ಬಾಂಬೆ ಬಂಟ್ಸ್ ಅಸೋಸಿಯೇಶನ್, ಇದರ ಉನ್ನತ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ‘”ಬಂಟ್ಸ್ ತರಂಗ ದಿ ಯೂತ್ ವೇವ್ ಭಾರತ್ ಕಾ ಸಫರ್” ಹಾಗೂ ಪದವಿ ಪ್ರಧಾನ ಸಮಾರಂಭ ಫೆ. 26 ರಂದು ಅಪರಾಹ್ನ 2ರಿಂದ ಜೂಯಿ ನಗರದ ಬಂಟ್ಸ್ ಸೆಂಟರ್‌ನ ಶಶಿಕಲಾ ಮನ್‌ಮೋಹನ್ ಶೆಟ್ಟಿ ಕಾಂಪ್ಲೆಕ್ಸ್‌ನ ಶ್ರೀಮತಿ ಸೌಮ್ಯಲತಾ ಸದಾನಂದ ಶೆಟ್ಟಿ ಆಡಿಟೋರಿಯಂನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ.
ಬಾಂಬೆ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ಸಿಎ ಸುರೇಂದ್ರ ಕೆ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಡಾ| ಶಾಂತಿಲಾಲ್ ಧಾನಾಜೀ ದೇವೆ ಆರ್ಟ್ಸ್ ಕಾಲೇಜ್ ಆ್ಯಂಡ್ ಕಾಮರ್ಸ್ ಆ್ಯಂಡ್ ಸಾಯನ್ಸ್ ಕಾಲೇಜ್ ವಾಡಾ, ಇದರ ಪ್ರಾಂಶುಪಾಲೆ ಡಾ| ಕಿಶೋರಿ ಜಗದೀಶ್ ಭಗತ್ ಭಾಗವಹಿಸಲಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ
ಕಾರ್ಯಕ್ರಮ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಗುವುದು.
ಸಮಾರಂಭದಲ್ಲಿ ಹಿತೈಷಿಗಳು, ಶಿಕ್ಷಣ ಪ್ರೇಮಿಗಳು, ದಾನಿಗಳು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾರಂಭದ ಯಶಸ್ಸಿಗೆ ಸಹಕರಿಸುವಂತೆ ಉನ್ನತ ಶಿಕ್ಷಣ ಸಮಿತಿಯ ಕಾರ್ಯಧ್ಯಕ್ಷ ನ್ಯಾಯವಾದಿ ರತ್ನಾಕರ ವಿ. ಶೆಟ್ಟಿ , ಸಲಹಾ ಸಮಿತಿಯ ಕಾರ್ಯಧ್ಯಕ್ಷ ನ್ಯಾಯವಾದಿ ಅಶೋಕ್ ಡಿ. ಶೆಟ್ಟಿ, ಗೌರವ ಕಾರ್ಯದರ್ಶಿ ಶ್ರೀಧರ ಕೆ. ಶೆಟ್ಟಿ, ಜತೆ ಕಾರ್ಯದರ್ಶಿ ವಿನೋದ್ ಆಳ್ವ, ಉನ್ನತ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲೆ ಡಾ| ರಶ್ಮಿ ಡಿ. ಚಿತ್ ಲಾಂಗೆ, ಸಾಂಸ್ಕೃತಿಕ ವಿಭಾಗದ ನಿಧಿ ಎಸ್. ಸಾವಂತ್, ಬಾಂಬೆ ಬಂಟ್ಸ್ ಅಸೋಸಿಯೇಶನ್‌ನ ಉಪಾಧ್ಯಕ್ಷ ನ್ಯಾಯವಾದಿ ಡಿ. ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಐಕಳ ಕಿಶೋರ್ ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ವಿಶ್ವನಾಥ ಶೆಟ್ಟಿ ,ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ತೇಜಾಕ್ಷಿಎಸ್. ಶೆಟ್ಟಿ ,ಯುವ ವಿಭಾಗದ ಕಾರ್ಯಾಧ್ಯಕ್ಷೆ ದೃಶ್ಯಾ ಕೆ. ಶೆಟ್ಟಿ, ವಿದ್ಯಾರ್ಥಿ ಕೌನ್ಸಿಲ್ ಅಧ್ಯಕ್ಷ ಶೇಖ್ ಮೊಹಮ್ಮದ್ ಹಾಗೂ ಬಾಂಬೆ ಬಂಟ್ಸ್ ಅಸೋಸಿಯೇಶನ್ ನ ಇತರ ಪದಾಧಿಕಾರಿಗಳು, ವಿವಿಧ ಉಪಸಮಿತಿಗಳ ಪದಾಧಿಕಾರಿಗಳು, ಕಾಠ್ಯಕಾರಿ ಸಮಿತಿಯ ಸದಸ್ಯರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.