ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಸತೀಶ್ ಕುಂಪಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಕ್ಷದ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷಗಳ ಅವಧಿಗೆ ಸತೀಶ್ ಕುಂಪಲ ಅವರು ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರಾಜೇಶ್ ಕಾವೇರಿ ತಿಳಿಸಿದರು.
ಸಂಸದ ಕ್ಯಾ! ಬ್ರಿಜೇಶ್ ಚೌಟ, ಶಾಸಕರುಗಳಾದ ವೇದವ್ಯಾಸ್ ಕಾಮತ್, ಡಾ. ವೈ ಭರತ್ ಶೆಟ್ಟಿ, ರಾಜ್ಯ ಬಿಜೆಪಿ ಸಂಘಟನ ಪರ್ವ ಚುನಾವಣಾಧಿಕಾರಿ ಕ್ಯಾ!ಗಣೇಶ್ ಕಾರ್ಣಿಕ್ ಈ ಸಂದರ್ಭ ಉಪಸ್ಥಿತರಿದ್ದರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು 2024 ಜನವರಿಯಲ್ಲಿ ಸತೀಶ್ ಕುಂಪಲ ಅವರನ್ನು ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಿದ್ದರು.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಸತೀಶ್ ಕುಂಪಲ ಅವರನ್ನು ಮುಂಬಯಿ ನ್ಯೂಸ್ ನ ನಿರ್ದೇಶಕ ಕುಮಾರ್ ಎನ್ ಬಂಗೇರ ಅಭಿನಂದಿಸಿದ್ದಾರೆ.

next post