ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಗೆ ಮತದಾನ ನಡೆದಿದ್ದು, ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿದ್ದಾರೆ.
ಇಡೀ ದೇಶದ ಗಮನಸೆಳೆದಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರಿಗೆ ಗೆಲುವಾಗಿದ್ದು, ನಿಖಿಲ್ ಕುಮಾರಸ್ವಾಮಿ ಅವರು ಸೋತಿದ್ದಾರೆ . ಇದು ನಿಖಿಲ್ ಕುಮಾರಸ್ವಾಮಿ ಅವರ ಮೂರನೆ ಸೋಲಾಗಿದೆ.
ಸಂಡೂರು ಕ್ಷೇತ್ರ ಉಪಚುನಾವಣೆ ವ್ಯಕ್ತಿ ಪ್ರತಿಷ್ಠೆಗೆ ಸಾಕ್ಷಿಯಾಗಿದ್ದು, ಇದೀಗ ಫಲಿತಾಂಶ ಪ್ರಕಟವಾಗಿದ್ದು ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ ತುಕಾರಾಂ ಅವರಿಗೆ ಗೆಲುವಾಗಿದೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಅವರು ಪರಭವಗೊಂಡಿದ್ದಾರೆ.
ಇನ್ನು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರತಿಷ್ಠೆಯ ಕಾಣವಾಗಿದ್ದ ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ನ ಯಾಸಿರ್ ಅಹಮದ್ ಖಾನ್ ಪಠಾಣ್ ಅವರು ಬಿಜೆಪಿಯ ಭರತ್ ಬೊಮ್ಮಯಿ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಎಲ್ಲಾ ಮೂರೂ ಕ್ಷೇತ್ರಗಳಲ್ಲಿ ಆಡಳಿತರೂಢ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆ ಉಂಟಾಗಿದೆ.

previous post