July 23, 2026
Mumbai News Kannada
ಸುದ್ದಿ

ತುಳು ರಂಗಭೂಮಿ ಹಿರಿಯ ಕಲಾವಿದ, ಚಲನ ಚಿತ್ರ ನಟ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ







ತುಳು ರಂಗಭೂಮಿ ಹಿರಿಯ ಕಲಾವಿದ, ಚಲನಚಿತ್ರ ನಟ ಚಿ.ರಮೇಶ್ ಕಲ್ಲಡ್ಕ ಅವರು ಇಂದು (ಜು. 23) ಹೃದಯಾಘಾತದಿಂದ ನಿಧನರಾಗಿದ್ದಾರೆ, ಅವರಿಗೆ 68 ವರ್ಷ ವಯಸ್ಸಾಗಿತ್ತು.

ರಂಗಭೂಮಿಯಲ್ಲಿ 30 ವರ್ಷಕ್ಕೂ ಹೆಚ್ಚು ಕಲಾಸೇವೆಯನ್ನು ಸಲ್ಲಿಸಿರುವ ರಮೇಶ್ ಕಲ್ಲಡ್ಕ ಕಳೆದ 20 ವರ್ಷಗಳಿಂದ ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರ ಕಲಾಸಂಗಮದಲ್ಲಿ ಕಲಾವಿದರಾಗಿ ಕಲಾಸೇವೆ ಮಾಡುತ್ತಿದ್ದರು. ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರ ಗರಡಿಯಲ್ಲಿ ಪಳಗಿದ ರಮೇಶ್ ಕಲ್ಲಡ್ಕ ಅವರು ಕಲಾಸಂಗಮದ ಎಲ್ಲ ಸಾಮಾಜಿಕ, ಪೌರಾಣಿಕ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಅದರಲ್ಲೂ “ಶಿವದೂತಗುಳಿಗೆ” ನಾಟಕದ ಭೀಮಾರಾವ್ ಪಾತ್ರ ಅವರಿಗೆ ಹೆಸರು, ಹೊಸ ಇಮೇಜನ್ನು ತಂದು ಕೊಟ್ಟಿದೆ. ಶಿವಾಜಿ ನಾಟಕದಲ್ಲೂ ಅವರು ನಿರ್ವಹಿಸಿದ ದಾದ ಕೊಂಡೆಯ ಪಾತ್ರ ಗಮನ ಸಳೆದಿತ್ತು.

ಸೌಮ್ಯ ಸ್ವಭಾವದ ರಮೇಶ್ ಕಲ್ಲಡ್ಕ ಅವರು ರಂಗಭೂಮಿಯಲ್ಲಿ ಶಿಸ್ತಿನ ಕಲಾವಿದರಾಗಿ ಗುರುತಿಸಿಕೊಂಡಿದ್ದರು. ಕಲಾಸಂಗಮದ ಮೂಲಕ ಮುಂಬೈ, ಬೆಂಗಳೂರು ಸಹಿತ ಬೇರೆ-ಬೇರೆ ಊರುಗಳಲ್ಲಿ ನಾಟಕ ಪ್ರದರ್ಶನ ನೀಡಿ ಜನಪ್ರಿಯತೆ ಸಂಪಾದಿಸಿದ್ದರು.

1957ರ ಏಪ್ರಿಲ್​​ನಲ್ಲಿ ಜನಿಸಿದ ಚಿ.ರಮೇಶ್ ಕಲ್ಲಡ್ಕ, ಶಾಂತಾರಾಮ ಕಲ್ಲಡ್ಕ ಅವರ ಮಿತ್ರಬಳಗ ಕಲಾತಂಡದ ಮೂಲಕ ತನ್ನ ರಂಗಪಯಣವನ್ನು ಕಿರಿ ವಯಸ್ಸಿನಲ್ಲೇ ಆರಂಭಿಸಿದ್ದರು. ಬಳಿಕ ಶಾಂತಾರಾಮ ಕಲ್ಲಡ್ಕ ಅವರ ತುಳುವಪ್ಪೆ ಜೋಕುಲು ಕಲಾಬಳಗದಲ್ಲೂ ತೊಡಗಿಸಿಕೊಂಡ ರಮೇಶ್, ತುಳು ವೃತ್ತಿ ರಂಗಭೂಮಿ ಪ್ರವೇಶಿಸಿದರು. ನಂತರ, ಕಲ್ಲಡ್ಕದಲ್ಲಿ ‘ಮೈತ್ರಿ ಕಲಾವಿದರು’ ತಂಡ ಸ್ಥಾಪಿಸಿ, ಕಲ್ಲಡ್ಕ ಶಾರದೋತ್ಸವದಲ್ಲಿ ತಂಡದ ನಾಟಕ ‌ಪ್ರದರ್ಶಿಸುತ್ತಿದ್ದರು.

