23.5 C
Karnataka
April 4, 2025
ತುಳುನಾಡು

ಅದ್ಧೂರಿಯಾಗಿ ನಡೆದ ಮಂಗಳೂರು ದಸರಾ; ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ



ಜಗತ್ ಪ್ರಸಿದ್ಧ ಮಂಗಳೂರು ದಸರಾ ಮೆರವಣಿಗೆ ಭಾನುವಾರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಸಂಜೆ 4 ಗಂಟೆಗೆ ಆರಂಭಗೊಂಡಿತು. ಸುಮಾರು 60ಕ್ಕೂ ಅಧಿಕ ಸ್ತಬ್ಧಚಿತ್ರಗಳು ಈ ದಸರಾ ಮೆರವಣಿಗೆಗೆ ಮೆರುಗು ನೀಡಿತು. ದೇಶ – ವಿದೇಶಗಳಿಂದ ಬಂದ ಲಕ್ಷಾಂತರ ಮಂದಿ ಭಕ್ತರು ಈ ದಸರಾ ಮೆರವಣಿಗೆಗೆ ಸಾಕ್ಷಿಯಾದರು.
ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಕಳೆದ 10 ದಿನಗಳಿಂದ ಅದ್ಧೂರಿಯಾಗಿ ನಡೆದ ನವರಾತ್ರಿ ಮಹೋತ್ಸವಕ್ಕೆ ದಸರಾ ಮೆರವಣಿಗೆಯೊಂದಿಗೆ ತೆರೆ ಕಾಣಲಿದೆ. ಅಕ್ಟೋಬರ್ 3 ರಂದು ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ದೀಪ ಬೆಳಗಿಸುವುದರೊಂದಿಗೆ ಆರಂಭಗೊಂಡ ಈ ದಸರಾ ಮೆರವಣಿಗೆ ಇಂದು ಬೃಹತ್ ಮೆರವಣಿಗೆಯೊಂದಿಗೆ ಸಂಪನ್ನಗೊಳ್ಳಲಿದೆ. ಸಂಜೆ ಸುಮಾರು 4 ಗಂಟೆಗೆ ಕ್ಷೇತ್ರದಿಂದ ಹೊರಟ ಈ ಬೃಹತ್ ದಸರಾ ಮೆರವಣಿಗೆಯಲ್ಲಿ ವಿಘ್ನನಿವಾರಕ ಗಣೇಶ, ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾ ಮಾತೆಯರ ಮೂರ್ತಿಗಳನ್ನು ಸ್ತಬ್ಧ ಚಿತ್ರದೊಂದಿಗೆ ಕೊಂಡೊಯ್ಯಲಾಯಿತು. ದಸರಾ ಮಹೋತ್ಸವದ ರೂವಾರಿ ಬಿ.ಜನಾರ್ದನ ಪೂಜಾರಿ ನೇತೃತ್ವದಲ್ಲಿ ಈ ಬೃಹತ್ ದಸರಾ ಮೆರವಣಿಗೆ ನಡೆಯುತ್ತಿದೆ. ಸರ್ಕಾರದ ಯಾವುದೇ ಅನುದಾನವಿಲ್ಲದೆ ಇಷ್ಟು ಅಚ್ಚುಕಟ್ಟಾಗಿ ನಡೆಯುವ ಈ ದಸರಾವನ್ನು ಭಕ್ತರ ಸಹಕಾರದಿಂದ ಅದ್ಧೂರಿಯಾಗಿ ನಡೆಸಲಾಗುತ್ತದೆ.

Related posts

ಮುಲ್ಕಿ ಸೀಮೆಯ ಅರಸು ಕಂಬಳಕ್ಕೆ ಚಾಲನೆ. ಕಂಬಳ ತುಳುನಾಡಿನ ಸಂಸ್ಕೃತಿಯ ಪ್ರತೀಕ:ಐಕಳ ಹರೀಶ್ ಶೆಟ್ಟಿ

Mumbai News Desk

ಸಾಲ್ಯಾನ್ ಮೂಲಸ್ಥಾನ ಕದಿಕೆ, ಹಳೆಯಂಗಡಿ – ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ, ಪ್ರೋತ್ಸಾಹ ಧನ ವಿತರಣೆ.

Mumbai News Desk

ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 18ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳ ದತ್ತು ಸ್ವೀಕರ

Mumbai News Desk

ಹೊಸ ಅಂಗಣ ತಿಂಗಳ ಕಾರ್ಯಕ್ರಮ : ಕಿಟ್ಟ ಪಂಬದರಿಗೆ ಸನ್ಮಾನ

Mumbai News Desk

ಹೆಜಮಾಡಿ ಬಿಲ್ಲವ ಸಂಘದಲ್ಲಿ ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ

Mumbai News Desk

“ಉಡುಪಿ ಆಂಥೆಮ್” ಉಡುಪಿ ಬಗ್ಗೆ ಸುಂದರ ಗೀತೆಯ ವಿಡಿಯೋ ಬಿಡುಗಡೆ

Mumbai News Desk