July 23, 2026
Mumbai News Kannada
ಸುದ್ದಿ

ಕರಾವಳಿ ಜಿಲ್ಲೆಗಳಿಗೆ ನಿರಂತರ ವಿದ್ಯುತ್ ಪೂರೈಸಲು ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿ ಉಪಮುಖ್ಯಮಂತ್ರಿಗಳಿಗೆ ಮನವಿ







ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ 24 ಗಂಟೆಗಳ ಕಾಲ ವಿದ್ಯುತ್ ಪೂರೈಸುವಂತೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಕರ್ನಾಟಕ ಸರಕಾರದ ಉಪಮುಖ್ಯಮಂತ್ರಿಯನ್ನು ಒತ್ತಾಯಿಸಿದೆ.

ಮಾ. 25 ರಂದು ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿಯ  ಸಂಸ್ಥಾಪಕರಾದ ತೋನ್ಸೆ ಜಯಕೃಷ್ಣ ಶೆಟ್ಟಿ ಮತ್ತು ಉಪಾಧ್ಯಕ್ಷರಾದ ಕೆ ಪಿ ಜಗದೀಶ್ ಅಧಿಕಾರಿಯವರು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಅವರ ಕಛೇರಿಯಲ್ಲಿ ಬೇಟಿಯಾಗಿ ಸದ್ಯ ಜಿಲ್ಲೆಗಳಲ್ಲಿ ವಿದ್ಯುತ್ ಕಡಿತದಿಂದಾಗಿ ಜನಸಾಮಾನ್ಯರಿಗೆ ಆಗುತ್ತಿರುವ ಅನಾನುಕೂಲತೆಗಳನ್ನು ವಿವರಿಸಿ ಜಿಲ್ಲೆಗಳಿಗೆ ನಿರಂತರ ವಿದ್ಯುತ್ ಪೂರೈಸುವಂತೆ ಮನವಿ ಸಲ್ಲಿಸಲಾಯಿತು. ಮಾನ್ಯ ಉಪಮುಖ್ಯಮಂತ್ರಿಗಳು ಜಿಲ್ಲೆಗಳ ಅಭಿವೃದ್ದಿಗಾಗಿ ಸಮಿತಿಯು ಕೈಗೊಂಡ ಕಾರ್ಯದ ಬಗ್ಗೆ ಈ ಬಗ್ಗೆ ಸಂತೋಷ ವ್ಯಕ್ತಪಡಿಸುತ್ತಾ ವಿದ್ಯುತ್ ಪೂರೈಕೆ ಬಗ್ಗೆ
ಸಂಬಂದಪಟ್ಟ ಅಧಿಕಾರಿಗಳಿಗೆ ತಿಳಿಸುವುದಾಗಿ ಭರವಸೆಯಿತ್ತರು.  ಅಲ್ಲದೆ ಈ ಬಗ್ಗೆ ಕರ್ನಾಟಕ ಸರ್ಕಾರದ ಮಾನ್ಯ ಸಭಾಪತಿ ಯು.ಟಿ. ಖಾದರ್ ಅವರನ್ನು  ಮಾರ್ಚ್ 18ರಂದು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.


ಮಾರ್ಚ್ 19ರಂದು ಸಮಿತಿಯ ಸಂಸ್ಥಾಪಕರಾದ ತೋನ್ಸೆ ಜಯಕೃಷ್ಣ ಎ ಶೆಟ್ಟಿ, ಅಧ್ಯಕ್ಷರಾದ ನಿತ್ಯಾನಂದ ಡಿ ಕೋಟ್ಯಾನ್, ಉಪಾಧ್ಯಕ್ಷರಾದ ಜಗಧೀಶ್ ಅಧಿಕಾರಿ, ಮಾಜಿ ಮುಖ್ಯ ಮಂತ್ರಿ, ಕಾಂಗ್ರೇಸ್ ನಾಯಕ ಡಾ. ವೀರಪ್ಪ ಮೊಯ್ಲಿ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿ ಸಮಿತಿಯ ಕಾರ್ಯ, ಸಾಧನೆಯನ್ನು ವಿವರಿಸಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ನಿರಂತರ ವಿದ್ಯುತ್ ಪೂರೈಕೆಯ ಅಗತ್ಯತೆಯನ್ನು ಒತ್ತಿ ಹೇಳಿದರು.

