April 1, 2025
ಮುಂಬಯಿ

ಜಗಜ್ಯೋತಿ ಕಲಾವೃಂದ, ಮುಂಬಯಿ ಇದರ 38 ನೇ ವಾರ್ಷಿಕೋತ್ಸವ ಮತ್ತು ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಕಥಾ ಹಾಗೂ ಕಾವ್ಯ ಪ್ರಶಸ್ತಿ ಪ್ರದಾನ

ಮುಂಬಯಿ ಮಹಾನಗರದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಜಗಜ್ಯೋತಿ ಕಲಾವೃಂದ, ಮುಂಬಯಿ ಇದರ 38 ನೇ ವಾರ್ಷಿಕೋತ್ಸವ ಮತ್ತು ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಕಥಾ ಹಾಗೂ ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭವು ಫೆಬ್ರವರಿ 9 ರ ರವಿವಾರ ಡೊಂಬಿವಲಿ ಪೂರ್ವದ ಲೇವಾ ಭವನ ಸಭಗೃಹದಲ್ಲಿ ನಡೆಯಿತು.

ಮೊದಲಿಗೆ ವಿವಿಧ ಸಂಸ್ಥೆಯ ಸದಸ್ಯರಿಂದ ನೃತ್ಯ ಕಾರ್ಯಕ್ರಮ ನಡೆಯಿತು.

ನಂತರ ಪ್ರಾರ್ಥನೆಯೊಂದಿಗೆ ವೇದಿಕೆಯ ಗಣ್ಯರು ದೀಪ ಪ್ರಜ್ವಲಿಸಿ ಸಭಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜಗಜ್ಯೋತಿ ಕಲಾವೃಂದದ ಅಧ್ಯಕ್ಷ ರಮೇಶ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ವಾಗಿ ಮಾತನಾಡಿದರು.

ಮಾಜಿ ಅಧ್ಯಕ್ಷ ಪ್ರಸ್ತುತ ಸಲಹೆಗಾರ ಸುಕುಮಾರ್ ಎನ್ ಶೆಟ್ಟಿ ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಕಥಾ ಹಾಗೂ ಕಾವ್ಯ ಪ್ರಶಸ್ತಿಯ ಬಗ್ಗೆ ವಿವರಣೆ ನೀಡಿದರು.

ಕಥಾ ಪ್ರಶಸ್ತಿ ಪುರಸ್ಕೃತೆ ಶ್ರೀಮತಿ ಸ್ಮಿತಾ ಅಮೃತರಾಜ್ ಸಂಪಾಜೆ ಹಾಗೂ ಕಾವ್ಯ ಪ್ರಶಸ್ತಿ ಪುರಸ್ಕೃತೆ ಅಕ್ಷತಾ ಕೃಷ್ಣಮೂರ್ತಿಕಾರವಾರ ಅವರನ್ನು ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಪ್ರಶಸ್ತಿ ಸ್ವೀಕರಿಸಿದ ವಿಜೇತೆಯರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು

ಕಾರ್ಯಕ್ರಮದಲ್ಲಿ ಅಥಿತಿಗಳಾಗಿ ಉಪಸ್ಥಿತರಿದ್ದ
ಬಂಟ್ಸ್ ಸಂಘ ಮುಂಬಯಿಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಉಪ ಕಾರ್ಯಾಧ್ಯಕ್ಷರಾದ ಸುಬ್ಬಯ್ಯ ಶೆಟ್ಟಿ, ಬಂಟ್ಸ್ ಸಂಘ ಮುಂಬಯಿಯ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಉಪಕಾರ್ಯಧ್ಯಕ್ಷರಾದ ಪ್ರಭಾಕರ್ ಆರ್ ಶೆಟ್ಟಿ, ಬಂಟ್ಸ್ ಸಂಘ ಮುಂಬಯಿ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಯೋಗಿನಿ ಸುಕುಮಾರ್ ಶೆಟ್ಟಿ ಜಗಜ್ಯೋತಿ ಕಲಾವೃಂದ ಮಾಡುತ್ತಿರುವ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಶಸ್ತಿಯ ತೀರ್ಪುಗಾರರಾದ ಸಾ ದಯ ಹಾಗೋ ಅನಿತಾ ಪೂಜಾರಿ ತಾಕೊಡೆ, ಹಾಗೂ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರನ್ನು ಮತ್ತು ಕಾರ್ಯಕ್ರಮಕ್ಕೆ ಸಹಕರಿಸಿದವರನ್ನು ಪುಷ್ಪಗುಚ್ಛ ನೀಡಿಗೌರವಿಸಲಾಯಿತು.

