ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ , ವೈದ್ಯಕೀಯ, ಆರ್ಥಿಕ ನೆರವಿನ ಮೂಲಕ ಮಹತ್ತರ ಸಾಧನೆ ಮಾಡಿದ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ (ರಿ.)ತೋಕೂರು, ಹಳೆಯಂಗಡಿ ಇವರಿಗೆ ಮುಲ್ಕಿ ಅರಮನೆ ವೆಲ್ಫೇರ್ ಮತ್ತು ಚಾರಿಟೇಬಲ್ ಟ್ರಸ್ಟ್ ಮತ್ತು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಹಳೆಯಂಗಡಿ ಇವರು ಅರಸು ಪ್ರಶಸ್ತಿ 2024 ಡಿ.22ರಂದು ಪಡುಪಣಂಬೂರು ಮುಲ್ಕಿ ಸೀಮೆಯ ಅರಮನೆಯ ಕಂಬಳ ಉತ್ಸವದಲ್ಲಿ ಪ್ರದಾನಿಸಿ ಗೌರವಿಸಿದರು.
ಮುಲ್ಕಿ ಸೀಮೆಯ ಅರಸರಾದ ಎಂ. ದುಗ್ಗಣ್ಣ ಸಾವಂತರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ವಿಶ್ರಾಂತ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹಾಗೂ ನಿವೃತ್ತ ಲೋಕಾಯುಕ್ತರು ಸಂತೋಷ್ ಕುಮಾರ್ ಹೆಗ್ಡೆ ಅವರು ಸಂಸ್ಥೆಯ ಪರವಾಗಿ ಅಧ್ಯಕ್ಷ ದೀಪಕ್ ಸುವರ್ಣ ಅವರಿಗೆ ಮೈಸೂರು ಪೇಟಾ ತೊಡಿಸಿ ಶಾಲು, ಫಲ ಪುಪ್ಷ,ಸ್ಮರಣಿಕೆ ಮತ್ತು ಸನ್ಮಾನ ಪತ್ರ ನೀಡಿ ಸನ್ಮಾನಿಸಿದರು. ಈ ಸಂಧರ್ಭದಲ್ಲಿ ಮುಖ್ಯ ಅತಿಥಿಗಳಾದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ ಸೂರಿಂಜೆ, ನಿವೃತ್ತ ಸಹಕಾರಿ ಸಂಘಗಳ ಸಹಾಯಕ ನಿಬಂಧಕರು ಕುಂದಾಪುರ ಅರುಣ್ ಕುಮಾರ್ ಎಸ್ ಪಿ, ಗ್ಯಾರೆಂಟಿ ನ್ಯೂಸ್ ಚಾನೆಲ್ ಬೆಂಗಳೂರು ರಾಧಾ ಹಿರೇಗೌಡ್ರು , ಹಳೆಯಂಗಡಿ ಪ್ರಿಯದರ್ಶಿನಿ ಕೋ- ಆಪರೇಟಿವ್ ಸೊಸೈಟಿ ಅಧ್ಯಕ್ಷ ಹಳೆಯಂಗಡಿ ಎಚ್ ವಸಂತ್ ಬೆರ್ನಾಡ್, ಮುಲ್ಕಿ ಅರಮನೆ ವೆಲ್ಫೇರ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಮುಖ್ಯಸ್ಥರು ಗೌತಮ್ ಜೈನ್,ಮುಲ್ಕಿ ಸೀಮೆ ಅರಸು ಕಂಬಳ ಅಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ , ಪ್ರಧಾನ ಕಾರ್ಯದರ್ಶಿ ಶ್ಯಾಮ್ ಪ್ರಸಾದ್, ಕೋಶಾಧಿಕಾರಿ ನವೀನ ಬಾಂದಕೆರೆ ಕಂಬಳ ಸಮಿತಿಯ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಮತ್ತು ಗಣ್ಯಾತಿಗಣ್ಯರ ಉಪಸ್ಥಿತಿತರಿದ್ದರು.
ಶ್ರೀ ಸುಬ್ರಹ್ಮಣ್ಯ ಮಹಾ ಗಣಪತಿ ಸ್ಪೋರ್ಟ್ಸ್ ಕ್ಲಬ್ ನ ಗೌರವಾಧ್ಯಕ್ಷರಾದ ಪ್ರಶಾಂತ್ ಕುಮಾರ್ ಬೇಕಲ್, ಕಾರ್ಯಧ್ಯಕ್ಷರಾದ ಸಂತೋಷ್ ದೇವಾಡಿಗ, ಉಪಾಧ್ಯಕ್ಷರಾದ ಸಂತೋಷ್ ಕುಮಾರ್, ಮಹಿಳಾ ಸಮಿತಿಯ ಕಾರ್ಯಧ್ಯಕ್ಶೆ ಯಶೋಧಾ ದೇವಾಡಿಗ, ಜೊತೆ ಕಾರ್ಯದರ್ಶಿ ಚಂದ್ರ ಸುವರ್ಣ, ಕೋಶಾಧಿಕಾರಿ ಸುನಿಲ್ ಜಿ ದೇವಾಡಿಗ ನಿಕಟಪೂರ್ವ ಅಧ್ಯಕ್ಷರ ಸುರೇಶ್ ಶೆಟ್ಟಿ , ಧರ್ಮಾನಂದ ಶೆಟ್ಟಿಗಾರ್, ರಮೇಶ್ ಕರ್ಕೇರ ಶ್ರೀ ಚಂದ್ರಶೇಖರ ದೇವಾಡಿಗ, ಗಣೇಶ್ ದೇವಾಡಿಗ ಪಂಜ, ಆರೋಗ್ಯ ನಿಧಿ ಕಾರ್ಯದರ್ಶಿ ಶ್ರೀ ಜಗದೀಶ್ ಕೋಟ್ಯಾನ್, ಪದ್ಮನಾಭ ಕುಲಾಲ್, ಗೌತಮ್, ಅರ್ಫಾಜ್, ಶ್ರೀಮತಿ ಗೀತಾ, ಶ್ರೀಮತಿ ಸರಿತಾ, ಶ್ರೀಮತಿ ಪವಿತ್ರ, ಶ್ರೀಮತಿ ಶರ್ಮಿಳ, ಕುಮಾರಿ ಶಿವಾನಿ, ಸಂಸ್ಥೆಯ ಗೌರವ ಮಾರ್ಗದರ್ಶಕರು ನರೇಂದ್ರ ಕೆರೆ ಕಾಡು, ಯೋಗೀಶ್ ಕೋಟ್ಯಾನ್, ಲೀಲಾದರ್ ಕಡಂಬೋಡಿ, ಪದಾಧಿಕಾರಿಗಳು, ಸಮಿತಿ ಸದಸ್ಯರು ಮತ್ತು ಸದಸ್ಯರು, ಸದಸ್ಯೆಯರು ಉಪಸ್ಥಿತರಿದ್ದರು.
ವರದಿ : ರಮೇಶ್ ಅಮೀನ್