September 6, 2026
Mumbai News Kannada
ಸುದ್ದಿ

ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಗೆ ಎಸ್. ಎಸ್. ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ





ಮಹಾರಾಷ್ಟ್ರ ರಾಜ್ಯ ಶಿಕ್ಷಣ ಮಂಡಳಿಯ ವತಿಯಿಂದ 2024-2025ರ ಶೈಕ್ಷಣಿಕ ಸಾಲಿನ ಎಸ್. ಎಸ್. ಸಿ ಬೋರ್ಡ ಪರೀಕ್ಷೆಯಲ್ಲಿ ಮುಂಬಯಿ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಬಿಲ್ಲವರ ಅಸೋಸಿಯೇಶನ್ ನಡೆಸಿಕೊಂಡು ಬರುತ್ತಿರುವ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಗೆ ಶೇ 100 ಫಲಿತಾಂಶ ದೊರಕಿದೆ. ಈ ಶಾಲೆಯಲ್ಲಿ ಹತ್ತನೇ ವರ್ಗದಲ್ಲಿ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶಾಲೆಗೆ ಶೇ 100 ಫಲಿತಾಂಶ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಶಾಲೆಯ ವಿದ್ಯಾರ್ಥಿನಿಯಾದ ಸೋನು ಚಂದ್ರು ಚವಾನ ಇವರು ಶೇ 72.80 ರಷ್ಟು ಅಂಕಗಳನ್ನು ಪಡೆದು ಮುಂಬೈ ಕನ್ನಡ ಮಾಧ್ಯಮದ ರಾತ್ರಿ ಪ್ರೌಢ ಶಾಲೆಗಳಲ್ಲಿಯೇ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ. ವಿದ್ಯಾರ್ಥಿನಿಯರಾದ
ಜ್ಯೋತಿ ಡಪ್ಪಿನೂರ ಶೇ 71.20 ರಷ್ಟು ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನ ಮತ್ತು ವಿದ್ಯಾರ್ಥಿನಿ ದಿವ್ಯ ಬಾಬುರಾವ ಗುತ್ತೇದಾರ ಶೇ 57.80ರಷ್ಟು ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಸಹಕರಿಸಿದ ಪಾಲಕರಿಗೆ ಹಾಗೂ ಮಾರ್ಗದರ್ಶನ ನೀಡಿದ ಮುಖ್ಯಾಧ್ಯಾಪಕ ಮಲ್ಲಿಕಾರ್ಜುನ ಬಡಿಗೇರ ಮತ್ತು ಸಹಕರಿಸಿದ ಶಿಕ್ಷಕರ ವೃಂದದವರಿಗೆ ಮಾತೃಸಂಸ್ಥೆ ಬಿಲ್ಲವರ ಅಸೋಶಿಯೇಶನ್ ಇದರ ಅಧ್ಯಕ್ಷ ಶ್ರೀ ಹರೀಶ ಜಿ.ಅಮೀನ,ಗೌರವ ಪ್ರದಾನ ಕಾರ್ಯದರ್ಶಿ ಶ್ರೀ ಹರೀಶ. ಜಿ.ಸಾಲಿಯಾನ್, ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ರವಿ ಸನಿಲ್ ಮಾರ್ಗದರ್ಶಕರಾದ ಬನ್ನಂಜೆ ರವೀಂದ್ರ ಅಮೀನ್ ಮತ್ತು ಸರ್ವ ಪದಾಧಿಕಾರಿಗಳು ಅಭಿನಂದನೆಗಳು ಸಲ್ಲಿಸಿದ್ದಾರೆ.

ಶಾಲೆಯಲ್ಲಿ 8 ರಿಂದ 10ನೇ ವರ್ಗದವರೆಗೂ ಕಲಿಯುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ನೀಡಲಾಗುತ್ತಿದೆ. ಶೈಕ್ಷಣಿಕ ವರ್ಷ 2025-2026ರಲ್ಲಿ ಹೊಸದಾಗಿ ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ಕಲಿಕಾ ಉಪಕರಣ, ಬಸ್ಸು ಪಾಸ್, ಸಮವಸ್ತ್ರ ಒದಗಿಸಿ ಕೊಡಲಾಗುವುದು ಎಂದು ಬಿಲ್ಲವರ ಅಸೋಷಿಯೇಶನ್ ಇದರ ಗೌರವ ಪ್ರದಾನ ಕಾರ್ಯದರ್ಶಿ ಹರೀಶ. ಜಿ. ಸಾಲಿಯಾನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೋನು ಚಂದ್ರು ಚವಾನ ಶೇ 72.80 ಪ್ರಥಮ (ಎಸ್ ಎಸ್ ಸಿ ಪರೀಕ್ಷೆ)

ಜ್ಯೋತಿ ಚಂದ್ರಕಾಂತ ಡಪ್ಪಿನೂರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಶೇ 71.20 ದ್ವಿತೀಯ

ದಿವ್ಯ ಬಾಬುರಾವ ಗುತ್ತೇದಾರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಶೇ 57.80 ತೃತೀಯ



Related posts

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ

Mumbai News Desk

ಸಿ ಎ ಪರೀಕ್ಷೆ ಫಲಿತಾಂಶ 2024 ಪ್ರತೀಕ್ಷಾ ಪ್ರಕಾಶ್ ಆಚಾರ್ಯ ಉತ್ತೀರ್ಣ

Mumbai News Desk

ಹ್ಯೂಮನ್ ರೈಟ್ಸ್ ಇಂಟರ್ನ್ಯಾಷನಲ್ ಫೆಡರೇಶನ್ ಮಹಾರಾಷ್ಟ್ರ ರಾಜ್ಯ ಅಧ್ಯಕ್ಷರಾಗಿ ಪತ್ರಕರ್ತ ಯೋಗೇಶ್ ಪುತ್ರನ್ ನೇಮಕ

Mumbai News Desk

ಖ್ಯಾತ ಬಾಲಿವುಡ್ ನಟ ಮತ್ತು ನಿರ್ದೇಶಕ ಮನೋಜ್ ಕುಮಾರ್ ನಿಧನ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಪೋಷಕ   ಸದಸ್ಯರಾಗಿ ಗಣೇಶ್ ಶೆಟ್ಟಿ ತನಿಷ್ಕ, ಮತ್ತು ಹರೀಶ್ ಶೆಟ್ಟಿ ಪಡುಕುದ್ರು ಇವರು ಸೇರ್ಪಡೆ

Mumbai News Desk

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಜವಾಬ್ದಾರಿ: ಮಹಾತ್ಮ ಜ್ಯೋತಿರಾವ್ ಫುಲೆ 200ನೇ ಜನ್ಮ ದಿನಾಚರಣೆಯ ಉನ್ನತ ಮಟ್ಟದ ಸಮಿತಿಗೆ ನಾಮನಿರ್ದೇಶನ

Mumbai News Desk