32 C
Mumbai
March 7, 2026
Mumbai News Kannada
ತುಳುನಾಡು

ಇತಿಹಾಸ ಪ್ರಸಿದ್ಧ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನಕ್ಕೆ ನೂತನ ಆಡಳಿತ ಮುಕ್ತೇಸರರಾಗಿ ಚಂದ್ರಶೇಖರ ಬೆಳ್ಚಡ ಆಯ್ಕೆ





ಮುಂಬಯಿ: ಈ ವರ್ಷ ಬ್ರಹ್ಮಕಲಶೋತ್ಸವವು ನಡೆಯಲಿರುವ ಇತಿಹಾಸ ಪ್ರಸಿದ್ಧ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ನೂತನ ಆಡಳಿತ ಮುಕ್ತೇಸರರಾಗಿ ತೀಯಾ ಸಮಾಜ ಮುಂಬಯಿಯ ಮಾಜಿ ಅಧ್ಯಕ್ಷರೂ ಹಾಗೂ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಉಪಾಧ್ಯಕ್ಷರೂ ಆಗಿರುವ ಶ್ರೀ ಚಂದ್ರಶೇಖರ ಬೆಳ್ಚಡ, ಕಟೀಲು ಅವರು ಆಯ್ಕೆಯಾಗಿದ್ದಾರೆ. ಹಾಗೆಯೇ, ಆಡಳಿತ ಸಮಿತಿಯ ಉಪಾಧ್ಯಕ್ಷರಾಗಿ ಉಡುಪಿ ಜಿಲ್ಲೆಯ ಪಂದಿಬೆಟ್ಟು ಮೂಲದ ಉದ್ಯಮಿ ಹಾಗೂ ಸಮಾಜ ಸೇವಕ ಶ್ರೀ ವಿಶ್ವನಾಥ ಬೆಳ್ಚಡ, ಮುಂದಿಬೆಟ್ಟು, ಉಡುಪಿ ಇವರನ್ನು ಆಯ್ಕೆ ಮಾಡಲಾಗಿದೆ.

​ಈ ಆಯ್ಕೆಯನ್ನು ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವಾಮನ್ ಇಡ್ಯಾ ಹಾಗೂ ಕ್ಷೇತ್ರದ ಪ್ರಧಾನ ಅರ್ಚಕರು ಮತ್ತು ಅನುವಂಶಿಕ ಮುಕ್ತೇಸರರೂ ಆಗಿರುವ ಶ್ರೀ ಶ್ರೀನಿವಾಸ (ಅಪ್ಪು ಪೂಜಾರಿ) ಅವರು ಅಧಿಕೃತವಾಗಿ ಘೋಷಿಸಿದ್ದಾರೆ.

​ಸಸಿಹಿತ್ಲು ಶ್ರೀ ಭಗವತೀ ಕ್ಷೇತ್ರದಲ್ಲಿ ಮಾರ್ಚ್ 4 ರಿಂದ 8 ರವರೆಗೆ ಬ್ರಹ್ಮಕಲಶ, ಏಪ್ರಿಲ್ 10 ರಂದು ನಡಾವಳಿ ಮಹೋತ್ಸವ ಮತ್ತು ಏಪ್ರಿಲ್ 11 ರಿಂದ ಒಂದು ವಾರಗಳ ಕಾಲ ಭರಣಿ ಮಹೋತ್ಸವವು ನಡೆಯಲಿದೆ. ನೂತನ ಆಡಳಿತ ಮುಕ್ತೇಸರ ಹಾಗೂ ಉಪಾಧ್ಯಕ್ಷರ ಸಮರ್ಥ ಮುಂದಾಳತ್ವದಲ್ಲಿ ಈ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಲಿವೆ ಎಂದು ಎಳೂರ ಗುರಿಕಾರರು ಹಾಗೂ ದೇವಸ್ಥಾನದ ಟ್ರಸ್ಟಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು: ಮೂರನೇ ಸ್ಥನ್ಯಪಾನ ಕೊಠಡಿ ಉದ್ಘಾಟನೆ

Mumbai News Desk

*ಕಲಾ ಸಾಧನ ಸಂಸ್ಥೆ ಸಮರ್ಪಿಸಿದ ಸ್ವರದಾರ ಸಂಗೀತ ಹಬ್ಬ, ಸಂಗೀತ ಆರೋಗ್ಯಕ್ಕೆ ಔಷಧಿ ಇದ್ದಂತೆ;: ಐಕಳ ಹರೀಶ್ ಶೆಟ್ಟಿ*

Mumbai News Desk

ಉಳ್ಳೂರು: ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 19ನೇ ವರ್ಧಂತಿ ಮಹೋತ್ಸವ ಸಂಪನ್ನ

Mumbai News Desk

ಉಡುಪಿ : ಮನೆಯಲ್ಲಿ ಅಗ್ನಿ ಅವಘಡ, ಮನೆಯ ಯಜಮಾನ ಮೃತ್ಯು.

Mumbai News Desk

ಉದ್ಯಮಿ ಮನೋಹರ ಎಸ್ ಶೆಟ್ಟಿ ದಂಪತಿಗಳಿಗೆ : ಕಾಪು ಬಂಟರ ಸಂಘದಿಂದ ಸನ್ಮಾನ

Mumbai News Desk

ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕಿ ಮತ್ತು ನಟಿ ರೂಪ ಐಯ್ಯರ್ : ನವದುರ್ಗಾ ಲೇಖನ ಯಜ್ಞ ಸಂಕಲ್ಪ

Mumbai News Desk