30 C
Mumbai
April 24, 2026
Mumbai News Kannada
ಸುದ್ದಿ

ಸಚಿವೆ ಲಕ್ಶ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ : ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಬಂಧನ





ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
 ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ಯುತ್ತಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ವಿರುದ್ಧ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎಂದು ದೂರು ನೀಡಿದ್ದು ಈ ಹಿನ್ನೆಲೆಯಲ್ಲಿ ಸಿಟಿ ರವಿ ವಿರುದ್ಧ ಎಫ್​​ಐಆರ್ ದಾಖಲಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮದೇ ಲೆಟರ್‌ಹೆಡ್ ಮೇಲೆ ಅವಾಚ್ಯಪದ ಬಳಕೆ ಆರೋಪಿಸಿ ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹೀಗಾಗಿ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ. ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್​​ಐಆರ್​ನಲ್ಲಿ ಉಲ್ಲೇಖವಾಗಿದೆ..



Related posts

ಡಹಾಣೂವಿನ ಬೀದಿಗಳಲ್ಲಿ ಗಣರಾಯನ ದರ್ಬಾರು.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಹಾಯಧನ ವಿತರಣೆ

Mumbai News Desk

ಗಮ್ಮತ್ ಕಲಾವಿದೆರ್ ಅವರ ‘ಪೋನಗ ಕೊನೊಪರ’ ನಾಟಕದ ಮುಹೂರ್ತ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿಯಲ್ಲಿ ಸುಧೀರ್ಘ ಕಾಲ ಸೇವೆ ಮಾಡಿದ ಬಪ್ಪನಾಡು ಶ್ರೀನಿವಾಸ ಸುವರ್ಣ ಅವರಿಗೆ ಮಂಡಳಿಯ 123ನೇ ಸಂಸ್ಥಾಪನಾ ದಿನದಂದು ಸನ್ಮಾನ.

Mumbai News Desk

ಪುತ್ತಿಗೆ ಶ್ರೀಪಾದಂಗಳವರಿಂದ ಡಾ| ರಾಮದಾಸ ಉಪಾಧ್ಯಾಯರಿಗೆ ಗೌರವಾರ್ಪಣೆ,

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ಸದಸ್ಯರಿಂದ ಯಕ್ಷಗಾನ ತಾಳಮದ್ದಳೆ, ಕಟೀಲ್ ಕ್ಷೇತ್ರದಲ್ಲಿ ವಿಶೇಷ ಪೂಜೆ.

Mumbai News Desk