30.5 C
Mumbai
June 8, 2026
Mumbai News Kannada
ಸುದ್ದಿ

  ’ಕಾಂತಾರ ಚಾಪ್ಟರ್ 1’ ಸೆಟ್​​ನಲ್ಲಿ ಮತ್ತೊಂದು ಭಾರಿ ಅವಘಡ, ರಿಷಬ್ ಶೆಟ್ಟಿ ಸಹಿತ 30 ಜನ ಸಹಕಲಾವಿದರುಅಪಾಯದಿಂದ ಪಾರು





ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಈ ಸಿನಿಮಾದ ಚಿತ್ರೀಕರಣದ ವೇಳೆ ಒಂದರ ಹಿಂದೊಂದರಂತೆ ಅವಘಡಗಳು ಸಂಭವಿಸುತ್ತಲೇ ಇವೆ. ಸಿನಿಮಾನಲ್ಲಿ ನಟಿಸಿದ್ದ ಮೂವರು ಈಗಾಗಲೇ ಪ್ರಾಣ ಬಿಟ್ಟಿದ್ದಾರೆ.
ಎರಡು ದಿನಗಳ ಹಿಂದೆ ಸಹ ಕಲಾವಿದ ವಿಜು ವಿಕೆ ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಇದೀಗ ಚಿತ್ರೀಕರಣದ ವೇಳೆ ದೋಣಿ ಮಗುಚಿ ಬಿದ್ದ ಘಟನೆ ನಡೆದಿದೆ.
ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ‘ಕಾಂತಾರ’-1 ಚಿತ್ರದ ಕೊನೆ ಹಂತದ ಚಿತ್ರೀಕರಣ ನಡೆಯುತ್ತಿದೆ. ಶನಿವಾರ ಚಿತ್ರೀಕರಣ ನಡೆಯುತ್ತಿದ್ದ ವೇಳೆ ರಿಷಬ್ ಶೆಟ್ಟಿ ಸೇರಿ 30 ಜನ ಕಲಾವಿದರಿದ್ದ ದೋಣಿ ಇದ್ದಕ್ಕಿದ್ದಂತೆ ಮಗುಚಿ ಬಿದ್ದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಕಲಾವಿದರು, ತಂತ್ರಜ್ಞರು ಎಲ್ಲರೂ ಈಜಿ ದಡ ಸೇರಿದ್ದಾರೆ. ಬೋಟ್‌ನಲ್ಲಿದ್ದವರು ಬಚಾವಾದರೂ ಕ್ಯಾಮೆರಾ ಇನ್ನಿತರೆ ಸೆಟ್ ಪ್ರಾಪರ್ಟಿಗಳು ನೀರು ಪಾಲಾಗಿದೆ ಎಂದು ತಿಳಿದುಬಂದಿದೆ.

ಘಟನೆ ಬೆನ್ನಲ್ಲೇ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಸಲಾಗಿದ್ದು, ಒಂದರ ಹಿಂದೆ ಒಂದರಂತೆ ಘಟನೆ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಚಿತ್ರತಂಡ ಇದೀಗ ಭಯಭೀತಗೊಂಡಿದೆ ಎನ್ನಲಾಗಿದೆ. ಈ ಹಿಂದೆ ರಿಷಬ್‌ ಶೆಟ್ಟಿಗೆ ಮಂಗಳೂರಿನ ಕದ್ರಿ ಬಾರೆಬೈಲ್‌ ಪಂಜುರ್ಲಿ ದೈವ ಎಚ್ಚರಿಕೆ ನೀಡಿತ್ತು. ಅದರ ಬೆನ್ನಲ್ಲೇ ಮತ್ತಷ್ಟು ಅವಘಡಗಳ ಸಂಭವಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.



Related posts

ತೆಂಕು ತಿಟ್ಟು ಯಕ್ಷಗಾನದ ಅಗ್ರಮಾನ್ಯ ಭಾಗವತರಾದ ದಿನೇಶ್ ಅಮ್ಮಣ್ಣಾಯರು ಇನ್ನಿಲ್ಲ

Mumbai News Desk

ಕರ್ನಾಟಕ : ದಕ್ಷಿಣ ಕನ್ನಡ ಜಿಲ್ಲೆಯಿಂದ ಹಿಂದೂ ಮುಖಂಡ ಅರುಣ್ ಪುತ್ತಿಲ ಅವರಿಗೆ ಗಡಿಪಾರು ನೋಟಿಸ್

Mumbai News Desk

ಯುಎಇ ಬಂಟ್ಸ್ ಸಂಘದ ವತಿಯಿಂದ ನಡೆದ”ದುಬೈದ ಬಂಟೆರ್ನ ಆಟಿಡೊಂಜಿ ದಿನ”

Mumbai News Desk

ಭಾರತ್ ಬ್ಯಾಂಕ್‌ ನ ಗೋರೆಗಾಂವ್ ಶಾಖೆಯ ಗಣೇಶ್ ಪೂಜಾರಿ ಸೇವಾ ನಿವೃತ್ತಿ

Mumbai News Desk

ಮಂಗಳೂರಿನಲ್ಲಿ ಕುಲಾಲ ಭವನ ಲೋಕಾರ್ಪಣೆ: ಸಮಾಜ ಬಾಂಧವರ ಕನಸು ನನಸು

Mumbai News Desk

ಮಂತ್ರಾಲಯದ ಬಳಿ ಭೀಕರ ರಸ್ತೆ ಅಪಘಾತ: ಚಿಕ್ಕಬಳ್ಳಾಪುರದ ಎಂಟು ಭಕ್ತರ ದುರ್ಮರಣ

Mumbai News Desk