ಬೆಂಗಳೂರಿನಲ್ಲಿ ಇಬ್ಬರು ಶಿಶುಗಳಿಗೆ ಎಚ್ಎಂಪಿವಿ ವೈರಸ್ ಸೋಂಕು ತಗಲಿರುವುದು ದ್ರಢಪಟ್ಟಿದೆ, ಆದರೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ. ಈ ವೈರಸ್ ಭಾರತದಲ್ಲಿ ಸಾಮಾನ್ಯವಾಗಿದ್ದು ಚೀನಾದಲ್ಲಿ ಪತ್ತೆಯಾಗಿರುವ ಮ್ಯೂಟೇಟೆಡ್ ವೈರಸ್ ನೊಂದಿಗೆ ಇದಕ್ಕೆ ಸಂಬಂಧ ಇದೆ ಎಂಬುದು ಇಂದು ಸ್ಪಷ್ಟವಾಗಿಲ್ಲ. ಹಾಗಾಗಿ ಚಿಂತಿಸುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಎಂಟು ತಿಂಗಳ ಹಾಗೂ ಮೂರು ತಿಂಗಳ ಮಗುವಿನಲ್ಲಿ ಎಚ್ಎಂಪಿವಿ ವೈರಸ್ ದೃಢಪಟ್ಟಿದ್ದು,
ಮೊದಲನೆಯ ಪ್ರಕರಣದಲ್ಲಿ 8 ತಿಂಗಳ ಮಗುವಿಗೆ ಜ್ವರ ಬಂದ ಕಾರಣ ಕೆಲವು ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು, ರಕ್ತಪರೀಕ್ಷೆ ಮಾಡಿದಾಗ ಎಚ್ಎಂಪಿವಿ ವೈರಸ್ ಇರುವುದು ಪತ್ತೆಯಾಗಿದೆ . ಮತ್ತೊಂದು ಪ್ರಕರಣದಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಮೂರು ತಿಂಗಳ ಹೆಣ್ಣು ಶಿಶುವಿನಲ್ಲಿಯೂ ವೈರಸ್ ದೃಢಪಟ್ಟಿದೆ, ಆದರೆ ಶಿಶುವನ್ನು ಈಗಾಗಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಎಚ್ಎಂಪಿವಿ ವೈರಸ್ ಭಾರತದಲ್ಲೂ ಇದೆ, ಆದರೆ ಅದು ಮ್ಯೂಟೇಷನ್ ಆಗಿದೆ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ನಮಗೆ ಚೀನಾದಲ್ಲಿ ಮ್ಯೂಟೇಟ್ ಆಗಿರುವ ವೈರಸ್ ಹೇಗಿದೆ ಎಂದು ತಿಳಿದಿಲ್ಲ, ಹೀಗಾಗಿ ಇಲ್ಲಿ ಪತ್ತೆ ಆಗಿರೋದು ಸಾಮಾನ್ಯ ಎಚ್ಎಂಪಿವಿ ವೈರಸೇ ಅಥವಾ ಚೀನಾದ ತಳಿಯೇ ಎಂಬ ಗೊಂದಲ ಇದೆ ಭಾರತದಲ್ಲಿ ಸಾಮಾನ್ಯ ಎಚ್ಎಂಪಿವಿ ವೈರಸ್ ಶೇ 0.78 ರಷ್ಟು ಕಾಣಿಸುತ್ತದೆ ಎಂದು ಆರೋಗ್ಯ ತಿಳಿಸಿದೆ.
ಸತ್ಯ ಸೋಂಕು ಪತ್ತೆಯಾಗಿರುವ ಮಗುವಿಗೆ ಮತ್ತು ಕುಟುಂಬದವರಿಗೆ ಟ್ರಾವೆಲ್ ಇತರ ಇಲ್ಲ ಈ ಹಿನ್ನೆಲೆಯ ಬಗ್ಗೆ ಆರೋಗ್ಯ ಇಲಾಖೆ ಕೂಡ ಪರಿಶೀಲನೆ ನಡೆಸುತ್ತಿದೆ ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಹರ್ಷಗುಪ್ತ ತಿಳಿಸಿದ್ದಾರೆ.
.
.