ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೆ ಸಿ ರೋಡಿನಲ್ಲಿ ಶುಕ್ರವಾರ ಮಧ್ಯಾಹ್ನ ಹಾಡು ಹಗಲೇ ಬ್ಯಾಂಕಿಗೆ ನುಗ್ಗಿದ ಕದೀಮರ ಗುಂಪು ಸುಮಾರು 12 ಕೋಟಿ ರೂಪಾಯಿ ಮೌಲ್ಯದ ನಗ-ನಗದು ದೋಚಿ ಪರಾರಿಯಾಗಿದ್ದಾರೆ.
ಕೋಟೆಕಾರ್ ವ್ಯವಸಾಯ ಸಹಕಾರಿ ಸಂಘದ ಬ್ಯಾಂಕಿಗೆ ಆರು ಜನರಿದ್ದ ದರೋಡೆಕೋರರ ತಂಡವು ನುಗ್ಗಿ ಪಿಸ್ತೂಲ್ ಮತ್ತು ತಲವಾರ್ ತೋರಿಸಿ ಲೂಟಿ ಮಾಡಿದ್ದಾರೆ.
ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ಕಾರಣ ಹೆಚ್ಚಿನ ಪೊಲೀಸರು ಅವರ ಭದ್ರತೆಗಾಗಿ ತೆರಳಿದ್ದರು. ಇದನ್ನೇ ಟಾರ್ಗೆಟ್ ಮಾಡಿಕೊಂಡು ದರೋಡೆಗೆ ಸಂಚುರೂಪಿಸಿದ್ದ ಶಂಕೆ ವ್ಯಕ್ತವಾಗಿದೆ. ಇಂದು ಶುಕ್ರವಾರವಾದ್ದರಿಂದ ಮುಸ್ಲಿಂ ಬಾಹುಳ್ಯ ದ ಪ್ರದೇಶವಾದ ಕೆ ಸಿ ರೋಡು ಜಂಕ್ಷನ್ ನಲ್ಲಿ ಮಧ್ಯಾಹ್ನ ಪ್ರಾರ್ಥನೆ ಕಾರಣ ಜನ ಸಂಚಾರ ವಿರಾಳವಾಗಿತ್ತು. ಇದೇ ಸಮಯ ನೋಡಿಕೊಂಡು ಗುಂಪು ಬ್ಯಾಂಕಿಗೆ ದಾಳಿ ನಡೆಸಿದೆ. ಗ್ಯಾಂಗ್ನಲ್ಲಿ ಆರು ಜನರಿದ್ದು ಈ ಪೈಕಿ ಐವರು ಬ್ಯಾಂಕಿಗೆ ನುಗ್ಗಿದರೆ, ಓರ್ವ ರಸ್ತೆಯಲ್ಲಿ ಕಾರು ನಿಲ್ಲಿಸಿಕೊಂಡು ಅವರಿಗಾಗಿ ಕಾದಿದ್ದ. ಬ್ಯಾಂಕ್ ನೊಳಗೆ ನುಗ್ಗಿದ್ದ ದುಷ್ಕರ್ಮಿಗಳು ಪಿಸ್ತೂಲ್ ತೋರಿಸಿ ಬ್ಯಾಂಕಿನಿಂದ ಸುಮಾರು 12 ಕೋಟಿ ರೂಪಾಯಿ ಮೌಲ್ಯದ ಹಣ ಮತ್ತು ಚಿನ್ನದ ಆಭರಣಗಳನ್ನು ದೋಚಿದ್ದಾರೆ ಎಂದು ತಿಳಿದುಬಂದಿದೆ .
ನಿನ್ನೆ ಬೀದರ್ ನಲ್ಲಿ ಎಸ್ ಬಿ ಐ ಎಟಿಎಂ ಬಳಿ ನಡೆದಿದ್ದ ದರೋಡೆ ಪ್ರಕರಣದಲ್ಲಿ ಇಬ್ಬರು ಅಗಂತುಕರು ಸಿ ಎಮ್ ಎಸ್ ಸಂಸ್ಥೆಯ ಸಿಬ್ಬಂದಿಗಳ ಮೇಲೆ ಗುಂಡು ಹಾರಿಸಿ ಸುಮಾರು 93 ಲಕ್ಷ ರೂಪಾಯಿ ಇದ್ದ ಹಣದ ಬಾಕ್ಸ್ ಅನ್ನು ಹೊತ್ತು ಪರಾರಿಯಾಗಿದ್ದರು. ಈ ಘಟನೆಯಲ್ಲಿ ಓರ್ವ ಸಿಬ್ಬಂದಿ ಸ್ಥಳದಲ್ಲಿ ಸಾವನ್ನಪ್ಪಿ, ಮತ್ತೋರ್ವ ಸಿಬ್ಬಂದಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿತಿದ್ದಾರೆ. ಈ ಘಟನೆ ಇನ್ನೂ ಹಸಿರಾಗಿರುವಂತೆ ಇತ್ತ ಮಂಗಳೂರು ನಲ್ಲೂ ಇಂತಹದೇ ಮತ್ತೊಂದು ದರೋಡೆ ಪ್ರಕರಣ ವರದಿಯಾಗಿದೆ.
