30.5 C
Mumbai
June 8, 2026
Mumbai News Kannada
ಕ್ರೀಡೆ

ಟೆಸ್ಟ್‌ ಕ್ರಿಕೆಟ್‌ಗೆ ವಿರಾಟ್‌ ಕೊಹ್ಲಿ ನಿವೃತ್ತಿ : 14 ವರ್ಷದ ಟೆಸ್ಟ್ ಕೆರಿಯರ್ ಅಂತ್ಯ‌





ಟೀಂ ಇಂಡಿಯಾದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇಂಗ್ಲೆಂಡ್ ಸರಣಿಗೂ ಮುನ್ನ ಕೊಹ್ಲಿ ನಿವೃತ್ತಿ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರೊಂದಿಗೆ 14 ವರ್ಷಗಳ ವೃತ್ತಿಜೀವನ ಅಂತ್ಯವಾಗಿದೆ. ವಿರಾಟ್ ಕೊಹ್ಲಿ 123 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 48.7 ಸರಾಸರಿಯಲ್ಲಿ 9,230 ರನ್ ಗಳಿಸಿದ್ದಾರೆ. ಇದರಲ್ಲಿ 30 ಶತಕ ಮತ್ತು 31 ಅರ್ಧ ಶತಕಗಳು ಸೇರಿವೆ. 2024-25ರ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಕೊನೆಯ ಟೆಸ್ಟ್ ಪಂದ್ಯ ಆಡಿದರು. ಆ ಸರಣಿಯಲ್ಲಿ ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಗಳಿಸಿ ಮಿಂಚಿದ್ದರು.

ಟೀಂ ಇಂಡಿಯಾದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇಂಗ್ಲೆಂಡ್ ಸರಣಿಗೂ ಮುನ್ನ ಕೊಹ್ಲಿ ನಿವೃತ್ತಿ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರೊಂದಿಗೆ 14 ವರ್ಷಗಳ ವೃತ್ತಿಜೀವನ ಅಂತ್ಯವಾಗಿದೆ.

ವಿರಾಟ್ ಕೊಹ್ಲಿ 123 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 48.7 ಸರಾಸರಿಯಲ್ಲಿ 9,230 ರನ್ ಗಳಿಸಿದ್ದಾರೆ. ಇದರಲ್ಲಿ 30 ಶತಕ ಮತ್ತು 31 ಅರ್ಧ ಶತಕಗಳು ಸೇರಿವೆ. 2024-25ರ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಕೊನೆಯ ಟೆಸ್ಟ್ ಪಂದ್ಯ ಆಡಿದರು. ಆ ಸರಣಿಯಲ್ಲಿ ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಗಳಿಸಿ ಮಿಂಚಿದ್ದರು. ನಂತರದ ಕೊನೆಯ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಕೇವಲ 85 ರನ್ ಗಳಿಸಲು ಶಕ್ತರಾದರು.

ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಲು ಬಯಸಿರುವುದಾಗಿ ವಿರಾಟ್‌ ಕೊಹ್ಲಿ ಇತ್ತೀಚೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ತಿಳಿಸಿದ್ದರು. ಆದರೆ, ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದರು.

2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಕೊಹ್ಲಿ, ನಂತರ ಒಂದು ದಶಕಗಳ ಕಾಲ ತಂಡದ ಬ್ಯಾಟಿಂಗ್‌ ಆಧಾರ ಸ್ತಂಭವಾಗಿದ್ದರು. ನಂತರ ತಂಡದ ನಾಯಕತ್ವ ವಹಿಸಿಕೊಂಡರು. ಕೊಹ್ಲಿ ನಾಯಕತ್ವದಲ್ಲಿ ಭಾರತ ಟೆಸ್ಟ್‌ ತಂಡ ಪಾರುಪತ್ಯ ಮೆರೆಯಿತು. 2018-19ರಲ್ಲಿ ಆಸ್ಟ್ರೇಲಿಯಾದಲ್ಲಿ ಭಾರತ ಮೊದಲ ಬಾರಿಗೆ ಟೆಸ್ಟ್ ಸರಣಿ ಗೆದ್ದಿತು. ಕೊಹ್ಲಿ ನಾಯಕತ್ವದಲ್ಲಿ ಭಾರತ ICC ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿತು. ಕೊಹ್ಲಿ ನಾಯಕತ್ವದಲ್ಲಿ ಭಾರತ 68 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 40 ಪಂದ್ಯಗಳಲ್ಲಿ ಗೆದ್ದಿದೆ.

ಟೆಸ್ಟ್‌ಗೆ ವಿದಾಯ ಘೋಷಿಸಿರುವ ಕೊಹ್ಲಿ ಏಕದಿನ ಕ್ರಿಕೆಟ್ ಮುಂದುವರಿಯಲಿದ್ದಾರೆ. ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದು, ಭಾರತೀಯ ಕ್ರಿಕೆಟ್‌ ಪ್ರೇಮಿಗಳಿಗೆ ಬೇಸರ ತರಿಸಿರುವುದಂತೂ ಹೌದು. ಆದರೆ, ಒಂದು ದಶಕಗಳ ಕಾಲ ಕೊಹ್ಲಿ ಟೆಸ್ಟ್‌ನಲ್ಲಿ ತೋರಿದ ಪ್ರದರ್ಶನವನ್ನು ಯಾರಿಂದಲೂ ಮರೆಯಲು ಸಾಧ್ಯವಿಲ್ಲ. ಯಾಕೆಂದರೆ, ಟೆಸ್ಟ್‌ ಕ್ರಿಕೆಟ್‌ನಲ್ಲಿ ಅವರು ಮೂಡಿಸಿದ ಛಾಪು ಅಂತಹದ್ದಾಗಿದೆ.



Related posts

27ನೇ ರಮಾನಾಥ ಪಯ್ಯಡೆ ಸ್ಮಾರಕ ಕಾಲ್ಚೆಂಡು ಲೀಗ್ ಟೂರ್ನಮೆಂಟ್ : ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ಭರ್ಜರಿ ಜಯ

Mumbai News Desk

ಕುಲಾಲ ಸಂಘ ಮುಂಬಯಿ: ಕುಲಾಲ ಕ್ರೀಡೋತ್ಸವದ ಬಹುಮಾನ ವಿತರಣೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ, ಮುಂಬಯಿ : ವಾರ್ಷಿಕ ಕ್ರೀಡೋತ್ಸವದ ಉದ್ಘಾಟನೆ

Mumbai News Desk

ಸ್ಕೇಟಿಂಗ್ : ಅನಘಾ ಮತ್ತು ಆರ್ನಾ ಸಾಧನೆ

Mumbai News Desk

ವೈಭವ್ ಸೂರ್ಯವಂಶಿ ಬಿರುಗಾಳಿ ಬ್ಯಾಟಿಂಗ್ ಗೆ ಇಂಗ್ಲೆಂಡ್ ನಿರುತ್ತರ; 6ನೇ ಬಾರಿ ಅಂಡರ್ 19 ವಿಶ್ವಕಪ್ ಎತ್ತಿ ಹಿಡಿದ ಭಾರತ

Mumbai News Desk

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟ ; ಬುಮ್ರಾ, ಶಮಿ ವಾಪಸ್‌.

Mumbai News Desk