ಮಹಾರಾಷ್ಟ್ರ: ಫಡ್ನವಿಸ್ ಮಹಾರಾಷ್ಟ್ರದ ನೂತನ ಸಿಎಂ, ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ.
ದೇವೇಂದ್ರ ಫಡ್ನವಿಸ್ ಅವರು ಡಿಸೆಂಬರ್ 5ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅವರ ಹೆಸರನ್ನು ಅಂತಿಮ ಗೊಳಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದೆ.. ಮಹಾರಾಷ್ಟ್ರ ವಿಧಾನ ಭವನದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರು ಆಯ್ಕೆಯ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಸಭೆಯಲ್ಲಿ ಮಾಜಿ ರಾಜ್ಯ ಸಚಿವ ಸುಧೀರ್ ಮುಂಗಂಟಿವಾರ್ ಅವರು ಫಡ್ನವಿಸ್ ಅವರ ಹೆಸರನ್ನು ಪ್ರಸ್ತಾವಿಸುವ ಮೂಲಕ ಮುಂದಿನ ಮಹಾರಾಷ್ಟ್ರ ಸಿಎಂ ಕುರಿತು ಸುದೀರ್ಘ ಕಾಲದ ಸಸ್ಪೆನ್ಸ್ ಅಂತ್ಯಗೊಂಡಿದೆ.
ಹೊಸ ಬಿಜೆಪಿ- ಶಿವಸೇನೆ- ಎನ್ ಸಿ ಪಿ ಮಹಾಯುತಿ ಸರ್ಕಾರದ ಉನ್ನತ ಹುದ್ದೆಗೆ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮುಂಚೂಣಿಯಲ್ಲಿದ್ದರು.
ಫಡ್ನವಿಸ್ ಇತರ ಮಹಾಯುತಿ ನಾಯಕರೊಂದಿಗೆ ರಾಜ್ಯದಲ್ಲಿ ಸರ್ಕಾರ ರಚಿಸಲು ಹಕ್ಕು ಸಾಧಿಸಲು ಶೀಘ್ರದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡುವ ನಿರೀಕ್ಷೆ ಇದೆ. ದೇವೇಂದ್ರ ಫಡ್ನವಿಸ್ ಡಿ. 5ರಂದು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ ಸೋಮವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಮತ್ತು ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ ರೂಪನಿ ಅವರನ್ನು ಮಹಾರಾಷ್ಟ್ರ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರನ್ನಾಗಿ ನಿಯೋಜಿಸಿದೆ.
ಮುಂದಿನ ಮುಖ್ಯಮಂತ್ರಿ ಯಾರು ಎಂಬುದರ ಬಗ್ಗೆ ಬಿಜೆಪಿ ಮೌನ ವಹಿಸಿದ್ದರೂ, ಹಲವಾರು ಮಾಧ್ಯಮ ವರದಿಗಳು ದೇವೇಂದ್ರ ಫಡ್ನವಿಸ್ ಹೆಸರು ಹುದ್ದೆಗೆ ಮುಂಚೂಣಿಯಲಿದೆ ಎಂದು ಸೂಚಿಸಿವೆ. ಡಿಸೆಂಬರ್ 5ರಂದು ಮುಂಬೈನ ಅಜಾದ್ ಮೈದಾನದಲ್ಲಿ ಪ್ರಮಾಣವಚನ ಸಮಾರಂಭ ನಡೆಯಲಿದ್ದು ಪ್ರದಾನಿ ನರೇಂದ್ರ ಮೋದಿ, ಗ್ರಹ ಸಚಿವ ಅಮಿತ್ ಶಾ ಮತ್ತು ಇತರ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಖಚಿತಪಡಿಸಿದೆ.