32 C
Mumbai
March 7, 2026
Mumbai News Kannada
ಸುದ್ದಿ

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ, 18 ಜನರ ಸಾವು





ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿ 15 ಜನ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ. ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ ಎಂದು ತಿಳಿಸಿದೆ. 15 ಜನರಿಗೆ ಗಾಯಗೊಂಡಿದ್ದು, ಎಲ್ಎನ್​ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನವದೆಹಲಿ ರೈಲು ನಿಲ್ದಾಣದಿಂದ ಪ್ರಯಾಗ್​ರಾಜ್​ ಮಹಾ ಕುಂಭಮೇಳಕ್ಕೆ ರೈಲ್ವೆ ಇಲಾಖೆ ಎರಡು ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಯಾಗ್​ರಾಜ್​ಗೆ ತೆರಳಲು ವಿವಿಧ ರಾಜ್ಯಗಳಿಂದ ಬಂದಿದ್ದ ನೂರಾರು ಪ್ರಯಾಣಿಕರು ನವದೆಹಲಿ ರೈಲು ನಿಲ್ದಾಣದೊಳಗೆ ನುಗ್ಗಿದ್ದಾರೆ. ಪ್ಲಾಟ್​ಫಾರ್ಮ್​ ನಂಬರ್ 14 ಮತ್ತು 15ರಲ್ಲಿ ನಿಂತಿದ್ದ ಪ್ರಯಾಗ್​​​ರಾಜ್​ಗೆ ಹೊರಡುವ​ ವಿಶೇಷ ರೈಲಿನ ಜನರಲ್ ಬೋಗಿಗೆ ಹತ್ತುವಾಗ ನೂಕುನುಗ್ಗಲು ಸಂಭವಿಸಿ, ಕಾಲ್ತುಳಿತವಾಗಿದೆ.

ವಿಚಾರ ತಿಳಿದು ಸ್ಥಳಕ್ಕೆ ಎನ್​ಡಿಆರ್​ಎಫ್​ ಸಿಬ್ಬಂದಿ, ರೈಲ್ವೆ, ದೆಹಲಿ ಪೊಲೀಸ್​ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದರು. ರಕ್ಷಣಾ ಕಾರ್ಯಾಚರಣೆ ಮುಕ್ತಾಯಗೊಂಡಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಎನ್​ಡಿಆರ್​ಎಫ್​ ಮಾಹಿತಿ ನೀಡಿದೆ.



Related posts

ಬಜೆ ಮೊಗವೀರ ಸುವರ್ಣ ಆದಿ ಮೂಲಸ್ಥಾನ, ಮುಂಬಾಯಿ ಶಾಖೆಯ 100ನೇ ಮಹಾಸಭೆ

Mumbai News Desk

ಸೌದಿ ಅರೇಬಿಯಾದ ಮದೀನಾ ಬಳಿ ಬಸ್-ಟ್ಯಾಂಕರ್ ಡಿಕ್ಕಿ: 42 ಭಾರತೀಯರು ಸಾವು

Mumbai News Desk

ಯಕ್ಷ ಪ್ರೇಮಿಗಳ, ಕಲಾಭಿಮಾನಿಗಳ ಮನ ಗೆದ್ದ ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸದಸ್ಯರ ಯಕ್ಷಗಾನ.

Mumbai News Desk

ಸಂಗೀತ ಕ್ಷೇತ್ರದಲ್ಲಿ ಮಿಂಚುತ್ತಿರುವ ಯುವ ಪ್ರತಿಭೆ ಆಕಾಶ್ : ಲಿಯೋ ಕ್ಲಬ್ ಮಂಗಳಾದೇವಿ ವತಿಯಿಂದ ಸನ್ಮಾನ

Mumbai News Desk

ತುಳು ಸಂಘ ಬೊರಿವಲಿ, ವಿಹಾರ ಕೂಟ, ಸ್ನೇಹ ಮಿಲನ

Mumbai News Desk

ಉಡುಪಿ : ಸುನಂದ ಕೇಶವ ಸನಿಲ್ ನಿಧನ

Mumbai News Desk