ಸಭಾಧ್ಯಕ್ಷತೆ ವಹಿಸಿದ್ದ ಕರ್ನಾಟಕ ಸಂಘ ಡೊಂಬಿವಲಿ ಇದರ ಕಾರ್ಯಾಧ್ಯಕ್ಷರಾದ ಡಾಕ್ಟರ್ ದಿವಾಕರ್ ಶೆಟ್ಟಿ ಇಂದ್ರಾಳಿ ಅಧ್ಯಕ್ಷೀಯ ನುಡಿಗಳನ್ನಾಡಿದರು.

ವೇದಿಕೆಯಲ್ಲಿ ಬಂಟ್ಸ್ ಸಂಘ ಮುಂಬಯಿ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷರಾದ ಅರುಣ್ ಶೆಟ್ಟಿ ಪಡುಕುಡೂರ್, ಜಗಜ್ಯೋತಿ ಕಲಾವೃಂದಾದ ಗೌರವ ಪ್ರಧಾನ ಕಾರ್ಯದರ್ಶಿ ಸಂತೋಷ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಬಾಬು ಮೊಗವೀರ, ಕೋಶಾಧಿಕಾರಿ ಚಂದ್ರ ನಾಯ್ಕ, ಉಪಸ್ಥಿತರಿದ್ದರು.

ತೀರ್ಪುಗಾರರಾದ ಸಾ ದಯ ಪ್ರಶಸ್ತಿ ವಿಜೇತರ ಪರಿಚಯ ಓದಿದರೆ, ಕಾರ್ಯದರ್ಶಿ ಸಂತೋಷ್ ಶೆಟ್ಟಿ ಪ್ರತಿಭಾ ಪುರಸ್ಕಾರದ ಯಾದಿ ವಾಚಿಸಿದರು.
ಸಂಘಟಕ, ಮಾಜಿ ಅಧ್ಯಕ್ಷ ವಸಂತ್ ಸುವರ್ಣ ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ಸಮರ್ಪಿಸಿದರು.

ನಂತರ ಹೆಜಮಾಡಿ ಮನೋಜ್ ಕುಮಾರ್ ರವರ ಸಂಯೋಜನೆಯಲ್ಲಿ ತುಳು ವೆಲ್ಪೇರ್ ಅಸ್ಸೊಸಿಯೆಷನ್ ತರಬೇತಿ ಶಿಬಿರದ ವಿದ್ಯಾರ್ಥಿಗಳು ಹಾಗೂ ಮುಂಬಯಿಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ “ಭಾರ್ಗವ ವಿಜಯ” ಎಂಬ ತುಳು ಯಕ್ಷಗಾನ ಪ್ರಸಂಗ ಪ್ರದರ್ಶನಗೊಂಡಿತು.

