ಜಗದ್ಗುರು ಶ್ರೀ ಮಧ್ವಾ ಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮುಂಬಯಿಗೆ ಆಗಮಿಸಲಿದ್ದು, ಡಿ. 20ರಿಂದ 22ರ ವರೆಗೆ ಸಾಂತಾ ಕ್ರೂಜ್ ಪೂರ್ವದ ಪ್ರಭಾತ್ ಕಾಲನಿಯ ಶ್ರೀ ಪೇಜಾವರ ಮಠ ಮುಂಬಯಿ,ಶಾಖೆಯಲ್ಲಿ ಭಕ್ತರನ್ನು ಅನುಗ್ರಹಿಸಲಿದ್ದಾರೆ.
ಭಕ್ತರು ಹೆಚ್ಚಿನ ಸಂಖ್ಯೆ ಯಲ್ಲಿ ಪಾಲ್ಗೊಂಡು ಸ್ವಾಮೀಜಿ ಅವರ ಆಶೀರ್ವಾದ ಮತ್ತು ಶ್ರೀಕೃಷ್ಣ ದೇವರ ಕೃಪೆಗೆ ಪಾತ್ರರಾಗುವಂತೆ ಪೂರ್ಣಪ್ರಜ್ಞಾವಿದ್ಯಾ ಪೀಠ ಪ್ರತಿಷ್ಠಾನದ ವಿಶ್ವಸ್ತ್ರ ಮಂಡಳಿ ಹಾಗೂ ಪೇಜಾವರ ಮಠ ಮುಂಬಯಿ ಶಾಖೆಯ ಪ್ರಬಂಧಕರಾದ ರಾಮದಾಸ್ ಉಪಾಧ್ಯಾಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.