July 23, 2026
Mumbai News Kannada
ಸುದ್ದಿ

ದ ಕನ್ನಡ ಕುಲಾಲರ ಮಾತೃ ಸಂಘಚುನಾವಣೆ ಅಸಿಂಧು ಉ.ನಿಬಂಧಕರ ಆದೇಶ ರದ್ದು,







ಬೆಂಗಳೂರು, : ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ 2024-26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಆಯ್ಕೆಗೆ ನಡೆದ ಚುನಾವಣೆಯನ್ನು ಅಸಿಂಧುಗೊಳಿಸಿ ಸಹಕಾರ ಸಂಘಗಳ ಜಿಲ್ಲಾ ಉಪ ನಿಬಂಧಕರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಸಹಕಾರ ಸಂಘಗಳ ಉಪ ನಿಬಂಧಕರ ಆದೇಶ ಪ್ರಶ್ನಿಸಿ ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಸಂಘದ ಅಧ್ಯಕ್ಷಮಯೂ‌ರ್ ಉಲ್ಲಾಳ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಇತ್ತೀಚಿಗೆ ಈ ಆದೇಶ ಹೊರಡಿಸಿದೆ. ಸಂಘದ 2024-26ನೇ ಸಾಲಿಗೆ ಕಾರ್ಯಕಾರಿ ಸಮಿತಿಯ ಆಯ್ಕೆಗೆ 2024ರ ನವಂಬರ್ 10ರಂದು ಚುನಾವಣೆ ನಡೆದಿತ್ತು. ಆದರೆ ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂಬ ಕಾರಣಕ್ಕೆ ಚುನಾವಣೆಯನ್ನು ಅಸಿಂಧುಗೊಳಿಸಿದ್ದ ಸಹಕಾರ ಸಂಘಗಳ ಉಪ ನಿಬಂಧಕರು 45 ದಿನಗಳಲ್ಲಿ ಹೊಸದಾಗಿ ಚುನಾವಣೆ ನಡೆಸಬೇಕು. ಅಲ್ಲಿವರೆಗೆ ಹಾಲಿ ಕಾರ್ಯಕಾರಿ ಸಮಿತಿಯು ಮುಂದುವರಿಯಲಿ ಎಂದು ನವಂಬರ್ 20ರಂದು ಆದೇಶ ಹೊರಡಿಸಿದ್ದರು. ಅದನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿತ್ತು.



Related posts

ಶ್ರೀನಿವಾಸ ಜೋಕಟ್ಟೆ ಅವರಿಗೆ ‘ಎಡನೀರು ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ’ ಪ್ರದಾನ

Mumbai News Desk

ಶ್ರೀ ಶಿವ ಪಂಚಾಕ್ಷರಿ ಭಜನಾ ಮಂದಿರ ಕೊಳ, ಮಲ್ಪೆ – ರಕ್ತದಾನ ಶಿಬಿರ

Mumbai News Desk

ಪುಣೆ ಶ್ರೀ ಗುರುದೇವ ಸೇವಾ ಬಳಗ 20 ನೆ ವಾರ್ಷಿಕೋತ್ಸವ ಸಂಭ್ರಮ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (25/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಬಾಲಿವುಡ್ ನಟ ಸೈಪ್ ಆಲಿ ಖಾನ್ ಗೆ ಚಾಕುವಿನಿಂದ ಹಲ್ಲೆ,: ಆಸ್ಪತ್ರೆಗೆ ದಾಖಲು

Mumbai News Desk

ಹ್ಯೂಮನ್ ರೈಟ್ಸ್ ಇಂಟರ್ನ್ಯಾಷನಲ್ ಫೆಡರೇಶನ್ ಮಹಾರಾಷ್ಟ್ರ ರಾಜ್ಯ ಅಧ್ಯಕ್ಷರಾಗಿ ಪತ್ರಕರ್ತ ಯೋಗೇಶ್ ಪುತ್ರನ್ ನೇಮಕ

Mumbai News Desk