September 6, 2026
Mumbai News Kannada
ಸುದ್ದಿ

ಆಪರೇಷನ್ ಸಿಂಧೂರ್ – ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತ ಸೇನೆ ಪ್ರತಿಕಾರದ ದಾಳಿ





ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಕೊನೆಗೂ ಭಾರತೀಯ ಸೇನೆ ಪಾಕಿಸ್ತಾನ ಪ್ರೇರಿತ ಉಗ್ರ ನೆಲೆಗಳ ಮೇಲೆ ದಾಳಿ ಮಾಡುವ ಮೂಲಕ ಪ್ರತಿಕಾರ ತೀರಿಸಿಕೊಂಡಿದೆ.
ಮೇ. 7ರ ನಸುಕಿನಲ್ಲಿ ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನದ ಹಿಡಿತದಲ್ಲಿರುವ ಒಂಬತ್ತು ಸ್ಥಳಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ಮಾಡಿದ್ದು, ಪಾಕಿಸ್ತಾನಿ ಮಿಲಿಟರಿ ವಕ್ತಾರರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. ಈ ದಾಳಿಯಲ್ಲಿ ಇಲ್ಲಿಯವರೆಗೆ ಮೂವರು ಸಾವನ್ನಪ್ಪಿದ್ದಾರೆ ಮತ್ತು ಅನೇಕ ಭಯೋತ್ಪಾದಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಜೈಷ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೊಯ್ಬಾ ನೆಲೆಗಳನ್ನು ಪ್ರಮುಖವಾಗಿ ಗುರಿಯಾಗಿಸಿ ಭಾರತೀಯ ಸೇನೆ ದಾಳಿ ನಡೆಸಿದೆ. ಭಯೋತ್ಪಾದಕರ ಅನೇಕ ಅಡಗುತಾಣಗಳು ನಾಶವಾಗಿವೆ. ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನವು ಪಿಓಕೆಯಲ್ಲಿ ತನ್ನ ಸೇನಾ ಜಮಾವಣೆ ಹೆಚ್ಚಿಸಲು ಪ್ರಾರಂಭಿಸಿತ್ತು.
ಸರಿಯಾಗಿ ಪಹಲ್ಗಾಮ್ ದಾಳಿಯ ಎರಡು ವಾರಗಳ ಬಳಿಕ ಭಯೋತ್ಪಾದಕರಿಗೆ ತಕ್ಕ ಪಾಠ ಕಲಿಸಿರುವ ಭಾರತ 9ನೇಲೆಗಳನ್ನು ಧ್ವಂಸ ಮಾಡಿದೆ ಭಾರತದ ಅಮಾಯಕ 26 ಜೀವಗಳನ್ನು ಬಲಿ ಪಡೆದ ಹಾಗೂ ಭಾರತದಲ್ಲಿ ಇನ್ನಷ್ಟು ಭಯೋತ್ಪಾದಕ ದಾಳಿ ಬಗ್ಗೆ ಯೋಜನೆ ರೂಪಿಸುತಿದ್ದ ನೆಲೆಗಳು ಇವೇ ಎಂದು ಭಾರತೀಯ ಸೇನೆ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ರಾತ್ರಿ ಇಡೀ ಪಾಕಿಸ್ತಾನದ ವಿರುದ್ಧದ ಕಾರ್ಯಚರಣಿಯ ಮೇಲ್ವಿಚಾರಣೆ ಮಾಡಿದ್ದರು ಎಂದು ಹೆಸರು ಬಹಿರಂಗ ಪಡಿಸಲು ಬಯಸದ ಭಾರತೀಯ ಅಧಿಕಾರಿಯೊಬ್ಬರು ಹೇಳಿದರು.



Related posts

ದಿ. ದಾಮೋದರ್ ಸುವರ್ಣ ಜನ್ಮಶತಾಬ್ದಿ ಆಚರಣೆ : ಡಾ. ಮೋಹನ್ ಬಿ ಅವರಿಗೆ ಗಣ್ಯರ ಸಮ್ಮುಖದಲ್ಲಿ ಗೌರವ

Mumbai News Desk

ಮಾತೃಭೂಮಿ  ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ. ಯಿಂದ ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಅವರಿಗೆ ಅಭಿನಂದನೆ.

Mumbai News Desk

*ಭಾರತ್ ಬ್ಯಾಂಕ್ ಬೋಯಿಸರ್ ಶಾಖೆಯಲ್ಲಿ 48ನೇ ಸಂಸ್ಥಾಪನಾ ದಿನ ಆಚರಣೆ

Mumbai News Desk

ಶಿವಪುರ ಶ್ರೀ ಶಂಕರದೇವ ದೇವಸ್ಥಾನದ ಜೀರ್ಣೋದ್ಧಾರ ಸಮಾಲೋಚನಾ ಸಭೆ

Mumbai News Desk

ಬೆಂಗಳೂರು : ಇಬ್ಬರು ಮಕ್ಕಳಲ್ಲಿ ಎಚ್ಎಂಪಿವಿ ವೈರಸ್ ಪತ್ತೆ, ಆತಂಕ ಪಡುವ ಅಗತ್ಯವಿಲ್ಲ – ಆರೋಗ್ಯ ಇಲಾಖೆ

Mumbai News Desk

ಸಾಕ್ಷರತೆ ಆದರೆ ಸಾಲದು, ಜೀವನಕ್ಕೆ ಸ್ಪಂದಿಸುವ ಶಿಕ್ಷಣ ಮುಖ್ಯ: ಬಿ.ಕೆ.ಹರಿಪ್ರಸಾದ್.

Mumbai News Desk