ಮಂಗಳೂರಿನಲ್ಲಿ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಮೇಲೆ ತಲವಾರು ದಾಳಿ ನಡೆಸಿ ಕೊಲೆ ಮಾಡಲಾಗಿದೆ. ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಹತ್ಯೆಯ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ ಹಲವು ಕೊಲೆ, ಕೊಲೆಯತ್ನ ಪ್ರಕರಣಗಳಲ್ಲಿ ಭಾಗಿಯಾಗಿದ್ದ.
ಮಂಗಳೂರಿನಲ್ಲಿ ರೌಡಿ ಶೀಟರ್, ಹಿಂದೂ ಕಾರ್ಯಕರ್ತನ ಮೇಲೆ ತಲವಾರು ದಾಳಿ ಮಾಡಿ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಮಂಗಳೂರಿನ ಸುರತ್ಕಲ್ ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಮೇಲೆ ದಾಳಿ ಮಾಡಿ ಕೊಲೆ ಮಾಡಿದ್ದಾರೆ.
ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ ಘಟನೆ ನಡೆದಿದೆ. 2022ರ ಜುಲೈ 28ರಂದು ಸುರತ್ಕಲ್ ನ ಫಾಜಿಲ್ ಹತ್ಯೆ ಮಾಡಲಾಗಿತ್ತು. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಜಿಲ್ ಹತ್ಯೆ ಮಾಡಿದ್ದರು. ಇದರಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದನು. ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯನಾಗಿದ್ದನು. ಹತ್ಯೆ ಪ್ರಕರಣದಲ್ಲಿ ಭಾಗಿಯಾದ ನಂತರ ಯಾವುದೇ ಜವಾಬ್ದಾರಿ ಇರಲಿಲ್ಲ. ಇನ್ನು ಸುಹಾಸ್ ಶೆಟ್ಟಿ ಹಲವು ಕೊಲೆ, ಕೊಲೆಯತ್ನ ಪ್ರಕರಣದ ಆರೋಪಿಯಾಗಿದ್ದನು.
ಇಂದು ಸಂಜೆ ನಡೆದ ದಾಳಿಯಿಂದ ಗಂಭೀರ ಸ್ಥಿತಿಯಲ್ಲಿರುವ ಸುಹಾಸ್‌ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ದಾಖಲು ಮಾಡಲಾಗಿತ್ತು.. ಆದರೆ, ತಲವಾರು ದಾಳಿಗೆ ತುತ್ತಾಗಿದ್ದ ಸುಹಾಸ್ ಶೆಟ್ಟಿ ತೀವ್ರ ರಕ್ತಸ್ರಾವ ಉಂಟಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಸಾವಿಗೀಡಾಗಿದ್ದಾರೆ. ಮಂಗಳೂರಿನಲ್ಲಿ ರೌಡಿ ಶೀಟರ್, ಹಿಂದೂ ಕಾರ್ಯಕರ್ತನ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರಿನ ಎ.ಜೆ ಆಸ್ಪತ್ರೆ ಎದುರು ಹಿಂದೂ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಸೇರಿದ್ದಾರೆ. ಆಸ್ಪತ್ರೆಗೆ ಬಿಜೆಪಿ ಮತ್ತು ಹಿಂದೂ ಸಂಘಟನೆ ನಾಯಕರ ಆಗಮಿಸಿದ್ದಾರೆ
.