
ಹೆಜಮಾಡಿ ಕೋಡಿಕರೆ ಬಿಲ್ಲವ ಸಮಿತಿಯ ವಾರ್ಷಿಕ ಮಹಾಸಭೆ, ಸಮಿತಿಯ ಅಧ್ಯಕ್ಷರಾದ ಸಂಜೀವ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ಜುಲೈ 20ರಂದು ಶ್ರೀ ಸತ್ಯನಾರಾಯಣ ಮಂದಿರದಲ್ಲಿ ಜರಗಿತು.
ಕಾರ್ಯದರ್ಶಿ ಚೆನ್ನಪ್ಪ ಸುವರ್ಣ ಸ್ವಾಗತಿಸಿ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ವಸಂತ್ ಕುಮಾರ್ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು.ಇದೇ ಸಂದರ್ಭದಲ್ಲಿ ಮೂಲ್ಕಿ ನಗರಸಭೆಯ ಅಧ್ಯಕ್ಷರಾಗಿ ಆಯ್ಕೆಯಾದ ಹೆಜಮಾಡಿ ಕೋಡಿ ದೊಡ್ಡ ಮನೆ ಸತೀಶ್ ಅಂಚನ್ ಅವರನ್ನು ಸನ್ಮಾನಿಸಲಾಯಿತು .
ಬಳಿಕ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಶೇಕಡ 90ಕ್ಕಿಂತ ಹೆಚ್ಚಿನ ಅಂಕ ಪಡೆದ ಸಮಾಜದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಹೆಜಮಾಡಿ ಬಿಲ್ಲವ ಸಂಘದ ಮಹಿಳಾ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಲಾವಣ್ಯ ಪ್ರಭೋದ್ ಅವರನ್ನು ಸನ್ಮಾನಿಸಲಾಯಿತು. ವಿದ್ಯಾನಿಧಿಗೆ ಹೆಜಮಾಡಿ ದೊಡ್ಡ ಮನೆ ಸರೋಜಿನಿ ಗೋಪಾಲ ಡಿ ಮುಲ್ಕಿ ಸ್ಮರಣಾರ್ಥ ರೂಪಾಯಿ 1 ಲಕ್ಷ ನೀಡಿದ ಅವರ ಮಕ್ಕಳನ್ನು ಸನ್ಮಾನಿಸಲಾಯಿತು. ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಉಪಾಧ್ಯಕ್ಷ ಪ್ರಮೋದ್ ಚಂದ್ರ ಹೆಜಮಾಡಿ, ಮಹಿಳಾ ಮಂಡಳಿಯ ಅಧ್ಯಕ್ಷೇ ಶಶಿಕಲ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೆಸರ ದಯಾನಂದ ಹೆಜಮಾಡಿ, ಹಿರಿಯರಾದ ದಾಮೋದರ್ ಬಂಗೇರ, ಜಿನ ರಾಜ್ ಬಂಗೇರ, ಸುಭಾಷ್ ಜಿ ಸಾಲಿಯನ್, ದೇವರಾಜ್ ಅಂಚನ್, ಹೇಮಚಂದ್ರ ಮುಲ್ಕಿ, ಸದಾನಂದ ಬಂಗೇರ, ವಿಠ್ಠಲ್ ಎಂ ಅಮೀನ್, ಶಿವರಾಮ್ ಜಿ ಅಮೀನ್, ಮುಂತಾದವರು ಉಪಸ್ಥಿತರಿದ್ದರು.
ಅಧ್ಯಕ್ಷತೆ ವಹಿಸಿದ ಸಂಜೀವ ಜೆ ಕೋಟ್ಯಾನ್ ಸಹಕರಿಸಿದ ಎಲ್ಲರನ್ನು ಸ್ಮರಿಸಿದರು. ಕಾರ್ಯದರ್ಶಿ ಚೆನ್ನಪ್ಪ ಸುವರ್ಣ ವಂದಿಸಿದರು, ಧೀರಜ್ ಹೆಜ್ಮಾಡಿ ಕಾರ್ಯಕ್ರಮ ನಿರೂಪಿಸಿದರು.




