September 6, 2026
Mumbai News Kannada
ಸುದ್ದಿ

ನಟ ದರ್ಶನ್‌ ಸೇರಿ 7 ಆರೋಪಿಗಳ ಜಾಮೀನು ರದ್ದು, ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ





ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜತೆ ಪವಿತ್ರಾ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್​ ರದ್ದುಪಡಿದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ಆದೇಶ ಇಂದು ಹೊರಬಿದ್ದಿದೆ. ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​ನ ಜಸ್ಟೀಸ್ ಜೆ.ಬಿ.ಪರ್ದಿವಾಲಾ, ಜಸ್ಟೀಸ್ ಮಹದೇವನ್​ ಪೀಠವು ಈ ಮಹತ್ವದ ತೀರ್ಪು ನೀಡಿದೆ.

ಈ ಕೊಲೆ ಪ್ರಕರಣದಲ್ಲಿ ಎ1 ಪವಿತ್ರಾಗೌಡ, ಎ2 ದರ್ಶನ್, ಎ6 ಜಗದೀಶ್ ಅಲಿಯಾಸ್ ಜಗ್ಗ, ಎ7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೋಶ್ , ಎ11 ನಾಗರಾಜು ಅಲಿಯಾಸ್ ನಾಗ, ಎ12 ಲಕ್ಷ್ಮಣ್ ಜಾಮೀನು ರದ್ದು ಪಡಿಸಲಾಗಿದೆ.

ಮೃತ ರೇಣುಕಾಸ್ವಾಮಿ ಆರೋಪಿ ದರ್ಶನ್ ಅಭಿಮಾನಿಯಾಗಿದ್ದ. ಆರೋಪಿ ದರ್ಶನ್ ಜೊತೆ ಪವಿತ್ರಗೌಡ ಲಿವ್-ಇನ್ ಸಂಬಂಧದಲ್ಲಿದ್ದರು. ರೇಣುಕಾ ಪವಿತ್ರಾಗೆ ಇನ್​ಸ್ಟಾದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ. ರೇಣುಕಾಸ್ವಾಮಿಯನ್ನ ಅಪಹರಿಸಿ, ಶೆಡ್​​​ನಲ್ಲಿ ಕೊಲೆ ಮಾಡಿದ್ದರು. ಆರೋಪಿಗಳು ಕೊಲೆ ಆದ ಸ್ಥಳದಲ್ಲಿದ್ದರು ಎಂಬುದು ತನಿಖೆಯಲ್ಲಿ ಬಯಲಾಗಿದೆ. ಕಿಡ್ನ್ಯಾಪ್ ವೇಳೆ, ಕೊಲೆ ಸ್ಥಳದಲ್ಲಿ ಆರೋಪಿಗಳಿದ್ದಿದ್ದು ತಿಳಿದು ಬಂದಿದೆ.



Related posts

ಮಲಾಡ್: ನಡಿಕೆರೆ ಕೃಷ್ಣ ಶೆಟ್ಟಿ ನಿಧನ

Mumbai News Desk

ಮುಂಬಯಿ : ಕರ್ನಾಟಕ ಬ್ಯಾಂಕ್ ನ ಹಿರಿಯ ಸಿಬ್ಬಂದಿ ನಾರಾಯಣ ಮೊಗವೀರ ಅವರ ಬೀಳ್ಕೊಡುವ ಸಮಾರಂಭ

Mumbai News Desk

ಪತ್ರಕರ್ತ ರೋನ್ಸ್ ಬಂಟ್ವಾಳ್ ಅವರಿಗೆ ಪಿತೃ ವಿಯೋಗ.

Mumbai News Desk

ಮುಂಬಯಿಯಲ್ಲಿ ಜರಗಲಿರುವ ಶ್ರೀ ವಿಶ್ವಪ್ರಸನ್ನ ತೀರ್ಥರ ಜನ್ಮವರ್ದಂತಿ ಬಗ್ಗೆ ಪೂರ್ವಭಾವಿ ಸಭೆ.

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (30/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಕರ್ನಾಟಕದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮುಂಬೈಯಲ್ಲಿ ಚಿಣ್ಣರ ಬಿಂಬದ ವತಿಯಿಂದ ಪ್ರಕಾಶ ಭಂಡಾರಿ ಅವರಿಂದ ಗೌರವ.

Mumbai News Desk