April 1, 2025
ಸುದ್ದಿ

ದ್ವಮ್ದ್ವ’ ಕನ್ನಡ ಕಲಾತ್ಮಕ ಚಿತ್ರ ಬಿಡುಗಡೆ – ಪತ್ರಕರ್ತರಿಗೆ ವಿಶೇಷ ಪ್ರದರ್ಶನ

.

.

ಯಕ್ಷಗಾನದಲ್ಲಿನ ಹೆಣ್ಣಿನ ಪಾತ್ರಕ್ಕೆ ಸಂಬಂಧಿಸಿದ ಕಥಾ ಹಂದರ ಹೊಂದಿರುವ, ಅಂತರಾಷ್ಟ್ರೀಯ ಚಲನಚಿತ್ರೋ ತ್ಸವದಲ್ಲಿ ಮಾನ್ಯತೆ ಹಾಗೂ ಪ್ರದರ್ಶನ ಕಂಡಿರುವ  ‘ದ್ವಮ್ದ್ವ’ ಕನ್ನಡ ಕಲಾತ್ಮಕ ಚಲನಚಿತ್ರ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಹಾಗೂ ಪತ್ರಕರ್ತರಿಗೆ ವಿಶೇಷ ಪ್ರದರ್ಶನವನ್ನು ಶುಕ್ರವಾರ (ತಾ. 10ರಂದು ) ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು.

ಬೆಂಕಿ ಬ್ಯಾಚ್ ಮೇಟ್ಸ್ ಪ್ರೊಡಕ್ಷನ್ ಮತ್ತು ಕೋಣನೂರು ಪ್ರೊಡಕ್ಷನ್ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಸಿನಿಮಾ ನಿರ್ದೇಶಕ ಪ್ರಥ್ವಿ ಕೋಣನೂರು ‘ ದ್ವಮ್ದ್ವ’ ಚಲನಚಿತ್ರವನ್ನು ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಳಿಸಿದರು. ಮಣಿಪಾಲ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸ್ ನ ಮುಖ್ಯಸ್ಥ ಪ್ರೊ.ವರದೇಶ ಹಿರೇಗಂಗೆ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.


ಈ ಸಂದರ್ಭದಲ್ಲಿ ಮಾತನಾಡಿದ  ‘ದ್ವಮ್ದ್ವ’ ಚಲನಚಿತ್ರದ ನಿರ್ದೇಶಕ ಕ್ಲಿಂಗ್ ಜಾನ್ಸನ್ ಅವರು ” ಈ ಸಿನಿಮಾ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಕನ್ನಡದ ಮೊದಲ ಕ್ವೀರ್ ಚಲನಚಿತ್ರವಾಗಿದೆ.ಇದು ಕರಾವಳಿ ಪಟ್ಟಣದ ಉಡುಪಿಯಲ್ಲಿ ವಾಸಿಸುವ ಚುಕ್ಕಿಯ ಜೀವನದ ಸುತ್ತ ಸುತ್ತುತ್ತದೆ. ಅವರು ವಿಶಿಷ್ಟವಾದ ಸಾಂಪ್ರದಾಯಿಕ ಕಲೆಯಾದ ಯಕ್ಷಗಾನದಲ್ಲಿ ಸ್ತ್ರೀ ಪಾತ್ರವನ್ನು ನಿರ್ವಹಿಸುತ್ತಿರುತ್ತಾರೆ. ಈ ಚಿತ್ರ ಚುಕ್ಕಿಯ ಜೀವನದ ಹೋರಾಟಗಳ ಸೂಕ್ಷ್ಮವಾದ ವಿಚಾರವನ್ನು ಬಿಂಬಿಸುತ್ತದೆ. ಈ ಸಿನಿಮಾ ಕೋಣನೂರು ಪ್ರೋಡಕ್ಷನ್ ಯೂಟ್ಯೂಬ್ ಚಾನೆಲ್ ನಲ್ಲಿ ಲಭ್ಯವಿದ್ದು ಎಲ್ಲರೂ ಚಿತ್ರವನ್ನು ವೀಕ್ಷಣೆ ಮಾಡಬೇಕು” ಎಂದು ಅವರು ಮನವಿ ಮಾಡಿದರು.
ಸಿನಿಮಾ ವೀಕ್ಷಣೆಯ ಬಳಿಕ ನಿರ್ದೇಶಕರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಚಿತ್ರದ ನಟರಾದ ಭಾಸ್ಕರ್ ಮಣಿಪಾಲ, ಪ್ರಭಾಕರ್ ಕುಂದರ್, ಬೆನ್ಸು ಪೀಟರ್, ರಾಜೇಂದ್ರ ನಾಯಕ್, ಭಾರತಿ ಟಿ. ಕೆ., ಸಂದೀಪ್ ಕುಮಾರ ಉಪಸ್ಥಿತರಿದ್ದರು.

Related posts

ಮೈಲ್ ಸ್ಟೋನ್ ಮಿಸೆಸ್ ಎಷ್ಯಾ ಇಂಟರ್ನೆಷನಲ್ ಪೆಜೇಂಟ್ 2024, ಪ್ರಭಾ ಎನ್ ಸುವರ್ಣ ಅವರಿಗೆ ದ್ವಿತೀಯ ಸ್ಥಾನ.

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿಯಲ್ಲಿ ಸುಧೀರ್ಘ ಕಾಲ ಸೇವೆ ಮಾಡಿದ ಬಪ್ಪನಾಡು ಶ್ರೀನಿವಾಸ ಸುವರ್ಣ ಅವರಿಗೆ ಮಂಡಳಿಯ 123ನೇ ಸಂಸ್ಥಾಪನಾ ದಿನದಂದು ಸನ್ಮಾನ.

Mumbai News Desk

ಸಮಾಜ ಸೇವಕಿ ವಿಮಲಾ ಎಲ್ ಸಾಲ್ಯಾನ್ ನಿಧನ

Mumbai News Desk

ಯಕ್ಷ ಪ್ರೇಮಿಗಳ, ಕಲಾಭಿಮಾನಿಗಳ ಮನ ಗೆದ್ದ ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸದಸ್ಯರ ಯಕ್ಷಗಾನ.

Mumbai News Desk

ಭಾರತ್ ಬ್ಯಾಂಕಿನ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಬಿಲ್ಲವ ಸಮಾಜದ ಮುಖಂಡರಿಂದ ಅಭಿನಂದನೆ

Mumbai News Desk

ಕೊಂಡೆವೂರು ಶ್ರೀಗಳ 21 ನೇ ಚಾತುರ್ಮಾಸ್ಯ ವ್ರತಾಚರಣೆಉಪ್ಪಳ ಜು:    ಕೊಂಡೆವೂರು

Mumbai News Desk