ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜತೆ ಪವಿತ್ರಾ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ಆದೇಶ ಇಂದು ಹೊರಬಿದ್ದಿದೆ. ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ನ ಜಸ್ಟೀಸ್ ಜೆ.ಬಿ.ಪರ್ದಿವಾಲಾ, ಜಸ್ಟೀಸ್ ಮಹದೇವನ್ ಪೀಠವು ಈ ಮಹತ್ವದ ತೀರ್ಪು ನೀಡಿದೆ.
ಈ ಕೊಲೆ ಪ್ರಕರಣದಲ್ಲಿ ಎ1 ಪವಿತ್ರಾಗೌಡ, ಎ2 ದರ್ಶನ್, ಎ6 ಜಗದೀಶ್ ಅಲಿಯಾಸ್ ಜಗ್ಗ, ಎ7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೋಶ್ , ಎ11 ನಾಗರಾಜು ಅಲಿಯಾಸ್ ನಾಗ, ಎ12 ಲಕ್ಷ್ಮಣ್ ಜಾಮೀನು ರದ್ದು ಪಡಿಸಲಾಗಿದೆ.
ಮೃತ ರೇಣುಕಾಸ್ವಾಮಿ ಆರೋಪಿ ದರ್ಶನ್ ಅಭಿಮಾನಿಯಾಗಿದ್ದ. ಆರೋಪಿ ದರ್ಶನ್ ಜೊತೆ ಪವಿತ್ರಗೌಡ ಲಿವ್-ಇನ್ ಸಂಬಂಧದಲ್ಲಿದ್ದರು. ರೇಣುಕಾ ಪವಿತ್ರಾಗೆ ಇನ್ಸ್ಟಾದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ. ರೇಣುಕಾಸ್ವಾಮಿಯನ್ನ ಅಪಹರಿಸಿ, ಶೆಡ್ನಲ್ಲಿ ಕೊಲೆ ಮಾಡಿದ್ದರು. ಆರೋಪಿಗಳು ಕೊಲೆ ಆದ ಸ್ಥಳದಲ್ಲಿದ್ದರು ಎಂಬುದು ತನಿಖೆಯಲ್ಲಿ ಬಯಲಾಗಿದೆ. ಕಿಡ್ನ್ಯಾಪ್ ವೇಳೆ, ಕೊಲೆ ಸ್ಥಳದಲ್ಲಿ ಆರೋಪಿಗಳಿದ್ದಿದ್ದು ತಿಳಿದು ಬಂದಿದೆ.




