
ಪುನರೂರು ಪ್ರತಿಷ್ಠಾನವು ಸಂಭ್ರಮ ಕಾರ್ಯಕ್ರಮದ ಮುಖಾಂತರ ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ನೀಡುವಂತಹ ಉತ್ತಮ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಇಂತಹ ಕಾರ್ಯಕ್ರಮ ನಿರಂತರ ನಡೆಯುತ್ತಿರಲಿ ಎಂದು ಕಟೀಲು ಕ್ಷೇತ್ರದ ಅರ್ಚಕ ವೇದಮೂರ್ತಿ ಲಕ್ಷ್ಮೀನಾರಾಯಣ ಅಸ್ರಣ್ಣ ನುಡಿದರು.
ಅವರು ಜ. 11ರಂದು ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ವಠಾರದಲ್ಲಿ ನಡೆದ ಪುನರೂರು ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪುನರೂರು ಪ್ರತಿಷ್ಠಾಪನೆಯ ಗೌರವಾದ್ಯಕ್ಷ ದರ್ಮದರ್ಶಿ ಹರಿಕೃಷ್ಣ ಪುನರೂರು ಸಮಾರಂಭದ ಅದ್ಯಕ್ಷತೆ ವಹಿಸಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ್ದ ಎಲ್ಲರನ್ನೂ ಅಭಿನಂದಿಸಿದರು.
ಮುಲ್ಕಿ ಶ್ರೀ ವೆಂಕಟ್ರಮಣ ದೇವಸ್ಥಾನದ ಟ್ರಸ್ಟಿ ಅತುಲ್ ಕುಡ್ವ ಶುಭಾಶಂಶನೆ ಗೖದರು.
ವೇದಿಕೆಯಲ್ಲಿ ಮುಖ್ಯ ಅತಿಥಿಳಾಗಿ ಸುರತ್ಕಲ್ ಶ್ರೀ ನಾಟ್ಯಾಂಜಲಿ ಕಲಾ ಅಕೇಡಮಿಯ ನಿರ್ದೇಶಕ ವಿ. ಚಂದ್ರಶೇಖರ ನಾವಡ, ಕಿನ್ನಿಗೋಳಿ ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ, ಪುನರೂರು ಕ್ಷೇತ್ರದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವ ರಾವ್, ಪುನರೂರು ಪ್ರತಿಷ್ಠಾಪನೆಯ ಗೌರವಾದ್ಯಕ್ಷೆ ಎಚ್. ಕೆ. ಉಷಾರಾಣಿ, ಅದ್ಯಕ್ಷ ದೇವಪ್ರಸಾದ್ ಪುನರೂರು, ಗೌ. ಕಾರ್ಯದರ್ಶಿ ಶ್ರೇಯಾ ಪುನರೂರು ಹಾಗೂ ಜನವಿಕಾಸ ಸಮಿತಿ ಅದ್ಯಕ್ಷ ಶಶಿಕರ ಕರೆಕಾಡು ಮತ್ತಿತರರು ಉಪಸ್ಥಿತರಿದ್ದರು.
ದೇವಿಪ್ರಸಾದ್ ಪುನರೂರು ಸ್ವಾಗತಿಸಿದರು. ಗೀತಾ ಶೆಟ್ಟಿ ದನ್ಯವಾದ ಅರ್ಪಿಸಿದರು. ಕಾರ್ಯಕ್ರಮವನ್ನು ಹೆಜಮಾಡಿ ಜಿತೇಂದ್ರ ವಿ. ರಾವ್ ನಿರೂಪಿಸಿದರು.
ಕೊನೆಯಲ್ಲಿ ಬಹುಮಾನ ವಿತರಣೆ ಹಾಗೂ ಶ್ರೀ ನಾಟ್ಯಾಂಜಲ್ಲಿ ನೃತ್ಯ ಅಕೇಡಮಿಯ ವತಿಯಿಂದ ನೃತ್ಯ ಕಾರ್ಯಕ್ರಮ ನಡೆಯಿತು.