ಸಮಿತಿಯು ಮಾರ್ಚ್ 15ರಂದು ಈ ಬಗ್ಗೆ ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿ ಯನ್ನು ಆಯೋಜಿಸಿದ್ದು, ಸಂಸ್ಥಾಪಕರಾದ ತೋನ್ಸೆ ಜಯಕೃಷ್ಣ ಶೆಟ್ಟಿ, ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಡಿ ಕೋಟ್ಯಾನ್, ಉಪಾಧ್ಯಕ್ಷರಾದ ಕೆ ಪಿ ಜಗದೀಶ್ ಅಧಿಕಾರಿ, ಜಿಲ್ಲಾ ಉಪಾಧ್ಯಕ್ಷರಾದ ಪ್ರೊಫೆಸರ್ ಶಂಕರ್, ಜಿಲ್ಲಾ ಕಾರ್ಯದರ್ಶಿ ಸುರೇಂದ್ರ ಮೆಂಡನ್, ಜೊತೆ ಕಾರ್ಯದರ್ಶಿ ಶೇಖರ್ ಗುಜ್ಜರಬೆಟ್ಟು ಹಾಗೂ ಸದಸ್ಯರಾದ ಅರುಣ್ ಸನಿಲ್ ಮೊದಲಾದವರು ಉಪಸ್ಥಿತರಿದ್ದು ಉಡುಪಿಯ ಪಡುಬಿದ್ರಿಯಲ್ಲಿ ಕಾರ್ಯಾಚರಿಸುತ್ತಿರುವ ಉಷ್ಣ ವಿದ್ಯುತ್ ಸ್ಥಾವರದಿಂದ ಜಿಲ್ಲೆಗಳಿಗೆ ಪೂರ್ಣ ಪ್ರಮಾಣದ ವಿದ್ಯುತ್ ಪೂರೈಕೆ ಮಾಡಬೇಕಾದ ಬಗ್ಗೆ ಸರಕಾರದ ಹಾಗೂ ಅಧಿಕಾರಿಗಳ ಗಮನಕ್ಕೆ ತರುವ ಬಗ್ಗೆ ತೀರ್ಮಾನಿಸಲಾಗಿತ್ತು ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಮುಂಡ್ಕೂರು  ಸುರೇಂದ್ರ ಸಾಲ್ಯಾನ್ ತಿಳಿಸಿದ್ದಾರೆ. 



Related posts

ಟಿಎಂಸಿ ಭದ್ರಕೋಟೆ ಫಾಲ್ಟಾದಲ್ಲಿ ಬಿಜೆಪಿಯ ದೇಬಾಂಗ್ಶು ಪಾಂಡಾಗೆ ಐತಿಹಾಸಿಕ ಗೆಲುವು: ಇತಿಹಾಸ ಬರೆದ ಪಶ್ಚಿಮ ಬಂಗಾಳ ಉಪಚುನಾವಣೆ

Mumbai News Desk

ಅಂತರಾಷ್ಟ್ರೀಯ ಖ್ಯಾತಿಯ ಜ್ಯೋತಿಷಿ, ಪುರೋಹಿತರಾದ ಡಾ. ಎಂ. ಜೆ. ಪ್ರವೀಣ್ ಭಟ್ ಅವರ ಜಾಹೀರಾತು ಮುಂಬೈ ಲೋಕಲ್ ಟ್ರೈನ್ ನಲ್ಲಿ ನೀಡಿ ಅಭಿಮಾನ ಮೆರೆದ ಅವರ ಅಭಿಮಾನಿ.

Mumbai News Desk

ಆರ್ಯಭಟ ಪುರಸ್ಕೃತ ಕೆ.ಕೆ. ಶೆಟ್ಟರಿಗೆ ಹುಟ್ಟೂರ ಅಭಿನಂದನೆ

Mumbai News Desk

ವಿಶ್ವ ಧಾರ್ಮಿಕ ನಾಯಕರ ಸಮಾವೇಶದಲ್ಲಿ ಪೂಜ್ಯ ಶ್ರೀ ಪುತ್ತಿಗೆ ಶ್ರೀಗಳ ದಿಕ್ಸೂಚಿ ಭಾಷಣ ಹಾಗೂ ಮಾರಿಷಸ್ ಅಧ್ಯಕ್ಷರಿಂದ ಗೌರವದ ಸ್ವಾಗತ

Mumbai News Desk

ಸಾರಸ್ಬತ ವೈದಿಕ ಸೇವಾ ಪ್ರತಿಷ್ಟಾನಮ್ (ರಿ) ಸಂಸ್ಥೆಯ ಉದ್ಘಾಟನೆ

Mumbai News Desk

ಶಿವಸೇನಾ ದಕ್ಷಿಣ ಭಾರತಿಯ ಘಟಕದಿಂದ ಪ್ರಧಾನಮಂತ್ರಿ ಆತ್ಮನಿರ್ಭರ ಯೋಜನೆಯ ಬಗ್ಗೆ ಶಿಬಿರ.

Mumbai News Desk