
ಡೊಂಬಿವಲಿ ಜೂ .25: ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಅಶ್ರಯದಲ್ಲಿ ಬಂಟ್ಸ್ ಹೆಲ್ತ್ ಕೇರ್ ಸಮಿತಿ ಮತ್ತು ಪ್ರಾದೇಶಿಕ ಸಮಿತಿಯ ಯುವ ವಿಭಾಗದ ವತಿಯಿಂದ ಜೂನ್ 29 ರ ಭಾನುವಾರ ಬೆಳಿಗ್ಗೆ 9.00 ಗಂಟೆಯಿಂದ ಅಜ್ದೆಪಾಡ ಶ್ರೀ ಅಯ್ಯಪ್ಪ ದೇವಸ್ಥಾನದ ಸುಧರ್ಮ ಸಭಾಗೃಹದಲ್ಲಿ ಚಿದಾನಂದ ಬ್ಲಡ್ ಬ್ಯಾಂಕ್ ನ ಸಂಯೋಗದೊಂದಿಗೆ ರಕ್ತದಾನ ಶಿಬಿರ, ಉಚಿತ ಅರೋಗ್ಯ ಶಿಬಿರ, ಹೃದಯ ಶ್ವಾಸಕೋಶದ ಪುನರುಜ್ಜೀವನದ ಬಗ್ಗೆ ( ಸಿ.ಪಿ.ಅರ್ ) ( ಡಾ. ವಿ.ಎಮ್. ಶೆಟ್ಟಿ, ಡಾ. ಸಂದೀಪ್ ದವೆ, ಡಾ ಮಕರಂದ ಪಾಟೀಲ್ ಹಾಗೂ ಖ್ಯಾತ ಅರಿವಳಿಕೆ ತಜ್ನೆ ಡಾ. ಶ್ರುತಿ ಪತ್ಕಿಯವರಿಂದ ವಿಶೇಷ ತರಬೇತಿ ನೀಡುವ ವಿಶಿಷ್ಟ ಕಾರ್ಯಕ್ರಮ ಯುವ ವಿಭಾಗದ ಮೂಲಕ ಜರಗಲಿದೆ.
ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಅನಂದ ಡಿ. ಶೆಟ್ಟಿ ಎಕ್ಕಾರ್ ಇವರ ಮುಂದಾಳುತ್ವದಲ್ಲಿ ನಡೆಯುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷರಾದ ಪ್ರವೀಣ್ ಬಿ. ಶೆಟ್ಟಿಯವರ ವಹಿಸಲಿದ್ದಾರೆ, ಬಂಟ್ಸ್ ಹೆಲ್ತ್ ಕೇರ್ ಸಮಿತಿಯ ಕಾರ್ಯಾಧ್ಯಕ್ಷ ಡಾ. ಸ್ವರೂಪ್ ಹೆಗ್ಡೆ, ಬಂಟರ ಸಂಘ ಪೂರ್ವ ವಿಭಾಗ ಪ್ರಾದೇಶಿಕ ಸಮಿತಿಗಳ ಸಂಘಟಕ ಸುಕುಮಾರ್ ಎನ್. ಶೆಟ್ಟಿ, ಬಂಟರ ಸಂಘ ಯುವ ವಿಭಾಗದ ಕಾರ್ಯಾಧ್ಯಕ್ಷ ಸವೀನ್ ಜೆ. ಶೆಟ್ಟಿ, ಪ್ರಾದೇಶಿಕ ಸಮಿತಿ ಹೆಲ್ತ್ ಕೇರ್ ಸಮಿತಿಯ ಕಾರ್ಯಾಧ್ಯಕ್ಷ ಡಾ. ವಿ.ಎಂ. ಶೆಟ್ಟಿ, ಪ್ರಾದೇಶಿಕ ಸಮಿತಿಯ ಯುವ ವಿಭಾಗದ ಕಾರ್ಯಾಧ್ಯಕ್ಷ ಪ್ರಜ್ವಲ್ ಬಿ. ಶೆಟ್ಟಿ ಉಪಸ್ಥಿತರಿರುವರು.
ಈ ಬೃಹತ್ ರಕ್ತದಾನ ಶಿಬಿರ ಮತ್ತು ಆರೋಗ್ಯ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯ ತುಳು – ಕನ್ನಡಿಗರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿ ಗೊಳಿಸ ಬೇಕೆಂದು ಬಂಟರ ಸಂಘ ಮುಂಬಯಿ ಇದರ ಉಪಾಧ್ಯಕ್ಷರಾದ ಮಹೇಶ್ ಎಸ್. ಶೆಟ್ಟಿ, ಗೌ.ಪ್ರ ಕಾರ್ಯದರ್ಶಿ ಡಾ. ಆರ್.ಕೆ. ಶೆಟ್ಟಿ, ಗೌ.ಪ್ರ ಕೋಶಾಧಿಕಾರಿ ಸಿಎ ರಮೇಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಗಿರೀಶ್ ಅರ್. ಶೆಟ್ಟಿ ತೆಲ್ಲಾರ್, ಜೊತೆ ಕೋಶಾಧಿಕಾರಿ ಶಶಿಧರ ಕೆ. ಶೆಟ್ಟಿ ಇನ್ನಂಜೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಿತ್ರಾ ಅರ್. ಶೆಟ್ಟಿ, ಹಾಗೂ ಪ್ರಾದೇಶಿಕ ಸಮಿತಿಯ ಸಂಚಾಲಕರಾದ ಕಲ್ಲಡ್ಕ ಕರುಣಾಕರ ವಿ.ಶೆಟ್ಟಿ, ಉಪ ಕಾರ್ಯಾಧ್ಯಕ್ಷ ಪ್ರಭಾಕರ ಅರ್. ಶೆಟ್ಟಿ, ಕಾರ್ಯದರ್ಶಿ ಹೇಮಂತ ಎಸ್. ಶೆಟ್ಟಿ, ಕೋಶಾಧಿಕಾರಿ ಸಚಿನ್ ಕೆ. ಶೆಟ್ಟಿ, ಜೊತೆ ಕಾರ್ಯದರ್ಶಿ ಜಯಂತ್ ಜೆ. ಶೆಟ್ಟಿ, ಜೊತೆ ಕೋಶಾಧಿಕಾರಿ ಪ್ರಭಾಕರ್ ವಿ. ಶೆಟ್ಟಿ ಕಲ್ಲಡ್ಕ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಯೋಗಿನಿ ಎಸ್. ಶೆಟ್ಟಿ, ಯುವ ವಿಭಾಗದ ಉಪ ಕಾರ್ಯಾಧ್ಯಕ್ಷ ಭರತ್ ಕೆ. ಶೆಟ್ಟಿ, ಕಾರ್ಯದರ್ಶಿ ವಿಕ್ಷೀತ ವಿ. ಶೆಟ್ಟಿ, ಕೋಶಾಧಿಕಾರಿ ಬೀನಾ ಅರ್. ಶೆಟ್ಟಿ, ಜೊತೆ ಕಾರ್ಯದರ್ಶಿ ಕಾರ್ತಿಕ್ ಶೆಟ್ಟಿ, ಜೊತೆ ಕೋಶಾಧಿಕಾರಿ ಮೋಹಿತ್ ಬಿ. ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.




