ಮುಖ್ಯ ಮಂತ್ರಿ ಹುದ್ದೆ ಬಗ್ಗೆ ಬಿಜೆಪಿ ನಿರ್ಧಾರ ತೆಗೆದುಕೊಳ್ಳುತ್ತದೆ. ಅದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ, ಮೈತ್ರಿ ಕೂಟದಲ್ಲಿ ಯಾವುದೇ ಬಿನ್ನಾಭಿಪ್ರಾಯವಿಲ್ಲ ಎಂದು ಶಿವಸೇನಾ (ಶಿಂಧೆ ಬಣ )ನಾಯಕ, ನಿರ್ಗಮಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.
ತಮ್ಮ ಸ್ವಗ್ರಾಮ ಡೇರ್ ತಾಂಬ್ ನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ನೂತನ ಸರಕಾರ ರಚನೆಯ ಬಗ್ಗೆ ಮಾತುಕತೆಗಳು ನಡೆಯುತಿವೆ. ಮಹಾಯುತಿ ಮೈತ್ರಿಕೂಟದ ಮಿತ್ರ ಪಕ್ಷಗಳಾದ ಬಿಜೆಪಿ, ಶಿವಸೇನೆ, ಎನ್ ಸಿ ಪಿ ಒಮ್ಮತದ ಮೂಲಕ ಎಲ್ಲಾ ನಿರ್ಧಾರ ತೆಗೆದುಕೊಳ್ಳುತೇವೆ ಎಂದು ಶಿಂಧೆ ಮಾಹಿತಿ ನೀಡಿದರು.
ಅಸಮಾಧಾನಗೊಂಡು ಸ್ವಗ್ರಾಮಕ್ಕೆ ತೆರಳಿದ್ದಾರೆ ಎಂಬ ವದಂತಿಗೆ ಪ್ರತಿಕ್ರಿಯಿಸಿದ ಶಿಂಧೆ ಅವರು “ನಾನು ನನ್ನ ಗ್ರಾಮಕ್ಕೆ ನಿಯಮಿತವಾಗಿ ಭೇಟಿ ನೀಡುತಿರುತ್ತೇನೆ. ಮುಖ್ಯಮಂತ್ರಿ ಹುದ್ದೆ ಬಗ್ಗೆ ಕಳೆದ ವಾರವೇ ನನ್ನ ನಿಲುವನ್ನು ಸ್ಪಷ್ಟ ಪಡಿಸಿದರೂ ಈ ಗೊಂದಲವೇಕೆ? ನಾವು ಜನರ ಅಶೋತ್ತರಗಳನ್ನು ಈಡೇರೇಸುತ್ತೇವೆ, ನಮ್ಮ ನಡುವೆ ಯಾವುದೇ ಬಿನ್ನಾಭಿಪ್ರಾಯವಿಲ್ಲ ಎಂದ ಶಿಂಧೆ ಅವರು ಮುಖ್ಯಮಂತ್ರಿ ಹುದ್ದೆ ಬಗ್ಗೆ ಬುಗಿಲೆದ್ದ ಎಲ್ಲಾ ಗೊಂದಲಗಳಿಗೆ ತೆರೆ ಎಳೆದರು.
