ಜು. 20 : ಸಯಾನ್ ನ ಶ್ರೀ ನಿತ್ಯಾನಂದ ಸಭಾಗ್ರಹದಲ್ಲಿ
ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಗೆ ಗುರುವಂದನೆ.
ಮುಂಬಯಿ, ಜು. 18. ಶ್ರೀ ಗುರುದೇವದತ್ತ ಸಂಸ್ಥಾನಮ್, ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಜು. 20 ರವಿವಾರ ಬೆಳಗ್ಗೆ 11.30ರಿಂದ ಸಯಾನ್ ಪಶ್ಚಿಮದ ಮುಖ್ಯ ಅಧ್ಯಾಪಕ ಭವನದ ಸ್ವಾಮಿ ನಿತ್ಯಾನಂದ ಸಭಾಗೃಹದಲ್ಲಿ ಗುರು ವಂದನೆ ನಡೆಯಲಿದೆ.
ಭಜನೆ, ಪಾದುಕಾ ಪೂಜೆ, ಆಶೀರ್ವಚನ ಬಳಿಕ ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ ನಡೆಯಲಿದೆ.
ಈ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮುಂಬಯಿ, ಮಹಾರಾಷ್ಟ್ರ ಘಟಕದ ಅಧ್ಯಕ್ಷ ಪದಾಧಿಕಾರಿಗಳು, ಸಮಿತಿಯ ಸದಸ್ಯರು ಮತ್ತು ರಜತ ಮಹೋತ್ಸವ ಸಮಿತಿ ಅಧ್ಯಕ್ಷರು, ಸದಸ್ಯರು, ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಮುಂಬಯಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸಮಿತಿಯ ಸದಸ್ಯರು, ಒಡಿಯೂರು ಶ್ರೀ ಸೇವಾ ಬಳಗ ಮುಂಬಯಿ ಸದಸ್ಯರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ 9892435643
B. Dinesh Kulal
Mob.: 9821868674




