಗಳು ಮತ್ತು ಪಾರ್ಕಿಂಗ್ ಮೈದಾನಗಳ ದುರಸ್ತಿ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು. ಶಬರಿ ಅತಿಥಿ ಗೃಹ ನಿರ್ವಹಣೆ ಅಕ್ಟೋಬರ್ 31ಕ್ಕೆ ಪೂರ್ಣಗೊಳ್ಳಲಿದ್ದು, ಪ್ರಣವಂ ಅತಿಥಿ ಗೃಹದ ನವೀಕರಣ ಪೂರ್ಣಗೊಂಡಿದೆ.



Related posts

ಧನರಾಜ್ ಗಾಣಿಗ IBBFF ActiveFit IFBB MR UNIVERSE 2024 ಇಂಡಿಯಾ ಚಾಂಪಿಯನ್ ಆಫ್ ಚಾಂಪಿಯನ್ಸ್

Mumbai News Desk

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ನಿಧನ

Mumbai News Desk

ಕನ್ನಡ ಸಂಘ ಬಹರೈನ್‌ಗೆ ಒಂದು ಕೋಟಿ ರೂಪಾಯಿಗಳ ಅನುದಾನ – ಮುಖ್ಯಮಂತ್ರಿಗಳ ಅನುಮೋದನೆ

Mumbai News Desk

ಡಾ| ಆರ್ ಕೆ ಶೆಟ್ಟಿಯವರಿಗೆ ಎಲ್ಐಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಸಾಧಕ ಗೌರವ

Mumbai News Desk

ಮಹಾರಾಷ್ಟ್ರ, ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ : ನ. 20 ರಂದು ರಾಜ್ಯದಲ್ಲಿ ಮತದಾನ

Mumbai News Desk

ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ- ಪಟ್ಲ ಸತೀಶ್ ಶೆಟ್ಟಿ

Mumbai News Desk