September 6, 2026
Mumbai News Kannada
ಸುದ್ದಿ

ಕನ್ನಡ ಸಂಘ ಬಹರೈನ್‌ಗೆ ಒಂದು ಕೋಟಿ ರೂಪಾಯಿಗಳ ಅನುದಾನ – ಮುಖ್ಯಮಂತ್ರಿಗಳ ಅನುಮೋದನೆ





ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸನ್ಮಾನ್ಯ ಬಸವರಾಜ ಹೊರಟ್ಟಿ ಅವರ ವಿಶೇಷ ಶಿಫಾರಸಿನ ಮೇರೆಗೆ, ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಎಂ. ಸಿದ್ಧರಾಮಯ್ಯ ಅವರು ಕನ್ನಡ ಸಂಘ ಬಹರೈನ್‌ಗೆ ಒಂದು ಕೋಟಿ ರೂಪಾಯಿಗಳ ಅನುದಾನವನ್ನು ಅಧಿಕೃತವಾಗಿ ಅನುಮೋದಿಸಿದ್ದಾರೆ.

ಈ ಸಂದರ್ಭದಲ್ಲಿ ಸಭಾಪತಿ ಶ್ರೀ ಬಸವರಾಜ ಹೊರಟ್ಟಿ, ಹಾಗೂ ನಿನ್ನೆ ತಾನೇ ವಿಧಾನ ಪರಿಷತ್ತಿನ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ, ಅನಿವಾಸಿ ಭಾರತೀಯ ಸಮಿತಿ – ಕರ್ನಾಟಕ ಇದರ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರ ಉಪಸ್ಥಿತಿಯಲ್ಲಿ, ಸಂಘದ ಅಧ್ಯಕ್ಷ ಅಜಿತ್ ಬಂಗೇರ ಅವರು ಮುಖ್ಯಮಂತ್ರಿಗಳಿಗೆ ಅನುದಾನಕ್ಕಾಗಿ ಮನವಿ ಸಲ್ಲಿಸಿದರು.

ಇಂದು, ಕನ್ನಡ ಸಂಘದ ಅಧ್ಯಕ್ಷ ಅಜಿತ್ ಬಂಗೇರ ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಕರ್ನಾಟಕ ಸರಕಾರದ ಅನುದಾನ ನಿಧಿಯಿಂದ ಬಿಡುಗಡೆ ಮಾಡಲು ಅನುಮತಿ ನೀಡಿದ್ದಾರೆ.

ಇತ್ತೀಚೆಗೆ ಕನ್ನಡ ಸಂಘ ಕಟ್ಟಡ ಸಮುಚ್ಚಯ – “ವಿದೇಶದಲ್ಲಿ ನಿರ್ಮಿತ ಪ್ರಥಮ ಕನ್ನಡ ಭವನ” ವನ್ನು ಭೇಟಿ ಮಾಡಿದ ಸಂದರ್ಭದಲ್ಲಿ, ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಆರೋಗ್ಯ ಸಚಿವ ಶ್ರೀ ದಿನೇಶ್ ಗುಂಡೂರಾವ್ ಅವರು ಸಂಘದ ಮೂಲಭೂತ ಅಗತ್ಯಗಳು ಮತ್ತು ಅಭಿವೃದ್ಧಿ ಕಾರ್ಯಗಳಿಗಾಗಿ ಧನಸಹಾಯ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದ್ದರು.

ಮುಖ್ಯಮಂತ್ರಿಗಳ ಈ ಅನುಮೋದನೆಯೊಂದಿಗೆ, ಕನ್ನಡ ಸಂಘ ಬಹರೈನ್ ತನ್ನ ಮೂಲಸೌಕರ್ಯ, ಅಭಿವೃದ್ಧಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸಲು ಮಹತ್ವದ ನೆರವನ್ನು ಪಡೆಯಲಿದೆ ಹಾಗೂ ಸಂಘದ ಅಧ್ಯಕ್ಷರು ಅಜಿತ್ ಬಂಗೇರ ಅವರು ವೈಯಕ್ತಿಕವಾಗಿ ಹಾಗೂ ಬಹರೈನ್ ಕನ್ನಡಿಗರ ಪರವಾಗಿ ‌ಕೃತಜ್ಞತೆ ಸಲ್ಲಿಸಿದರು.



Related posts

ಲೇಖಕ,ಪ್ರಸಿದ್ಧ ರಂಗ ನಟ   ಸುಂದರ ಮೂಡಬಿದ್ರಿ ಯವರಿಗೆಅಮೂಲ್ಯ   ಪತ್ರಿಕೆ ಯ  ಬೆಳ್ಳಿ ಹಬ್ಬದ ವಿಶೇಷ  ಸನ್ಮಾನ

Mumbai News Desk

ತುಂಬು ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.

Mumbai News Desk

ಮುಂಬೈ: ದಿಶಾ ಸಾಲ್ಯಾನ್ ಸಾವು ಪ್ರಕರಣ- ಆದಿತ್ಯ ಠಾಕ್ರೆ, ಬಾಲಿವುಡ್ ನಟರು, ಮಾಜಿ ಪೊಲೀಸ್ ಅಧಿಕಾರಿ ವಿರುದ್ಧ ಹೊಸ ದೂರು

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (02/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವ ಸಂಪನ್ನ

Mumbai News Desk

ಪಳ್ಳಿ “ಫಿಶ್ ಮೀಲ್“ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ, ತಹಶೀಲ್ದಾರ್ ರಿಂದ ಸೂಕ್ತ ಕ್ರಮದ ಭರವಸೆ.

Mumbai News Desk