ಉಡುಪಿಯ ಕುಂಜಿಬೆಟ್ಟುವಿನ ಶಾರದಾ ರೆಸಿಡೆನ್ಸಿ ಶಾಲೆಗೆ ಬಾಂಬ್ ಬೆದರಿಕೆ ಬಂದಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರುಸ್ಥಳಕ್ಕೆ ಆಗಮಿಸಿ ಶಾಲಾ ಕಟ್ಟಡವನ್ನು ತಪಾಸಣೆ ನಡೆಸುತ್ತಿದ್ದಾರೆ.
ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಸಮೀಪದ ಶಾರದಾ ರೆಸಿಡೆನ್ಸಿ ಶಾಲೆಯ ಇಮೇಲ್ ಗೆ ಬಾಂಬ್ ಸ್ಪೋಟದ ಸಂದೇಶ ಬಂದಿದ್ದು ಇದನ್ನು ಗಮನಿಸಿ ಶಾಲಾ ಶಿಕ್ಷಕರು ಕೂಡಲೇ ಮಕ್ಕಳನ್ನು ಶಾಲೆಯಿಂದ ಹೊರಗೆ ಕಳಿಸಿ ಮೈದಾನದಲ್ಲಿ ಇರಿಸಿದ್ದಾರೆ. ಬಾಂಬ್ ಸ್ಪೋಟದ ಬೆದರಿಕೆ ಹಿನ್ನೆಲೆಯಲ್ಲಿ ಉಡುಪಿಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಶ್ವಾನ ದಳದೊಂದಿಗೆ ಶಾಲೆಯ ಸುತ್ತಮುತ್ತ ಪರಿಶೀಲನೆ ನಡೆಸಿದರು, ಆದರೆ ಸಂಬಂಧ ಪಟ್ಟ ಯಾವುದೇ ಸುಳಿವುಗಳು ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಶಾಲೆಯಲ್ಲಿ ಸುಮಾರು 600ಕ್ಕೂ ಅಧಿಕ ಮಕ್ಕಳು ಕಲಿಯುತ್ತಿದ್ದು, ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಈ ಶಾಲೆಯ ಸಮೀಪದಲ್ಲಿರುವ ಎಲ್ಲಾ ವಿದ್ಯಾ ಸಂಸ್ಥೆಯ ಮಕ್ಕಳನ್ನು ಕೂಡ ಹೊರಗಡೆ ಕಳಿಸಲಾಗಿದೆ ಎಂದು ತಿಳಿದುಬಂದಿದೆ.
