ಮುಂಬಯಿ ಜು11. ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಮತ್ತು ಸ್ವಾದಿ ಮಾತೆ ಶ್ರೀ ಮಾತಾನಂದಮಯಿ ಅವರು ಇದೇ ಬರುವ ಜುಲೈ 16ರಂದು ಮುಂಬಯಿಗೆ ಆಗಮಿಸಲಿದ್ದು. ಮುಂಬಯಿಯ ಹಾಗೂ ಥಾಣೆಯ ಉಪನಗರಗಳಲ್ಲಿ ಜುಲೈ 27 ರವರೆಗೆ ಉಪಸ್ಥಿತರಿದು ಭಕ್ತರಿಗೆ ಆಶೀರ್ವಚನ ನೀಡಲಿರುವರು. ಈ ಸಂದರ್ಭದಲ್ಲಿ ಮುಂಬಯಿಯ ಹಾಗೂ ಉಪನಗರದ ವಿವಿಧ ಕಡೆಗಳಲ್ಲಿ ಸ್ವಾಮೀಜಿಯವರ ಗುರುವಂದನಾ ಕಾರ್ಯಕ್ರಮ ಹಾಗೂ ಸಾರ್ವಜನಿಕ ಆಶೀರ್ವಚನ ಕಾರ್ಯಕ್ರಮವು ಜರಗಲಿರುದು.
ಈ ಕಾರ್ಯಕ್ರಮಗಳ ಸಂಪೂರ್ಣ ವಿವರ ವಿರುವ ಆಮಂತ್ರಣ ಪತ್ರಿಕೆಯನ್ನು ಜುಲೈ 8ರಂದು ಸಯನ್ ಶ್ರೀ ನಿತ್ಯಾನಂದ ಸಭಾ ಗೃಹದಲ್ಲಿ ಮುಂಬಯಿಯ ಗುರುಭಕ್ತರು ಶ್ರೀ ಗುರುದೇವ ಸೇವಾ ಬಳಗ ಮುಂಬಯಿ ಮಹಾರಾಷ್ಟ್ರ ಘಟಕ ಸಮಿತಿಯು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಗುರುದೇವ ಸೇವಾ ಬಳಗ ಮುಂಬಯಿಯ ಅಧ್ಯಕ್ಷರಾದ ದಾಮೋದರ ಶೆಟ್ಟಿ, ನೆರೂಳ್, ಕಾರ್ಯದರ್ಶಿ ಪೇಟೆಮನೆ ಪ್ರಕಾಶ್ ಶೆಟ್ಟಿ, ಕೋಶಾಧಿಕಾರಿ ರವೀಂದ್ರ ಶೆಟ್ಟಿ, ಶ್ರೀ ಗುರುದೇವ ಸೇವಾ ಬಳಗ ಮುಂಬಯಿ ಮಹಾರಾಷ್ಟ್ರ ಘಟಕ ಇದರ ಬೆಳ್ಳಿ ಹಬ್ಬ ಆಚರಣೆ ಸಮಿತಿಯ ಅಧ್ಯಕ್ಷರಾದ ನ್ಯಾಯವಾದಿ ಕೆಪಿ ಪ್ರಕಾಶ್ ಎಲ್ ಶೆಟ್ಟಿ, ಉದ್ಯಮಿ ಚಂದ್ರಹಾಸ ರೈ, ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಮಹಾರಾಷ್ಟ್ರ ಇದರ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಶ್ವೇತಾ ಚಂದ್ರಹಾಸ ರೈ,ಗುರುದೇವ ಸೇವಾ ಬಳಗ ಯುವ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ಅಧಿಪ್ ಕೆ ಶೆಟ್ಟಿ, ಹಾಗೂ ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕದ ಸದಸ್ಯರು ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಜರಗಿದ ಪೂರ್ವಭಾವಿ ಸಭೆಯಲ್ಲಿ ಶ್ರೀಗಳ ಸಾರ್ವಜನಿಕ ಆಶೀರ್ವಚನ ಕಾರ್ಯಕ್ರಮ ಹಾಗೂ ಗುರುವಂದನಾ ಕಾರ್ಯಕ್ರಮಗಳನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಬೇಕು ಗುರುಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಮತ್ತು ಇದೇ ಸಂದರ್ಭದಲ್ಲಿ ನಡೆಯುವ ಬೆಳ್ಳಿಯ ಸಮಾರಂಭವನ್ನು ಅತ್ಯಂತ ವಿಜ್ರಂಭಣೆಯಿಂದ ನಡೆಸಬೇಕು ಎಂದು ಅಧ್ಯಕ್ಷರು ನುಡಿದರು.




