30.5 C
Mumbai
June 8, 2026
Mumbai News Kannada
ಕರ್ನಾಟಕ

ಕರ್ನಾಟಕ : ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆ – ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್ ಆದೇಶ ರದ್ದುಗೊಳಿಸಿದ ಹೈಕೋರ್ಟ್





ಬೆಂಗಳೂರು : 2022ರಲ್ಲಿ ಹಳೇ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಗೊಳಿಸಿದೆ. ಇದರಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ.

ಹುಬ್ಬಳ್ಳಿ ಗಲಭೆ ಸೇರಿದಂತೆ 43 ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಅದರಂತೆ ಅಕ್ಟೋಬರ್ 2024 ರಲ್ಲಿ ಮಾಜಿ ಸಚಿವರು, ಮಾಜಿ ಶಾಸಕರು, ವಿವಿಧ ಸಂಘಟನೆಗಳ ಹೋರಾಟಗಾರರು ಮತ್ತು ಪ್ರಭಾವಿ ಸಂಸ್ಥೆಗಳಿಗೆ ಸೇರಿದ ವ್ಯಕ್ತಿಗಳ ವಿರುದ್ಧದ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಆದೇಶ ಹೊರಡಿಸಲಾಗಿತ್ತು.

ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸಿಜೆ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಹೈಕೋರ್ಟ್​ ದ್ವಿಸದಸ್ಯ ಪೀಠ ಇಂದು ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್ ವಿಷಯಕ್ಕೆ ಸಂಬಂಧಿಸಿದಂತೆ ಹಲವಾರು ಪೊಲೀಸ್ ಸಿಬ್ಬಂದಿಯ ಮೇಲೆ ಗುಂಪೊಂದು ದಾಳಿ ನಡೆಸಿ ಹಲ್ಲೆ ನಡೆಸಿದ್ದ 2022ರ ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ ಈ 43 ಪ್ರಕರಣಗಳಲ್ಲಿ ಕೆಲವು ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವಿಕೆ) ಕಾಯ್ದೆ, 1967, ಸಾರ್ವಜನಿಕ ಆಸ್ತಿ ನಾಶ ತಡೆ ಕಾಯ್ದೆ, 1984 ಮತ್ತು ಧಾರ್ಮಿಕ ಸಂಸ್ಥೆ(ದುರುಪಯೋಗ ತಡೆ) ಕಾಯ್ದೆ, 1988ರ ಅಡಿಯಲ್ಲಿ ಗಂಭೀರ ಆರೋಪಗಳನ್ನು ಹೊರಿಸಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.

ಅಕ್ಟೋಬರ್ 15, 2024 ರ ಸರ್ಕಾರಿ ಆದೇಶವು ಕ್ರಿಮಿನಲ್ ಪ್ರೊಸೀಜರ್ ಕೋಡ್ ನ ಸೆಕ್ಷನ್ 321 ರ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು. ಈ ನಿಬಂಧನೆಯು ನಿರ್ದಿಷ್ಟವಾಗಿ ಪ್ರಾಸಿಕ್ಯೂಟರ್‍ಗೆ ಮಾತ್ರ ಕಾನೂನು ಕ್ರಮದಿಂದ ಹಿಂದೆ ಸರಿಯಲು ಯಾವುದೇ ಕ್ರಮವನ್ನು ಪ್ರಾರಂಭಿಸುವ ಅಧಿಕಾರವನ್ನು ನೀಡುತ್ತದೆ. ಆದ್ದರಿಂದ, ಈ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಪ್ರಾಸಿಕ್ಯೂಟರ್‍ ನಿರ್ದೇಶನ ನೀಡುವ ಅಧಿಕಾರ ರಾಜ್ಯ ಸಚಿವ ಸಂಪುಟಕ್ಕೆ ಇಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು.

ವಾದ-ಪ್ರತಿವಾದ ಆಲಿಸಿದ ಕೋರ್ಟ್, ಸಚಿವ ಸಂಪುಟದ ಕ್ರಮ ನಿಯಮಬಾಹಿರವಾಗಿದ್ದರೆ ಒಪ್ಪುವುದಿಲ್ಲ. ಪ್ರಕರಣಗಳನ್ನು ಹಿಂಪಡೆಯಲು ಅನುಮತಿ ನೀಡುವುದಿಲ್ಲ. ಅರ್ಜಿದಾರರ ಪರ ವಕೀಲರು ಪ್ರಭಾವಿ ವ್ಯಕ್ತಿಗಳೂ ಸೇರಿದಂತೆ ಕೆಲವು ರಾಜಕಾರಣಿಗಳ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳನ್ನು ಅಪರಾಧ ದಂಡ ಸಂಹಿತೆ ಸೆಕ್ಷನ್‌ 321ಕ್ಕೆ ವಿರುದ್ಧವಾಗಿ ಸರ್ಕಾರ ಹಿಂಪಡೆದಿದೆ ಎಂದು ಹೇಳಿರುವುದು ಮೇಲ್ನೋಟಕ್ಕೆ ಸಮರ್ಥನೀಯವಾಗಿದೆ.



Related posts

ಕರ್ನಾಟಕ SSLC ಫಲಿತಾಂಶ 2026 ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ, ಉಡುಪಿ ದ್ವಿತೀಯ ಮತ್ತು ಕಲಬುರಗಿ ಕೊನೆಯ ಸ್ಥಾನ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೇಟಿ,: ಬೆಳ್ಳಿ ಹಬ್ಬ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲು ಮುಖ್ಯಮಂತ್ರಿ ಸಮ್ಮತಿ

Mumbai News Desk

ಕರ್ನಾಟಕ : ಏಪ್ರಿಲ್ 9 ರಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

Mumbai News Desk

ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ: ರಾಜ್ಯ ಸರಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

Mumbai News Desk

ಬಳ್ಳಾರಿ : ಬ್ಯಾನರ್‌ ವಿಚಾರಕ್ಕೆ ಜನಾರ್ದನ ರೆಡ್ಡಿ ಮನೆ ಮುಂದೆ ಗಲಾಟೆ; ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು

Mumbai News Desk

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಸನ್ನಿಹಿತ: ಉಪಹಾರ ಸಭೆಯಲ್ಲಿ ರಾಜೀನಾಮೆ ಘೋಷಿಸಿದ ಸಿದ್ದರಾಮಯ್ಯ

Mumbai News Desk