ವಿಜಯ ಕುಮಾರ್ ಕೊಡಿಯಾಲ್ ಬೈಲ್ ಅವರ ಕಲಾಸಂಗಮ ತಂಡದಲ್ಲಿ ಸುದೀರ್ಘ ಕಾಲ ತನ್ನ ವೃತ್ತಿ ಪಯಣ ನಡೆಸಿದ ಅವರು ಆ ತಂಡದ ಹಿರಿಯ ಹಾಗೂ ಪ್ರಮುಖ ಕಲಾವಿದರಾಗಿದ್ದರು.
ಒರಿಯರ್ದೊರಿ ಅಸಲ್, ಮದಿಮೆ ಸಹಿತ ಕೊಡಿಯಾಲ್ ಬೈಲ್ ಅವರ ಜನಪ್ರಿಯ ತುಳು ನಾಟಕಗಳಲ್ಲಿ ರಮೇಶ್ ಅವರು ಗಮನ ಸೆಳೆದಿದ್ದರೆ, ಇತ್ತೀಚಿನ ಶಿವದೂತಗುಳಿಗೆ, ಶಿವಾಜಿ ನಾಟಕಗಳು ಅವರಿಗೆ ಹೆಚ್ಚಿನ ಜನಪ್ರಿಯತೆ ತಂದುಕೊಟ್ಟಿತ್ತು. ಸಾಮಾಜಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿದ್ದ ಅವರು ಕಲ್ಲಡ್ಕ ಪರಿಸರದ ಶಾರದೋತ್ಸವ ಸಮಿತಿ ಸಹಿತ ವಿವಿಧ ಸಂಘ, ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಶಾರದೋತ್ಸವ ಸಮಿತಿಯ ಸ್ಥಾಪಕ ಟ್ರಸ್ಟಿಯಾಗಿದ್ದರು.



Related posts

ಪಾಣೆಮಂಗಳೂರಲ್ಲಿ ಶ್ರೀನಿವಾಸ ಸಾಫಲ್ಯ ದಂಪತಿಗೆ ಸನ್ಮಾನ 

Mumbai News Desk

ಅವಧಿಗೂ ಮೊದಲೇ ಮುಂಬೈಗೆ ಮಾನ್ಸೂನ್ ಪ್ರವೇಶ : 107 ವರ್ಷಗಳ ದಾಖಲೆ ಮುರಿದ ಮಳೆ.

Mumbai News Desk

ವೆಂಕಪ್ಪ ನಾರಾಯಣ ಶೆಟ್ಟಿ ನಿಧನ.

Mumbai News Desk

ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರ ಬ್ಯಾಗ್ ಕಳವು: ಗೋವಾದ ಮಡಗಾಂವ್ ನಿಲ್ದಾಣದಲ್ಲಿ ಘಟನೆ

Mumbai News Desk

ಕಾರ್ಕಳ : ಬಿಜೆಪಿಯ ಹಿರಿಯ ಮುಖಂಡ, ಖ್ಯಾತ ನ್ಯಾಯವಾದಿ ಎಂ. ಕೆ. ವಿಜಯ್ ಕುಮಾರ್ ನಿಧನ

Mumbai News Desk

ಬೊಯಿಸರ್ ಪಶ್ಚಿಮದ ಶ್ರೀ ಗಣೇಶ ಅಯ್ಯಪ್ಪ ಮಂದಿರದಲ್ಲಿ ಪೂಜಾ ಕಾರ್ಯಕ್ರಮ ಸಂಪನ್ನ.

Mumbai News Desk