July 23, 2026
Mumbai News Kannada
ಸುದ್ದಿ

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಂ ಕೃಷ್ಣ ನಿಧನ







ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್​ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​​ಎಂ ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಕೃಷ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು

ಕರ್ನಾಟಕದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ 1932 ರ ಮೇ 1ರಂದು ಒಕ್ಕಲಿಗ ಕುಟುಂಬದಲ್ಲಿ ಜನಿಸಿದ ಎಸ್​ಎಂ ಕೃಷ್ಣ ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಅವರು, ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢ ಶಿಕ್ಷಣ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ತಮ್ಮ ಬ್ಯಾಚುಲರ್ ಆಫ್ ಆರ್ಟ್ಸ್, ಯೂನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಸದರ್ನ್ ಮೆಥೋಡಿಸ್ಟ್ ವಿಶ್ವವಿದ್ಯಾಲಯ ಮತ್ತು ವಾಷಿಂಗ್ಟನ್ ಡಿಸಿಯ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದ ಲಾ ಸ್ಕೂಲ್​ನಿಂದಲೂ ಪದವಿ ಪಡೆದಿದ್ದರು.

1962 ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮೂಲಕ ಗೆಲುವು ಸಾಧಿಸಿದ ಕೃಷ್ಣ ಆ ಮೂಲಕ ಚುನಾವಣಾ ರಾಜಕೀಯ ಜೀವನಕ್ಕೆ ಧುಮುಕಿದ್ದರು. ಆ ಬಳಿಕ ಅವರು ‘ಪ್ರಜಾ ಸೋಷಿಯಲಿಸ್ಟ್ ಪಕ್ಷ’ಕ್ಕೆ ಸೇರಿದ್ದರು. ಆದರೆ 1967 ರ ಚುನಾವಣೆಯಲ್ಲಿ ಮದ್ದೂರಿನಿಂದ ಕಾಂಗ್ರೆಸ್‌ನ ಎಂಎಂ ಗೌಡ ವಿರುದ್ಧ ಸೋಲನುಭವಿಸಿದ್ದರು. 1968 ರಲ್ಲಿ ಹಾಲಿ ಸಂಸದರು ನಿಧನರಾದಾಗ ಅವರು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ರಾಷ್ಟ್ರ ರಾಜಕೀಯಕ್ಕೆ ಅಡಿಯಿಟ್ಟರು. 1968 ರ ಉಪಚುನಾವಣೆಯ ನಂತರ ಮಂಡ್ಯ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿ ಕಾರ್ಯನಿರ್ವಹಿಸಿದರು. 1971 ಮತ್ತು 1980 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗಳನ್ನು ಗೆದ್ದಿದ್ದರು. ಆಗ ಮಂಡ್ಯವನ್ನು ಕಾಂಗ್ರೆಸ್ ಭದ್ರಕೋಟೆಯಾಗಿ ಉಳಿಸುವಲ್ಲಿ ಎಸ್​​ಎಂ ಕೃಷ್ಣ ಪಾತ್ರ ಪ್ರಮುಖವಾದದ್ದಾಗಿತ್ತು.



Related posts

ಬೆಂಗಳೂರಲ್ಲಿ ಮುಂಬಯಿಯ ನಿಶಿತ ಸೂರ್ಯಕಾಂತ್ ಸುವರ್ಣರ ಇಮೇಜ್ ಕನ್ಸಲ್ಟೆಂಟ್ ನ ಅದ್ದೂರಿಯ ಕರ್ನಾಟಕ ಸ್ಟೈಲ್ ಐಕಾನ್ 2023 ಕಾರ್ಯಕ್ರಮ

Mumbai News Desk

ಥಾಣೆ  :ಜಯರಾಮ ಸಾಂತ ನಿಧನ

Mumbai News Desk

ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಮುಂಬಯಿ ನಗರಕ್ಕೆ – ಭಕ್ತಿ ಪೂರ್ವಕ ಸ್ವಾಗತ

Mumbai News Desk

ಕಾರ್ಕಳ : ಹಟ್ಟಿಯಲ್ಲಿ ಬೆಂಕಿ ಅವಘಡದಲ್ಲಿ ಇಹಲೋಕ ತ್ಯಜಿಸಿದ ಕಂಬಳದ ಕೋಣಗಳು

Mumbai News Desk

ಉಡುಪಿ : ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಧರಣಿ ಎಚ್ಚರಿಕೆಯ ಬಳಿಕ, ಪರಿಶೀಲನೆ ನಡೆಸಿದ ಬೆಂಗಳೂರು ಪ್ರಾದೇಶಿಕ ಅಧಿಕಾರಿ

Mumbai News Desk

ಉಡುಪಿ : ಉದ್ಯಮಿ, ರೌಡಿ ಶೀಟರ್ ಸೈಪುದ್ದೀನ್ ಭೀಕರ ಹತ್ಯೆ

Mumbai News Desk