38 ವರ್ಷಗಳ ಹಿಂದೆ ಮುಂಬಯಿಯ ಪೋರ್ಟ್ ಪರಿಸರದಲ್ಲಿ ವ್ಯಾಸಂಗ ಮಾಡುತ್ತಿದ್ದ ಕೆಲವು ಸಹಿತ್ಯಾಭಿರುಚಿಯ ವಿಧ್ಯಾರ್ಥಿಗಳು ಜಗಜ್ಯೋತಿ ಕನ್ನಡ ವೃಂದ ಎಂಬ ನಾಮದೊಂದಿಗೆ ಶೈಕ್ಷಣಿಕ, ಸಾಹಿತ್ಯಿಕ, ಸಾಂಸ್ಕೃತಿಕ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅಳಿಲಸೇವೆಯನ್ನು ಮಾಡುತ್ತ ನಂತರ ಜಗಜ್ಯೋತಿ ಕಲಾವೃಂದ ಎಂಬ ವಿನೂತನ ನಾಮದೊಂದಿಗೆ ಕನ್ನಡ ತೇರ ನೆಳೆಯುವ ಕಾಯಕದೊಂದಿಗೆ ಉದಯೋನ್ಮುಖ ಸಾಹಿತಿಗಳನ್ನು ಸಾರಸ್ವತ ಲೋಕಕ್ಕೆ ಪರಿಚಹಿಸುತ್ತ, ಇದೀಗ
ಅಧ್ಯಕ್ಷರಾದ ರಮೇಶ್ ಎಸ್ ಶೆಟ್ಟಿ, ಗೌ. ಪ್ರ. ಕಾರ್ಯದರ್ಶಿ ಸಂತೋಷ್ ಪಿ ಶೆಟ್ಟಿ, ಕೋಶಾಧಿಕಾರಿ ಚಂದ್ರ ಏನ್ ನಾಯ್ಕ್, ಸಂಘಟನಾ ಕಾರ್ಯದರ್ಶಿ ಬಾಬು ಕೆ ಮೊಗವೀರ, ಸಲಹೆಗಾರರಾದ ಸುಕುಮಾರ್ ಏನ್ ಶೆಟ್ಟಿ, ಶೇಖರ್ ಅರ ಶೆಟ್ಟಿ ಹಾಗೂ ಎಲ್ಲಾ ಸದಸ್ಯರ ಸಹಕಾರದೊಂದಿಗೆ 38 ನೇ ವಾರ್ಷಿಕೋತ್ಸವ ವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡಿತು. ಇವರ ಚಿಂತನೆಯ ಚಿಲುಮೆಗೆ ನಿಮ್ಮ ನೆಲ್ಮೆಯ ಒಲುಮೆಯು ಸಲಹೆ ಸಹಕಾರ ದೊಂದಿಗೆ ಹರಿದು ಬರಲಿ ಎಂಬ ಆಶಯ ನಮ್ಮದು

Related posts

ಇಲ್ಲಿ ಸ್ಥಳದ ಅಭಾವ ಇದೆ ಅದರೆ  ಶ್ರೀ ದುರ್ಗೆ ಯನ್ನು ಪೂಜಿಸಲು ಭಕ್ತರ  ಅಭಾವಿಲ್ಲ – ಪ್ರಭಾಕರ್ ಶೆಟ್ಟಿ

Mumbai News Desk

9 ಹ್ಯಾಂಡ್ಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಡೊಂಬಿವಲಿ ಸ್ಥಳೀಯ ಸಮಿತಿವತಿಯಿಂದ ಸಮಾಜದ ಮಹಿಳೆಯರಿಗಾಗಿ ಆಯೋಜಿಸಿದ ಅರಿಶಿಣ ಕುಂಕುಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ :-

Mumbai News Desk

ಮಾಲಾಡ್ ಪೂರ್ವ  ಓಂ ಶ್ರೀ ಸಾಯಿ ದುರ್ಗಾ ನಿತ್ಯಾನಂದ ಟ್ರಸ್ಟ್  ನವರಾತ್ರಿ ಪೂಜೆ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ

Mumbai News Desk

ಶ್ರೀ ಕಟೀಲು ದುರ್ಗಾಪರಮೇಶ್ವರಿ ಕಲ್ಲುರ್ಟಿ ಮಂತ್ರದೇವತಾ ಸಾನಿಧ್ಯ ಕೋಪರಖೈರಣೆ, ಧರ್ಮದೈವ ತಾಯಿ ಕಲ್ಲುರ್ಟಿಯ ಮಾಸಿಕ ಸಂಕ್ರಾಂತಿ ಸೇವೆ

Mumbai News Desk

ಶ್ರೀ ಮೂಕಾಂಬಿಕಾ ಸೋಷಿಯಲ್ ವೆಲ್ಫೇರ್ ಫೌಂಡೇಶನ್ ನ ಮಹಿಳಾ ಭಚತ್ ಘಟಕ ವತಿಯಿಂದ ಹಳದಿ ಕುಂಕುಮ ಕಾರ್ಯಕ್ರಮ

Mumbai News Desk