ಮಂಗಳೂರು:ಮುಲ್ಕಿ ವಿಜಯ ರೈತ ಸೇವಾ ಸಹಕಾರಿ ಸಂಘ 2025- 29ನೇ ಸಾಲಿನ ನೂತನ ಅಧ್ಯಕ್ಷರಾಗಿ ಕಿಲ್ಪಾಡಿ ಬಂಡಸಲೆ ರಂಗನಾಥ ಶೆಟ್ಟಿ, ಉಪಾಧ್ಯಕ್ಷರಾಗಿ ಪ್ರಸಾದ ಶೆಟ್ಟಿ ಆಯ್ಕೆಯಾಗಿದ್ದಾರೆ.
ರಂಗನಾಥ ಶೆಟ್ಟಿ ಯವರುಮುಲ್ಕಿ ಪರಿಸರದಲ್ಲಿ ಸಮಾಜ ಸೇವಕರಾಗಿ ಹಲವಾರು ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು ರೈತ ಸೇವಾ ಸಹಕಾರಿ ಸಂಘದಲ್ಲಿ ವಿವಿಧ ಪದವಿಗಳನ್ನು ಅಲಂಕರಿಸಿ ಇದೀಗ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ,
ಅಧಿಕಾರ ಸ್ವೀಕರಿಸಿ ಮಾತನಾಡಿದ ರಂಗನಾಥ ಶೆಟ್ಟಿ ‘ಸಂಘ ಕಳೆದ ತಮ್ಮ ಆಡಳಿತಾದ ಅವಧಿಯಲ್ಲಿ ಪ್ರಗತಿ ಸಾಧಿಸಿದ್ದು, ಮುಂದಿನ ದಿನಗಳಲ್ಲಿ ನೂತನ ಸ್ವಂತ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನೀಡುತ್ತೇವೆ’ ಎಂದು ತಿಳಿಸಿದ್ದಾರೆ.