July 23, 2026
Mumbai News Kannada
ಸುದ್ದಿ

ಕಾರ್ಕಳ : ಹಟ್ಟಿಯಲ್ಲಿ ಬೆಂಕಿ ಅವಘಡದಲ್ಲಿ ಇಹಲೋಕ ತ್ಯಜಿಸಿದ ಕಂಬಳದ ಕೋಣಗಳು







ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯ ಹಟ್ಟಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಎರಡು ಕಂಬಳ ಕೋಣಗಳು ಅಸುನೀಗಿದ ಘಟನೆ ಮೇ 30ರಂದು ರಾತ್ರಿ ನಡೆದಿದೆ.
ಮೇಲಾಡಿ ಬಾವ ಅಶೋಕ್ ಶೆಟ್ಟಿ ಅವರಿಗೆ ಸೇರಿದ ಹಟ್ಟಿಯಲ್ಲಿ ಈ ಘಟನೆ ನಡೆದಿದ್ದು, ಹಲವಾರು ಕಂಬಳ ಕೂಟಗಳಲ್ಲಿ ಬಹುಮಾನ ಪಡೆದಿದ್ದ ಅಪ್ಪು ಮತ್ತು ತೋನ್ಸೆ ಎಂಬ ಕೋಣಗಳು ಮೃತಪಟ್ಟಿವೆ.
ಅಪ್ಪು ಮತ್ತು ತೋನ್ಸೆ ಕೋಣಗಳು 2022- 23 ಋತುವಿನ ಕಂಬಳದಲ್ಲಿ ಕನೆಹಲಗೆ ವಿಭಾಗದಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದವು. ಅದರಲ್ಲೂ ತೋನ್ಸೆ ಕೋಣವು ನೇಗಿಲು ಕಿರಿಯ, ನೇಗಿಲು ಹಿರಿಯ, ಹಗ್ಗ ಹಿರಿಯ, ಅಡ್ಡ ಹಲಗೆ, ಕನೆಹಲಗೆ ವಿಭಾಗದಲ್ಲಿ ಸ್ಪರ್ಧಿಸಿ ಎಲ್ಲಾ ವಿಭಾಗದಲ್ಲಿ ಪ್ರಶಸ್ತಿ ಪಡೆದು ಸಾಧನೆ ಮಾಡಿದೆ. ಮತ್ತೊಂದು ಕೋಣ ಅಪ್ಪು ಕನೆಹಲಗೆ ಮತ್ತು ಅಡ್ಡ ಹಲಗೆ ವಿಭಾಗದಲ್ಲಿ ಸಾಧನೆ ಮಾಡಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗುತಿದೆ. ಅದೆಷ್ಟೋ ಕಂಬಳ ಕರೆಗಳಲ್ಲಿ ಓಡಿ ಪ್ರಶಸ್ತಿಗೆ ಕೊರಳೋಡಿದ್ದ ಕೋಣಗಳೆರಡು ಯಾರೂ ಊಹಿಸದ ರೀತಿಯಲ್ಲಿ ಇಹಲೋಕ ತ್ಯಜಿಸಿದ್ದು ಒಂದು ದುರಂತ.



Related posts

ಮೂಲತ್ವ ಫೌಂಡೇಶನ್ ಚಾರಿಟಬಲ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ

Mumbai News Desk

ರೋಮ್‌ನಲ್ಲಿ ಪ್ರಧಾನಿ ಮೋದಿಯಿಂದ ಮೆಲೋನಿಗೆ ‘ಮೆಲೊಡಿ’ ಚಾಕೊಲೇಟ್ ಉಡುಗೊರೆ: ಜಾಗತಿಕ ಮಟ್ಟದಲ್ಲಿ ಭಾರಿ ವೈರಲ್ ಆದ ಸಿಹಿ ರಾಜತಾಂತ್ರಿಕತೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಭಾಭವನ ನಿರ್ಮಾಣಕ್ಕೆ ಸಹಕಾರ ರತ್ನ ಡಾ.ಎಂ. ಎನ್. ರಾಜೇಂದ್ರ ಕುಮಾರ್ ಸಹಕಾರ

Mumbai News Desk

ತೀಯಾ ಬೆಳಕು ಮಾಜಿ ಸಂಪಾದಕ ಶ್ರೀಧರ್ ಸುವರ್ಣ ಅವರಿಗೆ ಮಾತೃ ವಿಯೋಗ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿ ವೈದ್ಯಕೀಯ, ಮನೆ ನಿರ್ಮಾಣಕ್ಕೆ ಸಹಾಯ ಧನದ ಹಸ್ತಾoತರ.

Mumbai News Desk

ಪುಷ್ಪ 2 ಯಶಸ್ಸಿನ ಬೆನ್ನಲ್ಲೇ ನಟ ಅಲ್ಲು ಅರ್ಜುನ್ ಬಂಧನ, ಅಭಿಮಾನಿಗಳು ಶಾಕ್

Mumbai News Desk