ವಿಶ್ವವಿಖ್ಯಾತ ತಬಲ ಮಾಂತ್ರಿಕ ಜಾಕೀರ್ ಹುಸೇನ್(73) ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಜಾಕೀರ್ ಹುಸೇನ್ ಅವರು ಭಾನುವಾರ ಅಮೆರಿಕದ ಸ್ಯಾನ್ಫ್ರಾನ್ಸಿಸ್ಕೋದಲ್ಲಿ ನಿಧನರಾಗಿದ್ದಾರೆ. ವಿಶ್ವವಿಖ್ಯಾತ ತಬಲ ಮಾಂತ್ರಿಕ ಜಾಕೀರ್ ಹುಸೇನ್(73) ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಜಾಕೀರ್ ಹುಸೇನ್ ಅವರು ಭಾನುವಾರ ಅಮೆರಿಕದ ಸ್ಯಾನ್ಫ್ರಾನ್ಸಿಸ್ಕೋದಲ್ಲಿ ನಿಧನರಾಗಿದ್ದಾರೆ.
ಜಾಕಿರ್ ಹುಸೇನ್ ಅವರ ಆಪ್ತ ಸ್ನೇಹಿತ ಮತ್ತು ಖ್ಯಾತ ಕೊಳಲು ವಾದಕ ರಾಕೇಶ್ ಚೌರಾಸಿಯಾ ಅವರ ನಿಧನವನ್ನು ವೈಯಕ್ತಿಕ ನಷ್ಟ ಎಂದು ಬಣ್ಣಿಸಿದ್ದಾರೆ. ಪಿಟಿಐ ಜೊತೆ ಮಾತನಾಡಿದ ಅವರು, ”ಕೆಲವು ದಿನಗಳಿಂದ ಅವರ ಆರೋಗ್ಯ ಚೆನ್ನಾಗಿರಲಿಲ್ಲ. ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.
ಉಸ್ತಾದ್ ಜಾಕಿರ್ ಹುಸೇನ್ ಅವರು ತಬಲಾದ ಸಾಂಪ್ರದಾಯಿಕ ಗಡಿಗಳನ್ನು ಮುರಿದಿದು ಮಾತ್ರವಲ್ಲದೆ, ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಪ್ರಸಿದ್ಧರಾದರು. ಅವರ ಸಂಗೀತವು ಶತಮಾನಗಳವರೆಗೆ ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ.