ಮುಂಬಯಿ : ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜೆಲ್ಲೆಯ ಅಧ್ಯಕ್ಷ ಡಿ. ಆರ್. ರಾಜು (೬೪) ಇವರು ನ. ೧೭ ರಂದು ರಾತ್ರಿ ಹೃದಯಘಾತದಿಂದಾಗಿ ನಿಧನ ಹೊಂದಿರುವರು. ಮೃತರು ಪತ್ನಿ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಖ್ಯಾತ ಸಮಾಜ ಸೇವಕರಾಗಿದ್ದ ಇವರು ಕಾರ್ಕಳ ಬಿಲ್ಲವ ಸೇವಾ ಸಂಘದ ಅಧ್ಯಕ್ಷರಾಗಿ, ಕಾಂಗ್ರೆಸ್ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಾ, ಓರ್ವ ಸಮಾಜ ಸೇವಕ ಹಾಗೂ ಕೊಡುಗೈ ದಾನಿಯಾಗಿ ಗುರುತಿಸಿಕೊಂಡಿದ್ದರು.
ಗಣ್ಯರ ಸಂತಾಪ
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜೆಲ್ಲೆಯ ಅಧ್ಯಕ್ಷರಾಗಿದ್ದ ಅವರು, ಬಣಗಲ್ ರಶ್ಮಿ ಎಸ್ಟೇಟ್ ಮತ್ತು ರಶ್ಮಿ ಕನ್ಸ್ಟ್ರಕ್ಷನ್ ನ ಮಾಲಕ ಡಿ. ಆರ್. ರಾಜು ಅವರು ಒರ್ವ ನಿಸ್ವಾರ್ಥ ಸಮಾಜ ಸೇವಕರಾಗಿದ್ದು ಕರ್ನಾಟಕ ಕರಾವಳಿಯ ಉಭಯ ಜಿಲ್ಲೆಗಳ ಅಭಿವೃದ್ದಿಗಾಗಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಮೂಲಕ ದುಡಿಯುತ್ತಾ ಬಂದಿದ್ದು ಇವರ ಅಗಲಿಕೆಯು ಸಮಿತಿಗೆ ತುಂಬಲಾರದ ನಷ್ಟವಾಗಿದೆ ಎಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ತೋನ್ಸೆ ಜಯಕೃಷ್ಣ ಎ. ಶೆಟ್ಟಿ, ಅಧ್ಯಕ್ಷರಾದ ನಿತ್ಯಾನಂದ ಡಿ. ಕೋಟ್ಯಾನ್ , ನಿಕಟಪೂರ್ವ ಅಧ್ಯಕ್ಷ ಎಲ್. ವಿ. ಅಮೀನ್, ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿ ಮುಂಡ್ಕೂರು ಸುರೇಂದ್ರ ಸಾಲ್ಯಾನ್, ಸಮಿತಿಯ ಉಪಾಧ್ಯಕ್ಷರುಗಳು, ಮಾಜಿ ಅಧ್ಯಕ್ಷರುಗಳು, ಕಾರ್ಯಕಾರಿ ಸಮಿತಿ ಹಾಗು ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರುಗಳು, ಸಮಿತಿಯ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಇವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
