32 C
Mumbai
March 7, 2026
Mumbai News Kannada
ಸುದ್ದಿ

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ





ಸೌಜನ್ಯ ಪರ ಹೋರಾಟಗಾರ ಮಹೇಶ್​ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಉಡುಪಿಯ ಬ್ರಹ್ಮಾವರ ಪೊಲೀಸರು ಬೆಳ್ತಂಗಡಿಗೆ ಆಗಮಿಸಿ  ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆಪಡೆದಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ದಾಖಲಾದ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆಯಲಾಗಿದೆ.  ಎಎಸ್ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ಅರೆಸ್ಟ್​ ಮಾಡಿ ಕರೆದುಕೊಂಡು ಹೋಗಿದ್ದಾರೆ.
ತಿಮರೋಡಿ ವಿರುದ್ಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಉಡುಪಿಯಿಂದ ಭಾರೀ ಬಂದೋಬಸ್ತ್ ನೊಂದಿಗೆ ಆಗಮಿಸಿದ ಪೊಲೀಸರು ಉಜಿರೆ ಸಮೀಪದ ಮನೆಯಿಂದ ತಿಮರೋಡಿ ಅವರನ್ನು ವಶಕ್ಕೆ ಪಡೆದುಕೊಂಡರು. ಉಡುಪಿ ಜಿಲ್ಲೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ . ಈ ವೇಳೆ ಮಾತನಾಡಿದ ತಿಮರೋಡಿ, ಸುಳ್ಳು ಕೇಸ್ ಮಾಡಿ ವಶಕ್ಕೆ ಪಡೆದಿದ್ದಾರೆ. ಬಿಜೆಪಿಯವರ ಸುಳ್ಳು ದಾಖಲೆ. ಬಿಜೆಪಿಯವರ ಪಾಪದ ಕೂಸು, ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ. ಸ್ಟೇಷನ್ ನಲ್ಲಿ ಪೊಲೀಸ್ರಿಗೆ ಹೇಳಿಕೆ ಕೊಡುತ್ತೇನೆ. ಸರಿಯಾದ ನ್ಯಾಯ ಕೊಡಿಸುತ್ತೇನೆ ಎಂದು ಹೇಳಿದ್ದಾರೆ. ಖಾಸಗಿ ವಾಹನದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹೋಗಿದ್ದು, ಇವರಿಗೆ ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ಕೂಡಾ ಸಾಥ್ ನೀಡಿದ್ದಾರೆ.

ತಿಮರೋಡಿ ಮೇಲೆ ಫೇಸ್​​ಬುಕ್​ ಪೇಜ್​ನಲ್ಲಿ ಬಿ.ಎಲ್ .ಸಂತೋಷ್ ಅವರನ್ನು ತೇಜೋವಧೆ ಮಾಡಿದ ಆರೋಪ ಇದೆ. ಅಲ್ಲದೇ ಹಿಂದೂ ಧರ್ಮದ ನಾಯಕನ ನಿಂದನೆ ಮಾಡಿ ಧರ್ಮ ಸಮುದಾಯಗಳ ನಡುವೆ ವೈಮನಸ್ಸಿನ ಉಂಟು ಮಾಡಿದ ಹಿನ್ನೆಲೆ ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷ ರಾಜೀವ್ ಕುಲಾಲ್ ಎಂಬುವರು ದೂರು ದಾಖಲಿಸಿದ್ದರು. ಬ್ರಹ್ಮವಾರ ಪೊಲೀಸ್ ಠಾಣೆಯಲ್ಲಿ ಯುಎಸ್​ 196(1), 352, 353 (2), ಬಿಎನ್​ಎಸ್​ನಂತೆ ಪ್ರಕರಣ ದಾಖಲು ಮಾಡಲಾಗಿದೆ.



Related posts

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ.

Mumbai News Desk

ಸಿ.ಎಮ್.ಎ. ಪರೀಕ್ಷೆಯಲ್ಲಿ ಸೃಷ್ಟಿ ಹಳೆಯಂಗಡಿಗೆ ದೇಶದಲ್ಲೇ 21 ನೇ ಶ್ರೇಣಿ ರಾಷ್ಟ್ರಪತಿಯಿಂದ ಪ್ರಮಾಣ ಪತ್ರ ಸ್ವೀಕಾರ

Mumbai News Desk

ಬೋಂಬೆ ಬಂಟ್ಸ್ ಅಸೋಷಿಯೇಶನ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಡಿ ಕೆ ಶೆಟ್ಟಿ ಆಯ್ಕೆ

Mumbai News Desk

ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

Mumbai News Desk

ಮುಲ್ಕಿ ಬಪ್ಪನಾಡು ದುರ್ಗಾಪರಮೇಶ್ವರಿಯ ಸನ್ನಿಧಾನದಲ್ಲಿ ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರಿಗೆ ಮಾತೃ ಶ್ರೀ ಗೆ ನುಡಿ ನಮನ,

Mumbai News Desk

ಮೀರಾ ಡಹಾಣೂ ಬಂಟ್ಸ್ (ರಿ) . ವಾರ್ಷಿಕ ಟರ್ಫ್ ಫುಟ್ ಬಾಲ್ ಟೂರ್ನಮೆಂಟ್.

Mumbai News Desk