ಕಂಬಳ ತುಳುನಾಡಿನ ಸಂಸ್ಕೃತಿಯ ಪ್ರತೀಕವಾಗಿ ದ್ದು ಕಂಬಳ ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು
ಮುಲ್ಕಿ ಸೀಮೆಯ ಅರಸು ಕಂಬಳದ ವೇದಿಕೆಯಲ್ಲಿ ಅವರು ಮಾತನಾಡಿದರು.
ಮುಖ್ಯ ಅತಿಥಿ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು ಮಾತನಾಡಿ, ಸರಕಾರವು 24 ಕಂಬಳಗಳಿಗೆ 5 ಲಕ್ಷ ರೂ. ಅನುದಾನ ಮಂಜೂರು ಮಾಡಿದಕ್ಕೆ ಧನ್ಯವಾದ ಸಲ್ಲಿಸುತ್ತಾ, ಕಂಬಳಗಳಿಗೆ ಭಾರತ ಸರಕಾರದ ಮಾನ್ಯತೆ ಪಡೆಯಲು ಸಂಸದರ ಮೂಲಕ ಪ್ರಯತ್ನ ನಡೆಸಲಾಗುವುದು.ಕಂಬಳದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ ಎಂದರು.
ವೇದಿಕೆಯಲ್ಲಿ ಮಾಜಿ ಸಚಿವರಾದ ರಮಾನಾಥ ರೈ, ಅಭಯ ಚಂದ್ರ ಕೆ., ಜಾಗತಿಕ ಬಂಟರ ಸಂಘದ ಒಕ್ಕೂಟದ ಉಪಾಧ್ಯಕ್ಷ ಕರ್ನೀರೆ ವಿಶ್ವನಾಥ ಶೆಟ್ಟಿ, ಯುವ ಕಾಂಗ್ರೆಸ್ ನಾಯಕ ಮಿಥುನ್,ರೈ, ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷ ಸೂರ್ಯಕಾಂತ ಜಯ ಸುವರ್ಣ, ಗುಣಪಾಲ ಕಡಂಬ, ಡಾ.ಅಮರಶ್ರೀ ಅಮರನಾಥ ಶೆಟ್ಟಿ, ಜಗದೀಶ್ ಅಧಿಕಾರಿ, ಸುಚರಿತ ಶೆಟ್ಟಿ, ಗುರುರಾಜ್ ಎಸ್. ಪೂಜಾರಿ, ಲೋಕೇಶ್ ಮುಚೂರು, ಶರತ್ ಸಾಲ್ಯಾನ್, ಯೋಗೀಶ್ ಜೆಪ್ಪು, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ರವಿ ಶೆಟ್ಟಿ ಕತಾರ್, ರತ್ನಾಕರ ಜೈನ್, ಐಕಳ ಕಂಬಳ ಸಮಿತಿಯ ಚಿತ್ತರಂಜನ್ ಭಂಡಾರಿ, ಸುಗಂಧಿ ದಿನೇಶ್ ಕೊಂಡಾಣ, ಉದ್ಯಮಿ ಆಸ್ಟಿನ್ ಸಂತೋಷ್, ಪದ್ಮರಾಜ್ ಪೂಜಾರಿ ಮಂಗಳೂರು, ಮುಲ್ಕಿ ಸೀಮೆ ಅರಸು ಕಂಬಳ ಸಮಿತಿಯ ಕಿರಣ್ ಶೆಟ್ಟಿ ಕೊಲ್ನಾಡುಗುತ್ತು, ಶ್ಯಾಮ್ ಪ್ರಸಾದ್, ಕಿಶೋರ್ ಶೆಟ್ಟಿ ದೆಪ್ಪಾಣಿಗುತ್ತು, ವಿನೋದ್ ಸಾಲ್ಯಾನ್ ಬೆಳ್ಳಾಯರು, ಪ್ರೇಮಲತಾ ಯೋಗೀಶ್ ಮತ್ತಿತರರು ಉಪಸ್ಥಿತರಿದ್ದರು
ಸಮಿತಿಯ ನವೀನ್ ಶೆಟ್ಟಿ ಎಡ್ಡೆಮಾರ್ ನಿರೂಪಿಸಿದರು.
‘ಕಾರ್ಯಕ್ರಮದಲ್ಲಿ ಸಾಧಕರ ನೆಲೆಯಲ್ಲಿ ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ರವಿಶೆಟ್ಟಿ ಮೂಡಂಬೈಲು, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಗುತ್ತಿನಾರ್ ರವೀಂದ್ರ ಶೆಟ್ಟಿ ಬಳ್ಳುಂಜೆಗುತ್ತು, ರೊನಾಲ್ಡ್ ಫೆರ್ನಾಂಡಿಸ್‌ರನ್ನು ಗೌರವಿಸಲಾಯಿತು.