ಮಹಾರಾಷ್ಟ್ರದಲ್ಲಿ ರೈಲಿನಡಿ ಸಿಲುಕಿ 7 ಜನರು ದುರಂತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಜಲಗಾಂವ್‌ನ ಪರಾಂಡ ನಿಲ್ದಾಣದಲ್ಲಿ ಘಟನೆ ನಡೆದಿದೆ. ಲಕ್ನೋದಿಂದ ಮುಂಬೈಗೆ ತೆರಳುತ್ತಿದ್ದ ಪುಷ್ಪಕ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ವದಂತಿ ಹರಡಿತ್ತು. ಇದರಿಂದ ಹೆದರಿದ ಪ್ರಯಾಣಿಕರು ಚಲಿಸುತ್ತಿದ್ದ ರೈಲಿನಿಂದ ಜಿಗಿದಿದ್ದರು. ಪಕ್ಕದ ಹಳಿ ಮೇಲೆ ನಿಂತಾಗ ಮತ್ತೊಂದು ರೈಲು ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಮತ್ತೊಂದು ಹಳಿಯಲ್ಲಿ ಬರುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾಗಿ 7 ಜನ ಸಾವನ್ನಪ್ಪಿದ್ದಾರೆ.ಬೆಂಕಿ ಕಾಣಿಸಿಕೊಂಡಿದೆ ಎಂಬ ಸುದ್ದಿ ಹರಡುತ್ತಿದ್ದಂತೆ ಪುಷ್ಪಕ್ ಎಕ್ಸ್ಪ್ರೆಸ್ನಲ್ಲಿದ್ದ ಕೆಲವು ಪ್ರಯಾಣಿಕರು ರೈಲಿನ ಚೈನ್ ಎಳೆದು ರೈಲು ನಿಲ್ಲಿಸಿ ಪಕ್ಕದ ಹಳಿಗೆ ಜಿಗಿದಿದ್ದಾರೆ. ಈ ವೇಳೆ ಮತ್ತೊಂದು ಹಳಿಯಲ್ಲಿ ಬರುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾಗಿದೆ. ಜಲಗಾಂವ್‌ನ ಪಚೋರಾ ರೈಲು ನಿಲ್ದಾಣದಲ್ಲಿ ಪುಷ್ಪಕ್ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹರಡಿ ಗೊಂದಲ ಸೃಷ್ಟಿಯಾಯಿತು. ಇದರಿಂದ ಚಲಿಸುತ್ತಿದ್ದ ರೈಲಿನಿಂದ ಪ್ರಯಾಣಿಕರು ಹೊರಗೆ ಹಾರಿದರು, ಆಗ ಪಕ್ಕದ ಹಳಿಯಲ್ಲಿ ಕರ್ನಾಟಕ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದಿದೆ.ಬೆಂಕಿ ಹರಡಿದೆ ಎಂಬ ಸುಳ್ಳು ಸುದ್ದಿಯನ್ನು ನಂಬಿ 30-40 ಜನ ರೈಲಿನಿಂದ ಕೆಳಗೆ ಜಿಗಿದಿದ್ದರು. ಕೆಲವರು ದೂರ ಓಡಿಹೋದರೆ ಇನ್ನು ಕೆಲವರು ಪಕ್ಕದ ಹಳಿ ಮೇಲೆ ನಿಂತಿದ್ದರು. ಈ ವೇಳೆ ವೇಗವಾಗಿ ಬಂದ ರೈಲು ಹರಿದು ಅವರು ಮೃತಪಟ್ಟಿದ್ದಾರೆ. ಆ ಪ್ರದೇಶದಲ್ಲಿ ಹಳಿಯ ಕೆಲಸ ನಡೆಯುತ್ತಿರುವ ಕಾರಣ ರೈಲಿಗೆ ಎಚ್ಚರಿಕೆಯ ಆದೇಶ ನೀಡಲಾಗಿತ್ತು. ಹೀಗಾಗಿ, ಬ್ರೇಕ್‌ಗಳನ್ನು ಹಾಕುತ್ತಿದ್ದಂತೆ, ರೈಲಿನ ಚಕ್ರಗಳಿಂದ ಕಿಡಿಗಳು ಹೊರಹೊಮ್ಮಿದವು. ಇದರಿಂದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹರಡಿತು.
ಚಲಿಸುವ ರೈಲಿನಿಂದ ಜಿಗಿದಿದ್ದರಿಂದ ಹಲವರಿಗೆ ಗಾಯಗಳಾಗಿವೆ. ಗಾಯಾಳು ಪ್ರಯಾಣಿಕರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಗ್ರಾಮೀಣ ಆಸ್ಪತ್ರೆಗೆ ಸಾಗಿಸಲಾಯಿತು.