ಮುಂಬಯಿ : ಕರ್ನಾಟಕ ಕರಾವಳಿ ಜಿಲ್ಲೆಗಳ ಅಭಿವೃದ್ದಿಗಾಗಿ ಕಳೆದ 24 ವರ್ಷಗಳಿಂದ ಕ್ರಿಯಾಶೀಲವಾಗಿರುವ ಏಕೈಕ ಸರಕಾರೇತರ ಸಂಘಟನೆ ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಯ 24ನೇ ವಾರ್ಷಿಕ ಮಹಾಸಭೆಯು ಅ. 26 ರಂದು ಸಂಜೆ 6 ಗಂಟೆಗೆ ಸರಿಯಾಗಿ ಪೆನಿನ್ಸುಲಾ ಗ್ರಾಂಡ್ ಹೋಟೆಲು, ಸಾಕಿನಾಕಾ, ಮುಂಬಯಿ ಇಲ್ಲಿ ಸಮಿತಿಯ ಸಂಸ್ಥಾಪಕರಾದ ತೋನ್ಸೆ ಜಯಕೃಷ್ಣ ಶೆಟ್ಟಿ ಯವರ ಉಪಸ್ಥಿತಿಯಲ್ಲಿ, ಅಧ್ಯಕ್ಷರಾದ ಎಲ್. ವಿ. ಅಮೀನ್ ರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಸಮಿತಿಯ 25 ನೇ ವರ್ಷದ ಬೆಳ್ಳಿ ಹಬ್ಬಕ್ಕೆ ಚಾಲನೆ ನೀಡಲಿದ್ದು ಸಮಿತಿಯ ಸದಸ್ಯರು ಸಮಯಕ್ಕೆ ಸರಿಯಾಗಿ ಆಗಮಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕಾಗಿ ಸಮಿತಿಯ ಪರವಾಗಿ ಗೌರವ ಪ್ರಧಾನ ಕಾರ್ಯದರ್ಶಿ ಮುಂಡ್ಕೂರು ಸುರೇಂದ್ರ ಸಾಲ್ಯಾನ್ ಹಾಗೂ ಗೌರವ ಕೋಶಾಧಿಕಾರಿ ತುಳಸಿದಾಸ್ ಅಮೀನ್ ವಿನಂತಿಸಿದ್ದಾರೆ.

previous post