28.8 C
Karnataka
April 3, 2025
ಸುದ್ದಿ

ತಿರುಪತಿ ತಿರುಮಲದಲ್ಲಿ ಕಾಲ್ತುಳಿತ, ಮೃತರ ಸಂಖ್ಯೆ 6ಕ್ಕೆ ಏರಿಕೆ



ದೇಶದ ಪ್ರಸಿದ್ಧ ದೇಗುಲಗಳಲ್ಲಿ ಒಂದಾಗಿರುವ ತಿರುಪತಿಯ ತಿರುಮಲ ವೆಂಕಟೇಶ್ವರ ಸ್ವಾಮಿ ದೇಗುಲದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವೈಕುಂಠ ದ್ವಾರ ದರ್ಶನದ ಟೋಕನ್ ವಿತರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಒಟ್ಟು ಆರು ಮಂದಿ ಮೃತಪಟ್ಟಿದ್ದು 20 ಮಂದಿ ಗಾಯಗೊಂಡಿದ್ದಾರೆ.
ಆಂಧ್ರಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತ ಪಟ್ಟವರ ಸಂಖ್ಯೆ ಆರಕ್ಕೆ ಏರಿಕೆಯಾಗಿದ್ದು, ಘಟನೆಯಲ್ಲಿ ಇನನ್ನೂ ನಾಲ್ವರು ಅಸ್ವಸ್ಥಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂ ನಲ್ಲಿ ಶುಕ್ರವಾರದಿಂದ ಹತ್ತು ದಿನಗಳ ಕಾಲ ವೈಕುಂಠ ದ್ವಾರ ಸರ್ವ ದರ್ಶನಕ್ಕಾಗಿ ಟೋಕನ್ ವಿತರಣೆಯ ಸಂದರ್ಭದಲ್ಲಿ ಕಾಲ್ತುಲಿತ ಸಂಭವಿಸಿದೆ. ಭಾರಿ ಸಂಖ್ಯೆಯಲ್ಲಿ ಭಕ್ತರು ಟೋಕನ್ ಪಡೆಯಲು ಯತ್ನಿಸಿದ ಪರಿಣಾಮಗಳು ಉಂಟಾಯಿತು.
ಗುರುವಾರದಿಂದ ತಿರುಪತಿಯ 9 ಕೇಂದ್ರಗಳಲ್ಲಿ 94 ಕೌಂಟರ್ ಗಳ ಮೂಲಕ ವೈಕುಂಠ ದರ್ಶನ ಟೋಕನ್ ಗಳನ್ನು ವಿತರಿಸಲು ಟಿಟಿಡಿ ವ್ಯವಸ್ಥೆ ಮಾಡಿದೆ, ಆದರೆ ಬುಧವಾರ (ಜನವರಿ 8) ಸಂಜೆ ಟೋಕನ್ ಗಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಇದೇ ವೇಳೆ ಭಕ್ತರೊಬ್ಬರು ಅಸ್ವಸ್ಥರಾದರು. ಅವರನ್ನು ಆಸ್ಪತ್ರೆಗೆ ಕರೆದೋಯ್ಯಲು ಮುಖ್ಯ ಗೇಟ್ ತೆರೆಯಲಾಗಿತ್ತು. ಆಗ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆ ಗೇಟ್ ಮೂಲಕ ಧಾವಿಸಿದರು, ಇದರಿಂದ ಘಟನೆ ನಡೆದಿದೆ ಎಂದು ವರದಿಯಾಗಿದೆ.

.

Related posts

ವಸಯಿ ತಾಲೂಕ ಮೊಗವೀರ ಸಂಘದ ಆಯೋಜನೆಯಲ್ಲಿ ವಿಟಿಎಂಎಸ್ ಟ್ರೋಪಿ 2024ಕ್ಕೆ ಚಾಲನೆ

Mumbai News Desk

ಯಕ್ಷಗಾನ ವಿಶ್ವಗಾನವಾಗಿ ಮೆರಯಲಿ – ಶ್ರೀ ಶ್ರೀ ಶ್ರೀ ಸಚ್ವಿದಾಂನಂದ ಭಾರತಿ ಸ್ವಾಮೀಜಿ

Mumbai News Desk

ಬೆಳ್ಮಣ್: ಕುಂಭ ನಿಧಿ ಕ್ರೆಡಿಟ್ ಕೋ ಅಪರೆಟಿವ್ ಸೂಸೈಟಿ ಉದ್ಘಾಟನೆಗೆ ಸಿದ್ಧತೆ ,

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ದೀಪಾ ಭಾಸ್ಕರ್ ಕಾಂಚನ್ ಗೆ  ಶೇ 85.67% ಅಂಕ 

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಜಿಲ್ಲಾಧ್ಯಕ್ಷ, ಸಮಾಜ ಸೇವಕ ಡಿ. ಆರ್. ರಾಜು ನಿಧನ,ಗಣ್ಯರ ಸಂತಾಪ

Mumbai News Desk

ಬೊಯಿಸರ್ ಸೋಮೇಶ್ವರ ಮಂದಿರದ 15 ನೆಯ ವರ್ಧಂತ್ಯುತ್ಸವ ಸಂಪನ್ನ.

Mumbai News Desk