September 6, 2026
Mumbai News Kannada
ಸುದ್ದಿ

ಕರ್ನಾಟಕ : ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ.





ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಉಚ್ಛಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಆದೇಶ ಹೊರಡಿಸಿದೆ. ಬಿಜೆಪಿ ಶಿಸ್ತು ಸಮಿತಿ ಎರಡು ಶೋಕಾಸ್ ನೋಟಿಸ್ ನೀಡಿದ್ದರೂ, ಪದೇ ಪದೇ ಪಕ್ಷದ ವಿರೋಧಿ ಚಟುವಟಿಕೆ, ಪಕ್ಷದ ಶಿಸ್ತು ಉಲ್ಲಂಘನೆ ಮಾಡುತಿದ್ದ ಬಸನಗೌಡ ಯತ್ನಾಳ್ ಫೆಬ್ರವರಿ 10ರಂದು ಶೋಕಾಸ್ ನೋಟಿಸಿಗೆ ಉತ್ತರ ನೀಡಿದ್ದರು.ಆದರೆ ಯತ್ನಾಳ್ ಅವರ ಉತ್ತರ, ಸ್ಪಷ್ಟನೆ ಒಪ್ಪದ ಕೇಂದ್ರ ಶಿಸ್ತು ಸಮಿತಿ ಇಂದು(ಮಾ. 26) ಈ ನಿರ್ಧಾರ ಕೈಗೊಂಡಿದೆ, ಅಲ್ಲದೆ ಇತರ ರೆಬಲ್ ನಾಯಕರಿಗೂ ಪರೋಕ್ಷ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಅವಧಿಗೆ ಅವರನ್ನು ಉಚ್ಛಾಟನೆ ಮಾಡಲಾಗಿದೆ ಎಂದು ಬಿಜೆಪಿ ಕೇಂದ್ರ ಸುಸ್ತು ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.



Related posts

ಮಂಗಳೂರು ದಸರಾಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಆಹ್ವಾನ

Mumbai News Desk

ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ – 58 ನೇ ಆರ್ ಎನ್ ಉಚ್ಚಿಲ್ ಸ್ಮಾರಕ ವಾರ್ಷಿಕ ಅಥ್ಲೆಟಿಕ್ಸ್ ಮೀಟ್

Mumbai News Desk

ಪಶ್ಚಿಮ ಬಂಗಾಳ ವಿಧಾನಸಭಾ ವಿಸರ್ಜನೆ: ಮಮತಾ ಬ್ಯಾನರ್ಜಿ ರಾಜೀನಾಮೆ ನಿರಾಕರಣೆ ಹಾಗೂ ರಾಜ್ಯಪಾಲರ ಕಠಿಣ ಕ್ರಮ

Mumbai News Desk

ದುಬೈ ಯಲ್ಲಿ ಅದ್ದೂರಿಯಾಗಿ ಜರಗಿದ “ಅಂತಾರಾಷ್ಟ್ರೀಯ ಜನಪದ ಉತ್ಸವ – 2025”

Mumbai News Desk

ಪ್ರತಿಷ್ಠಿತ ಬೂಖರ್ ಪ್ರಶಸ್ತಿ ಮೂಡಿಗಿರಿಸಿಕೊಂಡ ಸಾಹಿತಿ ಬಾನು ಮುಷ್ತಾಕ್ : ಕನ್ನಡದ ಮೊಟ್ಟ ಮೊದಲ ಕೃತಿಗೆ ಪ್ರಶಸ್ತಿ ಗರಿ

Mumbai News Desk

ಜಾಗತಿಕ ಮತ್ತು ರಾಷ್ಟ್ರೀಯ ವಿದ್ಯಮಾನಗಳೊಂದಿಗೆ ಕರ್ನಾಟಕ, ಮುಂಬೈ ಹಾಗೂ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (29/05)ಪ್ರಮುಖ ಅಪ್‌ಡೇಟ್‌ಗಳು

Mumbai News Desk